Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*
  • *ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*
  • *ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ : ಪ್ರಗತಿಪರ ಕೃಷಿಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ : ಪ್ರಗತಿಪರ ಕೃಷಿಕರಿಗೆ ಸನ್ಮಾನ*

ಆಗಷ್ಟ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಾರ್ಕಳ ಆ.6 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕ್ರಿಯೇಟಿವ್ ಕೆಸರ್ಡೊಂಜಿ ದಿನ’ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮ ನಡೆಯಿತು. ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ನಡೆದ ನಡೆದ ಕಾರ್ಯಕ್ರಮವನ್ನು ಬೆಂಗಳೂರು ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿದರು. “ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ”ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಡಾ.ಗಣನಾಥ ಶೆಟ್ಟಿ. ಬಿ. ಪ್ರಾಸ್ತಾವಿಕ ಮಾತನಾಡಿ, ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸಿದರು. ಸರ್ವರನ್ನು ಸ್ವಾಗತಿಸಿದರು. ಸ್ಥಳ ದಾನಿ ಯೋಗೀಶ್ ಕಿಣಿ, ಶಿಕ್ಷಕರು, ಸ.ಕಿ.ಪ್ರಾ ಶಾಲೆ ಪಲಾಯಿ ಬಾಕ್ಯಾರು, ತೆಳ್ಳಾರು ಸಭೆಯನ್ನು ಉದ್ದೇಶಿಸಿ “ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳಿಗೆ ಕ್ರೀಡೆ, ಮಣ್ಣು, ಪ್ರಕೃತಿಯ ಸಂಪರ್ಕ ಕಡಿಮೆ ಆಗುತ್ತಿದೆ. ಇಂತಹ ಕೆಸರ್ಡೊಂಜಿ ದಿನ ಕಾರ್ಯಕ್ರಮಗಳು ಮಕ್ಕಳಿಗೆ ನೈಜ ಅನುಭವಗಳನ್ನು ನೀಡುವ ಮೂಲಕ ಪ್ರಕೃತಿಯೊಂದಿಗೆ ಅವರ ಸಂಬಂಧವನ್ನು ಪುನರ್ ಸ್ಥಾಪಿಸುತ್ತದೆ” ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಎಂ.ಕೆ.ಆದರ್ಶ ಹಾಗೂ ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಉದ್ಯಮಿಗಳಾದ ಸರ್ವೋತ್ತಮ ಕಡಂಬರವರು ಈ ಕಾರ್ಯಕ್ರಮದ ತಾತ್ಪರ್ಯವನ್ನು ಹಂಚಿಕೊಂಡರು. ಹಿರ್ಗಾನ ಗ್ರಾಮದ ಪ್ರಗತಿಪರ ಕೃಷಿಕರಾದ ಸತ್ಯನಾರಾಯಣ ಪಡ್ರೆ, ಸದಾನಂದ ಶೆಟ್ಟಿಗಾರ್, ವಿಠಲ್ ನಾಯಕ್ ಅವರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭಕ್ಕೆ ಆಗಮಿಸಿದ ಎಲ್ಲರಿಗೂ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಖಾದ್ಯಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. :: ಸಮಾರೋಪ :: ಅಪರಾಹ್ನ ಸಮಾರೋಪ ಕಾರ್ಯಕ್ರಮ ಜರುಗಿತು. ಸಹ ಸಂಸ್ಥಾಪಕರಾದ ಎಸ್.ಎಲ್.ಅಶ್ವತ್ ಆಗಮಿಸಿದ ಸರ್ವರನ್ನು ಸ್ವಾಗತಿಸುತ್ತ ಕಾರ್ಯಕ್ರಮ ಯಶಸ್ವಿಗೆ ಕಾರಣರಾದ ಎಲ್ಲರನ್ನು ಸ್ಮರಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥಾಪಕರಾದ ವಿಮಲ್ ರಾಜ್. ಜಿ. ಅವರು, “ಗ್ರಾಮೀಣ ಜೀವನ ಶೈಲಿಯು ಪಾಠ ಪುಸ್ತಕದ ಹೊರಗಿನ ಶಿಕ್ಷಣವನ್ನು ನೀಡುತ್ತದೆ. ಆಧುನಿಕ ದಿನಚರಿಯಲ್ಲಿ ಮಕ್ಕಳಿಗೆ ಶಾರೀರಿಕ ಚಟುವಟಿಕೆ ಕಡಿಮೆಯಾಗಿದೆ. ಆದರೆ ಈ ಕೆಸರಿನ ಆಟಗಳು ಕೇವಲ ಮನರಂಜನೆ ಮಾತ್ರವಲ್ಲ, ಶಕ್ತಿಯ ಪೂರಕವೂ ಹೌದು” ಎಂದು ನುಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ನವೀನ್ ಚಂದ್ರ ಶೆಟ್ಟಿ, ಅಧ್ಯಕ್ಷರು, ರೋಟರಿ ಕ್ಲಬ್, ಕಾರ್ಕಳ ಮತ್ತು ನಿರ್ದೇಶಕರು, ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್, ಕಾರ್ಕಳ ಇವರು “ನಮ್ಮ ಬಾಳಿನಲ್ಲಿ ಮಣ್ಣು ಎಂಬುದು ಅತ್ಯಂತ ಪ್ರಾಥಮಿಕ ಅಂಶ. ಮಣ್ಣಿನ ಜೊತೆ ನಮ್ಮ ಸಂಬಂಧ ಗಟ್ಟಿಯಾಗಿರಬೇಕೆಂದರೆ ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯ “ಎಂದರು. ಇನ್ನೋರ್ವ ಅತಿಥಿ ಂಡಿ. ಸುನಿಲ್ ಕುಮಾರ್. ಜಿ. “ಕಲಿಕೆ ಎಂದರೆ ಪಾಠ ಮಾತ್ರವಲ್ಲ. ಅನುಭವವೂ ಕೂಡ. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಶಿಸ್ತು, ಸಹಕಾರ ಮತ್ತು ಆತ್ಮವಿಶ್ವಾಸವನ್ನು ಕಲಿಯುತ್ತಾರೆ ಎಂದು ಅತಿಥಿ ನುಡಿಗಳನ್ನಾಡಿದರು. ಸಂಸ್ಥಾಪಕರಲ್ಲಿ ಓರ್ವರಾದ ವಿದ್ವಾನ್ ಗಣಪತಿ ಭಟ್, ಹಿರಿಯರೂ, ಉದ್ಯಮಿಗಳೂ ಆಗಿರುವ ಜಗದೀಶ್ ರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಎಲ್ಲಾ ಅತಿಥಿವರೇಣ್ಯರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅತಿಥಿಗಳಾದ ಚೇತನ್, ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ., ಆದರ್ಶ ಎಂ.ಕೆ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಬೋಧಕ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕರಾದ ಲೋಹಿತ್ ಎಸ್.ಕೆ ಹಾಗೂ ಪ್ರಿಯಾಂಕ ತೀರ್ಥರಾಮ ರವರು ಕಾರ್ಯಕ್ರಮ ನಿರ್ವಹಿಸಿಕೊಟ್ಟರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK  ಮಾ.6 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ…

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.