Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎದೆಹಾಲು ಸಹಕಾರಿ : ಡಾ.ಮಧುಸೂದನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎದೆಹಾಲು ಸಹಕಾರಿ : ಡಾ.ಮಧುಸೂದನ್

ಆಗಷ್ಟ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.6 NEWS DESK : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳ ವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ 2 ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಕುಡಿಸುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‌ಸಿಹೆಚ್ ಅಧಿಕಾರಿ ಡಾ.ಮಧುಸೂದನ್ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎದೆಹಾಲಿನ ಮಹತ್ವ ಕುರಿತು ಆ.1 ರಿಂದ 7 ರವರೆಗೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ. ಎದೆ ಹಾಲಿನ ಮಹತ್ವ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದರು ಸಹ ಮೂಡನಂಬಿಕೆಗೆ ಒಳಗಾಗುವುದು ತಪ್ಪುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಕ್ಕಳ ಬೆಳವಣಿಗೆಗೆ ಎದೆ ಹಾಲು ಅತ್ಯಮೂಲ್ಯವಾಗಿದೆ. ಎದೆ ಹಾಲಿನ ಮಹತ್ವ ಕುರಿತು ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ 6 ತಿಂಗಳ ಒಳಗಿನ ಮಕ್ಕಳಿಗೆ ನಾಟಿ ಔಷಧಿ ಸೊಪ್ಪಿನ ರಸ ಕುಡಿಸಿ ಉಸಿರಾಟದ ತೊಂದರೆಯಾಗಿ ಸಾವನ್ನಪ್ಪುತ್ತಿರುವುದು ಕಂಡುಬರುತ್ತಿದೆ ಎಂದು ಡಾ.ಮಧುಸೂದನ್ ಮಾಹಿತಿ ನೀಡಿದರು. ಕಳೆದ ಮೂರು ತಿಂಗಳಲ್ಲಿ ಒಂದು ವರ್ಷದೊಳಗಿನ 31 ಮಕ್ಕಳು ವಿವಿಧ ಕಾರಣಗಳಿಂದ ಸಾವನಪ್ಪಿರುವುದು ಕಂಡು ಬಂದಿದೆ ಎಂದು ಡಾ.ಮಧುಸೂದನ ವಿವರಿಸಿದರು. ಕಾಂಗಾರು ಮದರ್ ಕೇರ್ ಬಗ್ಗೆ ಮಾಹಿತಿ ನೀಡಿ ಆರು ತಿಂಗಳವರೆಗೆ ಎದೆ ಹಾಲನ್ನು ಮಾತ್ರವೇ ಕುಡಿಸಿ ಮತ್ತು ಎರಡು ವರ್ಷದವರೆಗೆ ಪೂರಕ ಆಹಾರದೊಂದಿಗೆ ಎದೆ ಹಾಲನ್ನು ಮುಂದುವರಿಸಿ, ಇದರಿಂದ ಅಪೌಷ್ಟಿಕತೆ ನಿಮೋನಿಯಾ ಅತಿಸಾರ ಬೇಧಿ ತಡೆಗಟ್ಟುವಲ್ಲಿ ಹೆಚ್ಚಿನ ಪಾತ್ರ ವಹಿಸುತ್ತದೆ ಎಂಬ ಜ್ಞಾನಿಕ ಮಾಹಿತಿಯನ್ನು ನೀಡಿದರು. ನವಜಾತ ಶಿಶು ಮರಣ, ಶಿಶು ಮರಣ, ಚಿಕ್ಕ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ತನ್ಯಪಾನವು ಮಹತ್ತರವಾದ ಪಾತ್ರವಹಿಸುತ್ತದೆ ಎಂದು ತಿಳಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಅವರು ಮಾತನಾಡಿ, ಎದೆಹಾಲು ಉಣಿಸುವುದು ಒಂದು ಸಹಜ ಪ್ರಕ್ರಿಯೆಯಾಗಿದ್ದರೂ ಸಾಂಸ್ಥಿಕ ಹೆರಿಗೆಗಳು ಜಾಸ್ತಿ ಆಗುತ್ತಿದ್ದರು ಎದೆಹಾಲು ಕುಡಿಸುವವರ ಪ್ರಮಾಣ ಕಡಿಮೆಯಾಗುತ್ತಿದೆ ಎಂದರು. ತಾಯಿಯ ಹಾಲು ಅಮೃತಕ್ಕೆ ಸಮಾನ ಅದೇ ಅಮೃತ ಸಮಾನವಾದ ಸ್ತನ್ಯಪಾನವನ್ನು ಮಾತೆಯರು ಸರಿ ಪ್ರಮಾಣದಲ್ಲಿ ಸರಿಯಾದ ರೀತಿಯಲ್ಲಿ ಸ್ತನ್ಯಪಾನ ಮಾಡಿಸಬೇಕು ಎಂದರು. ತಾಯಿಯ ಹಾಲಿನ ಮಹತ್ವವನ್ನು ಎತ್ತಿ ತೋರಿಸುವ ಸದುದ್ದೇಶವಾಗಿದೆ. ತಾಯಿಯ ಹಾಲನ್ನು ರಕ್ಷಿಸಿ ಪ್ರೋತ್ಸಾಹಿಸಲು ಬೆಂಬಲಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ತಾಯಿಯು ತನ್ನ ಇಚ್ಛೆಯಂತೆ ಎದೆ ಹಾಲುಣಿಸಲು ಅಗತ್ಯವಾದ ಸಮಗ್ರ ಮಾಹಿತಿಯನ್ನು ವೈದ್ಯಕೀಯ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮುಖಾಂತರ ಮಾಹಿತಿಯನ್ನು ರವಾನಿಸಿದರು. ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಎಲ್ಲ ವಿಭಾಗದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕವನ ಸ್ಪರ್ಧೆಯನ್ನು ಏರ್ಪಡಿಸಿ ಮಕ್ಕಳ ವಿಭಾಗದ ವತಿಯಿಂದ ಬಹುಮಾನವನ್ನು ವಿತರಿಸಲಾಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಸ್ವಾಗತಿಸಿ, ನಿರೂಪಿಸಿದರು. ಶುಶ್ರೂಷಕ ಅಧಿಕ್ಷಕರಾದ ವೀಣಾ, ಅಸೋಸಿಯೇಟ್ ಪ್ರೊಫೆಸರ್ ಶ್ರೀ ಗುರುಪಾದ, ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಮತಿ, ಕೇರ್ ಕಂಪನಿಯನ್ ಪ್ರೋಗ್ರಾಮ್ ವತಿಯಿಂದ ನಾಗೇಶ್ ಮತ್ತು ಪ್ರಶಾಂತ್, ಆರೋಗ್ಯ ಇಲಾಖೆಯ ಮತ್ತು ಮಕ್ಕಳ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.