Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ ಉದ್ಘಾಟನೆ : ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ ಉದ್ಘಾಟನೆ : ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 7, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.7 NEWS DESK : ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕೃತಿ ಮತ್ತು ಕ್ರೀಡಾ ಅಸೋಷಿಯೇಷನ್ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ನಡೆದ “ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ಜನರು ಹಿಂದಿನಿಂದಲೂ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಕೃಷಿ ಜೊತೆಗೆ ಕಲೆ, ಸಂಸ್ಕೃತಿ, ಭಾಷೆ ಉಳಿಸಿ ಬೆಳೆಸಿಕೊಂಡು ಬಂದಿದ್ದು, ಅದನ್ನು ಮುಂದಿನ ಪೀಳಿಗೆಗೂ ತಿಳಿಸುವಂತಾಗಬೇಕು ಎಂದು ಸಲಹೆ ನೀಡಿದರು. ಆಟ್‍ಪಾಟ್ ಜೊತೆಗೆ ಸಂಸ್ಕೃತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಜವಾಬ್ದಾರಿಯಿದ್ದು, ಈ ಬಗ್ಗೆ ಗಮನಹರಿಸುವಂತೆ ಎ.ಎಸ್.ಪೊನ್ನಣ್ಣ ಅವರು ಸಲಹೆ ನೀಡಿದರು. ಕೊಡವ ಭಾಷಿಕ ಜನರ ಸಾಹಿತ್ಯ, ಸಂಸ್ಕೃತಿ, ಕಲೆಗಳು ಇಡೀ ವಿಶ್ವದಲ್ಲಿಯೇ ಮಾದರಿಯಾಗಿದ್ದು, ಗೌರವಿಸುತ್ತಾರೆ ಎಂಬುದನ್ನು ಯಾರೂ ಸಹ ಮರೆಯಬಾರದು. ಕೊಡಗಿನ ಸಂಸ್ಕೃತಿ ಬಗ್ಗೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಮೆಚ್ಚುಗೆ ಇದ್ದು, ಅಷ್ಟರ ಮಟ್ಟಿಗೆ ಶ್ರೀಮಂತಿಕೆ ಹೊಂದಿದೆ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಎಲ್ಲಾ ಕೊಡವ ಭಾಷಿಕರ ಕರ್ತವ್ಯವಾಗಿದೆ ಎಂದರು.’ ಕೊಡವ ಭಾಷಿಕ ಸಂಸ್ಕೃತಿಯು ವಿಭಿನ್ನತೆ ಹೊಂದಿದ್ದು, ಎಲ್ಲೆಡೆ ಗಮನಸೆಳೆಯುತ್ತದೆ. ಅದನ್ನು ಅರ್ಥ ಮಾಡಿಕೊಂಡು ಮತ್ತಷ್ಟು ಕೊಡವ ಸಂಸ್ಕೃತಿ, ಪರಂಪರೆ ಮತ್ತು ಕಲೆಗಳನ್ನು ಔನ್ನತ್ಯಕ್ಕೆ ಕೊಂಡೊಯ್ಯಬೇಕು. ಆ ನಿಟ್ಟಿನಲ್ಲಿ ಅಕಾಡೆಮಿಯ ಎಲ್ಲರೂ ಶ್ರಮಿಸಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ರಾಷ್ಟ್ರದಲ್ಲಿ 140 ಕೋಟಿ ಜನಸಂಖ್ಯೆ ಹೆಚ್ಚಿದೆ. ಆದರೆ ಕೊಡವ ಭಾಷಿಕ ಜನಾಂಗದವರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಆದರೂ ಸಹ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಮತ್ತು ಮಾಡುತ್ತಿರುವುದನ್ನು ಮರೆಯುವಂತಿಲ್ಲ ಎಂದು ಶಾಸಕರು ತಿಳಿಸಿದರು. ಬಹು ವರ್ಷಗಳ ನಂತರ ಭಾರತ ಮುಖ್ಯ ಹಾಕಿ ತಂಡಕ್ಕೆ ಜಿಲ್ಲೆಯ ಚಂದೂರ ಬಿ.ಪೂವಣ್ಣ ಆಯ್ಕೆಯಾಗಿರುವುದು ವಿಶೇಷವಾಗಿದೆ ಎಂದು ಇದೇ ಸಂದರ್ಭದಲ್ಲಿ ಎ.ಎಸ್.ಪೊನ್ನಣ್ಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರ ಅಕಾಡೆಮಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದು, ಅಕಾಡೆಮಿಯ ಎಲ್ಲರೂ ಒಟ್ಟುಗೂಡಿ ತಂಡವಾಗಿ ಉತ್ತಮ ಕಾರ್ಯಕ್ರಮ ಆಯೋಜಿಸಿಕೊಂಡು ಹೋಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ಮಾತನಾಡಿ ಕೊಡವ ಭಾಷಿಕ 21 ಮೂಲ ಜನಾಂಗದವರು ಕೃಷಿ ಭೂಮಿಯನ್ನು ಪೂಜಿಸಿಕೊಂಡು ಬದುಕು ನಡೆಸುತ್ತಿದ್ದಾರೆ. ಕೊಡವ ಭಾಷಿಕರಿಗೆ ಭೂಮಿ, ತೋಟ, ಬಾಣೆಯು ಪಾರಂಪರಿಕವಾಗಿ ಬಂದಿದ್ದು, ಇದನ್ನು ಉಳಿಸಿಕೊಂಡು ಬರಬೇಕು. ಕಾವೇರಿ ಸಂಕ್ರಮಣ, ಭೂಮಿತಾಯಿ ಪೂಜಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಹಿಂದಿನ ಕೃಷಿ ಪದ್ಧತಿಯನ್ನು ಉಳಿಸಿಕೊಂಡು ಕೊಡವ ಭಾಷಿಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಗ್ರಾ.ಪಂ.ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಷಿಯೇಷನ್ ಅಧ್ಯಕ್ಷರಾದ ಬಾಚಮ್ಮಂಡ ಲವ ಚಿಣ್ಣಪ್ಪ, ನಾಪೋಕ್ಲು ಕಾಫಿ ಪ್ಲಾಂಟರ್ ಬಿದ್ದಾಟಂಡ ಜೀವನ ತಿಮ್ಮಯ್ಯ, ಬಿದ್ದಾಟಂಡ ಕುಟುಂಬದ ಅಧ್ಯಕ್ಷರಾದ ಕಾರ್ಯಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ಎಸ್.ತಮ್ಮಯ್ಯ, ಕೃಷಿಕರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ, ಕಲಿಯಂಡ ಸಂಪನ್ ಸೋಮಣ್ಣ, ಕುಡಿಯರ ಮುತ್ತಪ್ಪ, ಅಕಾಡೆಮಿ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಕುಡಿಯರ ಕಾವೇರಪ್ಪ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ ಮತ್ತು ನಾಪಂಡ ಸಿ. ಗಣೇಶ್, ಪೊನ್ನಿರ ಯು.ಗಗನ್, ಚೆಪ್ಪುಡಿರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ ಇತರರು ಇದ್ದರು. ಸದಸ್ಯರಾದ ನಾಪಂಡ ಸಿ.ಗಣೇಶ್ ಸ್ವಾಗತಿಸಿದರು. ಚೆಪ್ಪುಡಿರ ಎಸ್.ಉತ್ತಪ್ಪ ಪ್ರಾರ್ಥಿಸಿದರು. ಮಾಳೇಟಿರ ಶ್ರೀನಿವಾಸ್ ನಿರೂಪಿಸಿದರು, ಪೊನ್ನಿರ ಯು.ಗಗನ್ ವಂದಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಏರ್ಪಡಿಸಲಾಗಿದ್ದ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸುತ್ತಮುತ್ತಲಿನ ಸುಮಾರು 13 ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ನಾಟಿ ಓಟ, ಭತ್ತ ಪೈರು ಕೀಳುವ ಮತ್ತಿತರ ಸ್ಪರ್ಧೆಗಳಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದು ಗಮನ ಸೆಳೆಯಿತು. ಹಿರಿಯರು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎ.ಎಸ್.ಪೊನ್ನಣ್ಣ ಅವರು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಗಮನ ಸೆಳೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.