
ಮಡಿಕೇರಿ NEWS DESK ಆ.7 : ರಾಜಾಸೀಟ್‌ನಲ್ಲಿ ‘ಗ್ಲಾಸ್ ಬ್ರಿಡ್ಜ್’ ನಿರ್ಮಾಣಕ್ಕೆ ನಮ್ಮ ತೀವ್ರ ವಿರೋಧವಿದ್ದು, ಉದ್ದೇಶಿತ ಯೋಜನೆ ಜಾರಿಗೆ ಮುಂದಾದಲ್ಲಿ ನಗರದ ನಿವಾಸಿಗಳ ಸಹಕಾರದೊಂದಿಗೆ ಬೃಹತ್ ಹೋರಾಟ ರೂಪಿಸುವುದಲ್ಲದೆ, ನ್ಯಾಯಾಲಯದ ಮೊರೆ ಹೋಗುವುದಾಗಿ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಾಸೀಟ್ ನಡುವಿನ ಸ್ಮಾರಕ ಪುರಾತತ್ವ ಇಲಾಖೆಗೆ ಒಳಪಡುತ್ತ್ತದೆ. ಯಾವುದೇ ಪುರಾತನ ಸ್ಮಾರಕಗಳ ವ್ಯಾಪ್ತಿಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯಕೂಡದೆನ್ನುವ ನಿಯಮಗಳಿದೆ. ಹೀಗಿದ್ದೂ ಕಾಂಗ್ರೆಸ್ ಆಡಳಿತ ವ್ಯವಸ್ಥೆ ಜನರಿಗೆ ಸಂಕಷ್ಟವನ್ನು ತಂದೊಡ್ಡುವ ‘ಗ್ಲಾಸ್ ಬ್ರಿಡ್ಜ್’ನ್ನು ಅಭಿವೃದ್ಧಿಯ ಹೆಸರಿನಲ್ಲಿ ನಿರ್ಮಿಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾ ವ್ಯಕ್ತಪಡಿಸಿದರು. ರಾಜಾಸೀಟ್ ಬಳಿಯಲ್ಲೆ ಇರುವ ಚಾಮುಂಡೇಶ್ವರಿ, ಇಂದಿರಾ ನಗರ ಬಡಾವಣೆ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದಿನ ಭಾರೀ ಮಳೆೆಯ ಸಂದರ್ಭ ಬಿರುಕು ಕಾಣಿಸಿಕೊಂಡಿತ್ತು. ಪಕ್ಕದಲ್ಲೇ್ಲ ಇರುವ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಭವಿಷ್ಯದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. *ಬಾಂಗ್ಲಾ ದೇಶಿಗರನ್ನು ಪತ್ತೆ ಹಚ್ಚಿ*
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನಕಲಿ ಆಧಾರ್ ಕಾರ್ಡ್ ದಾಖಲೆಗಳೊಂದಿಗೆ 10 ಸಾವಿರಕ್ಕೂ ಹೆಚ್ಚಿನ ಬಾಂಗ್ಲಾದೇಶಿಗರು ಇರಬಹುದೆನ್ನುವ ಸಂಶಯವಿದೆ. ಈ ಬಗ್ಗೆ ತಕ್ಷಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿ, ನಕಲಿ ದಾಖಲೆಗಳೊಂದಿಗೆ ನೆಲೆಸಿರುವ ಬಾಂಗ್ಲಾ ದೇಶಿಗರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ತೋಟಕ್ಕೆ ಬರುವ ಕಾರ್ಮಿಕರಿಂದ ಮಾಲೀಕರು ಅಧಾರ್ ಕಾರ್ಡ್ ಪಡೆದು ಪೊಲೀಸ್ ಇಲಾಖೆಗೆ ನೀಡುವ ಕೆಲಸ ಆಗಬೇಕು ಎಂದು ಎಂ.ಪಿ.ಅಪ್ಪಚ್ಚು ರಂಜನ್ ಒತ್ತಾಯಿಸಿದರು. *ರಸ್ತೆ ಅವ್ಯವಸ್ಥೆ* ಕೊಡಗಿನ ಬಹುತೇಕ ರಸ್ತೆಗಳು ಹದಗೆಟ್ಟು ಹೋಗಿವೆ, ಲೋಕೋಪಯೋಗಿ ಇಲಾಖೆಗೆ ರಸ್ತೆಗಳ ನಿರ್ವಹಣೆÉಗೆ ಪ್ರತಿ ಕಿಲೋಮೀಟರ್‌ಗೆ 66 ಸಾವಿರ ರೂ. ಅನುದಾನ ಲಭ್ಯವಿದೆ. ಹೀಗಿದ್ದೂ ರಸ್ತೆಗಳ ನಿರ್ವಹಣೆ ಸಮರ್ಪಕವಾಗಿಲ್ಲ, ರಸ್ತೆ ಬದಿಯ ಕಾಡುಗಳನ್ನು ಕಡಿದು ಸಂಚಾರವನ್ನು ಸುಗಮವಾಗಿರುವಂತೆ ನೋಡಿಕೊಳ್ಳುವ ಕನಿಷ್ಟ ಕಾರ್ಯವು ನಡೆಯುತ್ತಿಲ್ಲ. ಈ ಬಗ್ಗೆ ಜಿಲ್ಲೆಯ ಇಬ್ಬರು ಶಾಸಕರು ಗಮನ ಹರಿಸಿ ರಸ್ತೆ ನಿರ್ವಹಣೆಗೆ ಇರುವ ಲೋಕೋಪಯೋಗಿ ಇಲಾಖೆಯ ಅನುದಾನ ಏನಾಗಿದೆ ಎಂದು ತಿಳಿದುಕೊಳ್ಳುವುದು ಅಗತ್ಯವೆಂದು ಹೇಳಿದರು. ಮಡಿಕೇರಿ ನಗರಸಭಾ ಉಪಾಧ್ಯಕ್ಷÀ ಮಹೇಶ್ ಜೈನಿ ಅವರು ಮಾತನಾಡಿ, ಗ್ಲಾಸ್ ಬ್ರ‍್ರಿಡ್ಜ್ಗೆ ಸಂಬಂಧಿಸಿದಂತೆ ನಗರಸಭೆಯಲ್ಲಿ ಕರೆಯಲಾಗಿದ್ದ ತುರ್ತು ಸಭೆಯ ಸಂದರ್ಭ ಕಾಂಗ್ರೆಸ್ ಸದಸ್ಯರು ಸಭೆಗೆ ವಿರೋಧ ವ್ಯಕ್ತಪಡಿಸಿ, ಸಭೆಯನ್ನು ನಡೆಸಬಾರದು ಎಂದು ಆಗ್ರಹಿಸಿದ್ದರು. ಇವರ ವರ್ತನೆಯನ್ನು ಗಮನಿಸಿದರೆ ಕಾಂಗ್ರೆಸ್ ಪಕ್ಷ ಗ್ಲಾಸ್ ಬ್ರಿಡ್ಜ್ ನಿರ್ಮಾಣದ ಪರವಾಗಿ ಇದೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದರು.
ಪ್ರಸ್ತುತ ಯೋಜನೆಯ ಬಗ್ಗೆ ಕನಿಷ್ಟ ಮಾಹಿತಿಯನ್ನು ನೀಡದೆ ನಗರಸಭೆಯನ್ನು ಕತ್ತಲೆಯಲ್ಲಿ ಇಡಲಾಗಿದೆ, ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ರಾಜಾಸೀಟಿನಲ್ಲಿ ಜೆಸಿಬಿಗಳನ್ನು ಓಡಿಸಿದಲ್ಲಿ ಅಲ್ಲಿನ ಪರಿಸರಕ್ಕೆ ಗಂಭೀರ ಅಪಾಯ ಎದುರಾಗುವ ಸಾಧ್ಯತೆಗಳಿದೆ ಎಂದು ಗಮನ ಸೆಳೆದರು. ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಮಾತನಾಡಿ ಗ್ಲಾಸ್ಟ್ ಬ್ರಿಡ್ಜ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹಿರಿಯ ಕಾಂಗ್ರೆಸ್ಸಿಗರು ತಮ್ಮ ನಿಲುವನ್ನು ವ್ಯಕ್ತಪಡಿಸಬೇಕು. ಹಿರಿಯ ರಾಜಕಾರಣಿ, ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಅವರು ಗಾಜಿನ ಸೇತುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ಸಿಗರು ಸ್ವಹಿತಾಸಕ್ತಿಗಾಗಿ ಗ್ಲಾಸ್ ಬ್ರ‍್ರಿಡ್ಜ್ ನಿರ್ಮಾಣದ ಯೋಜನೆಯನ್ನು ರೂಪಿಸಿದ್ದು, ಇದು ಒಂದು ದಂಧೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಜಗದೀಶ್ ಹಾಗೂ ಕವನ್ ಕಾವೇರಪ್ಪ ಉಪಸ್ಥಿತರಿದ್ದರು.








