Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಕರ್ನಾಟಕ»ಮೈಸೂರಿನಿಂದ ತಿರುಪತಿಗೆ ಹೆಚ್ಚುವರಿ ರೈಲು ಸೇವೆ ಒದಗಿಸಲು ಯದುವೀರ್‌ ಮನವಿ
ಕರ್ನಾಟಕ ಕೊಡಗು ಜಿಲ್ಲೆ ಭಾರತ

ಮೈಸೂರಿನಿಂದ ತಿರುಪತಿಗೆ ಹೆಚ್ಚುವರಿ ರೈಲು ಸೇವೆ ಒದಗಿಸಲು ಯದುವೀರ್‌ ಮನವಿ

ಆಗಷ್ಟ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು NEWS DESK ಆ. 7: ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಕ್ಷೇತ್ರವಾದ ತಿರುಪತಿಗೆ ಸಾಂಸ್ಕೃತಿಕ ರಾಜಧಾನಿ ಮೈಸೂರು, ಮಂಡ್ಯ, ಚಾಮರಾಜನಗರದಿಂದ ಅತಿ ಹೆಚ್ಚು ಭಕ್ತರು ಪ್ರಯಾಣಿಸುತ್ತಿರುವುದರಿಂದ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಬೇಕು ಎಂದು ಕೇಂದ್ರ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಅಶ್ವಿನ್‌ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ತಿಳಿಸಿದ್ದಾರೆ. ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿ ತಿರುಪತಿ-ಬೆಂಗಳೂರು ನಡುವಿನ ವಂದೇಭಾರತ್‌ ರೈಲನ್ನು ಮೈಸೂರಿನವರೆಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಸಲ್ಲಿಸಿದ ಬಳಿಕೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಆಂಧ್ರಪ್ರದೇಶದ ತಿರುಪತಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ತಿರುಪತಿಗೆ ನಿರಂತರವಾಗಿ ಭೇಟಿ ನೀಡುತ್ತಿರುತ್ತಾರೆ. ಭಕ್ತರ ದೀರ್ಘಕಾಲದ ಬೇಡಿಕೆಯಂತೆ ತಿರುಪತಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರವನ್ನು ಮೈಸೂರಿನವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ, ಅಸ್ತಿತ್ವದಲ್ಲಿರುವ ರೈಲು ಸೇವೆಗಳು ವಿರಳವಾಗಿವೆ. ಕೆಲವು ದೀರ್ಘ ಪ್ರಯಾಣದ ಅವಧಿಯದ್ದಾಗಿದೆ. ಇದರಿಂದ ಹಿರಿಯ ನಾಗರಿಕರು, ಭಕ್ತರು ಮತ್ತು ಪ್ರವಾಸಿಗರಿಗೆ ಅನಾನುಕೂಲತೆಯನ್ನುಂಟು ಮಾಡುತ್ತಿದೆ ಎಂದು ಸಚಿವರಿಗೆ ವಿವರಿಸಲಾಯಿತು ಎಂದು ಹೇಳಿದ್ದಾರೆ. ಮೈಸೂರು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಲಭ್ಯತೆ ಮತ್ತು ನಿರ್ವಹಣಾ ಸೌಲಭ್ಯಗಳನ್ನು ಪರಿಗಣಿಸಿ, ಮೈಸೂರು – ರೇಣಿಗುಂಟ/ತಿರುಪತಿ – ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಿಸಬಹುದಾಗಿದೆ. ಈ ನಿಟ್ಟಿನಲ್ಲಿ, ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ವಿಸ್ತರಿಸಲು ಎಂದು ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ. ಈ ಅತಿ ವೇಗದ, ಆಧುನಿಕ ರೈಲು ಸೇವೆಯು ಸಾವಿರಾರು ಪ್ರಯಾಣಿಕರಿಗೆ ಸುರಕ್ಷಿತ, ಆರಾಮದಾಯಕ ಮತ್ತು ಉತ್ತಮ ಪ್ರಯಾಣ ಆಯ್ಕೆಯನ್ನು ಒದಗಿಸುತ್ತದೆ. ಇದರಿಂದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು ವಿವರಿಸಿದ್ದಾರೆ. ಮೈಸೂರು-ರೇಣಿಗುಂಟ/ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭವಾದರೆ ಕರ್ನಾಟಕದ ಮೈಸೂರು ಭಾಗದಿಂದ ಸಾವಿರಾರು ಭಕ್ತರು ತೆರಳಿ ದರ್ಶನ ಪಡೆಯಲು ಸಹಾಯವಾಗಲಿದೆ ಎಂದು ಯದುವೀರ್‌ ಹೇಳಿದ್ದಾರೆ. ಮನವಿ ಪತ್ರವನ್ನು ಸ್ವೀಕರಿಸಿದ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರು ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ. *ರೈಲ್ವೆ ಸಚಿವರಿಗೆ ಕೃತಜ್ಞತೆ* ಮೈಸೂರು-ಚಾಮರಾಜನಗರ ರೈಲು ಮಾರ್ಗದ ವಿದ್ಯುದೀಕರಣವನ್ನು ತ್ವರಿತಗೊಳಿಸುವಲ್ಲಿ ರೈಲ್ವೆ ಸಚಿವರು ನೀಡಿದ ಬೆಂಬಲಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ, ಇದು ಈಗ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ದಾರಿ ಮಾಡಿಕೊಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅವರ ಸಕಾಲಿಕ ನಡೆಯು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಯದುವೀರ್‌ ತಿಳಿಸಿದ್ದಾರೆ. *ರಾಮೇಶ್ವರಂಗೂ ರೈಲು ಸೇವೆಗೆ ಮನವಿ* ತಮಿಳುನಾಡಿನ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ರಾಮೇಶ್ವರಂಗೆ ಮೈಸೂರಿನಿಂದ ಇದುವರೆಗೆ ಯಾವುದೇ ನೇರ ರೈಲು ಸಂಪರ್ಕ ಇಲ್ಲ. ಇದರಿಂದ ಮೈಸೂರು ಭಾಗದ ಜನರಿಗೆ ಈ ತೀರ್ಥ ಕ್ಷೇತ್ರಕ್ಕೆ ತೆರಳಲು ಅನನುಕೂಲವಾಗುತ್ತಿದೆ. ಈ ನಿಟ್ಟಿನಲ್ಲಿ ಮೈಸೂರು-ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಿಸಬೇಕೆಂದು ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಮನವಿ ಮಾಡಲಾಗಿದೆ ಎಂದು ಯದುವೀರ್‌ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.15: ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನೇಸರ ಉದ್ಯಾನದಲ್ಲಿ ಅಕ್ಟೋಬರ್ 17ರಂದು…

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.