
ಸುಂಟಿಕೊಪ್ಪ ಆ.8 NEWS DESK : ಚೆಟ್ಟಳ್ಳಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಪೂವಯ್ಯ ಎಂಬವರ ತೋಟಕ್ಕೆ ನಿರಂತರ ದಾಳಿ ಮಾಡುತ್ತಿರುವ ಕಾಡಾನೆಗಳು ಕಾಫಿ, ಕರಿಮೆಣಸು, ಬಾಳೆಗಿಡಗಳನ್ನು ನಾಶ ಪಡಿಸಿದೆ. ನಷ್ಟ ಪರಿಹಾರಕ್ಕಾಗಿ ಹಲವು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಪೂವಯ್ಯ, ಕಾಡಾನೆ ತಡೆಗೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಆಹಾರ ಅರಸಿ ಬರುವ ಕಾಡಾನೆಗಳು ಮರಳಿ ಕಾಡಿಗೆ ಹಿಂತೆರಳದೆ ಸುತ್ತಮುತ್ತಲಿನ ತೋಟಗಳಲ್ಲಿ ಸಂಚರಿಸುತ್ತಿದ್ದು, ಕೂಲಿ ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಆತಂಕ ಪಡುವಂತಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.








