Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಟ್ಟಂಗಾಲ : ವಿದ್ಯಾರ್ಥಿಗಳು ಕೃಷಿ ಭೂಮಿಯ ಅನುಭವವನ್ನು ಪಡೆಯಬೇಕು : ಬೆನೆಡಿಕ್ಟ್ ಸಾಲ್ಡಾನಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಟ್ಟಂಗಾಲ : ವಿದ್ಯಾರ್ಥಿಗಳು ಕೃಷಿ ಭೂಮಿಯ ಅನುಭವವನ್ನು ಪಡೆಯಬೇಕು : ಬೆನೆಡಿಕ್ಟ್ ಸಾಲ್ಡಾನಾ*

ಆಗಷ್ಟ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಆ.8 NEWS DESK :  ಆಧುನಿಕ ಜೀವನ ಶೈಲಿಯಿಂದ ಕೃಷಿ ಭೂಮಿಯಿಂದ ದೂರ ಉಳಿದ ಯುವ ಜನತೆ ಒಂದು ದಿನವಾದರೂ ಕೃಷಿ ಭೂಮಿಯ ಸಂಪರ್ಕಕ್ಕೆ ಬಂದು ರೈತಾಪಿ ಬದುಕಿನ ಅನುಭವ ಪಡೆಯಬೇಕು ಎಂದು ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಾಲ್ಡಾನಾ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಟ್ಟಂಗಾಲದ ನಿವೃತ್ತ ಪೊಲೀಸ್ ಬಿ.ಡಿ.ಮಂದಪ್ಪ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿನ ವರ್ಷದಲ್ಲಿ ಯುವಜನತೆ ಕೃಷಿ ಭೂಮಿಯಿಂದ ದೂರ ಸರಿಯುತ್ತಿದ್ದಾರೆ. ಅಲ್ಲದೆ ಹಿಂದಿನ ಕಾಲದಲ್ಲಿ ಕೃಷಿ ಭೂಮಿಯ ಜೊತೆಗೆ ಹೊಂದಿದ್ದ ಅವಿನಾಭಾವ ಸಂಬಂಧ ಕಡಿಮೆಯಾಗುತ್ತಿದೆ. ವರ್ಷದಲ್ಲಿ ಒಂದು ಬಾರಿಯಾದರೂ ವಿದ್ಯಾರ್ಥಿಗಳು ಕೃಷಿ ಭೂಮಿಯ ಅನುಭವ ಪಡೆಯಬೇಕು. ವಿದ್ಯಾರ್ಥಿಗಳು ತಮ್ಮ ಪ್ರತಿನಿತ್ಯದ ಮನೆ ಹಾಗೂ ಶಿಕ್ಷಣದ ಜಂಜಾಟವನ್ನು ಮರೆತು ಪ್ರಕೃತಿಯ ಮಧ್ಯೆ ಕೃಷಿಭೂಮಿ, ನೀರು, ಕೆಸರು, ಮಳೆ ಮುಂತಾದವುಗಳ ಅನುಭವವನ್ನು ಪಡೆದು ಸಂಭ್ರಮಿಸಿ ದೈಹಿಕ ಹಾಗೂ ಮಾನಸಿಕವಾಗಿ ಪುನಶ್ಚೇತನಗೊಳಿಸಲು ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದರು. ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕಿ ಪ್ರಿಯ ಮುದ್ದಪ್ಪ ಮಾತನಾಡಿ, ಕೃಷಿಯು ನಮಗೆ ಪೂರ್ವಜರಿಂದ ಬಳುವಳಿಯಾಗಿ ಬಂದ ಒಂದು ಉಡುಗೊರೆ. ಆದರೆ ಇತ್ತೀಚಿನ ಸಮಯದಲ್ಲಿ ಆಧುನಿಕ ಬದುಕಿನ ಜಂಜಾಟದಲ್ಲಿ ಕಣ್ಮರೆಯಾಗುತ್ತಿರುವ ಈ ಕೃಷಿ ಬದುಕಿನ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ. ಕೃಷಿ ಭೂಮಿಯೊಂದಿಗೆ ವಿದ್ಯಾರ್ಥಿಗಳ ಒಡನಾಟವನ್ನು ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳ ನಡುವೆ ಪರಸ್ಪರ ಸಹಕಾರ, ಒಗ್ಗಟ್ಟು , ಕ್ರೀಡಾ ಮನೋಭಾವನೆ ಹೆಚ್ಚಿಸುದರೊಂದಿಗೆ ಒಂದು ದಿನವಾದರು ಕೃಷಿ ಭೂಮಿಯ ಆಹ್ಲಾದ ಪಡೆಯುವಂತೆ ಮಾಡಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು. ಇದೆ ರೀತಿ ಮುಂದಿನ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ಕ್ರೀಡೆಯನ್ನು ಆಯೋಜಿಸಲಾಗುವುದು ಎಂದರು. ವಿದ್ಯಾರ್ಥಿಗಳಿಗೆ ಕೆಸರುಗದ್ದೆಯಲ್ಲಿ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ, ಫುಟ್ಬಾಲ್ , ಥ್ರೋಬಾಲ್ ಹಾಗೂ ಟ್ರೆಷರ್ ಹಂಟ್ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಹುಡುಗರ ವಿಭಾಗದಲ್ಲಿ ಓಟದ ಸ್ಪರ್ಧೆಯಲ್ಲಿ ಓಶಿನ್ ಬೋಪಯ್ಯ ಪ್ರಥಮ, ಭವಿಷ್ ದ್ವಿತೀಯ, ಲಿಖಿತ್ ತೃತೀಯ ಸ್ಥಾನವನ್ನು ಪಡೆದರು. ಹಗ್ಗ ಜಗ್ಗಾಟದಲ್ಲಿ ಕಪ್ಪು ತಂಡ ಪ್ರಥಮ, ಹಸಿರು ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು. ಫುಟ್ಬಾಲ್ ನಲ್ಲಿ ಹಸಿರು ತಂಡ ಪ್ರಥಮ, ಕೆಂಪು ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು. ಟ್ರಫರ್ ಹಂಟ್ ವಿಭಾಗದಲ್ಲಿ ಕಪ್ಪು ತಂಡ ಪ್ರಥಮ, ಕೆಂಪು ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು. ಹುಡುಗಿಯರ ವಿಭಾಗದಲ್ಲಿ ಓಟದ ಸ್ಪರ್ಧೆಯಲ್ಲಿ ಶಮ್ಲಾ ಪ್ರಥಮ, ರೀಷ್ಮ ದ್ವಿತೀಯ, ಹೇಮಾವತಿ ತೃತೀಯ ಸ್ಥಾನವನ್ನು ಪಡೆದರು. ಹಗ್ಗ ಜಗ್ಗಾಟದಲ್ಲಿ ಕಪ್ಪು ತಂಡ ಪ್ರಥಮ, ಹಸಿರು ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು. ಥ್ರೋಬಾಲ್ ನಲ್ಲಿ ಹಸಿರು ತಂಡ ಪ್ರಥಮ, ನೀಲಿ ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು. ಟ್ರೆಷರ್ ಹಂಟ್ನಲ್ಲಿ ನೀಲಿ ತಂಡ ಪ್ರಥಮ, ಕಪ್ಪು ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು.  ಕ್ರೀಡಾಕೂಟದ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು, ಆಡಳಿತಾತ್ಮಕ ಸಿಬ್ಬಂದಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.