Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
  • *ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 
  • *ನಮ್ಮೂರ ಶಾಲೆ ನಮ್ಮದು, ನಮ್ಮೂರಲ್ಲೆ ಉಳಿಯಲಿ : ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ಹಾಗೂ ಗ್ರಾಮಸ್ಥರ ಆಗ್ರಹ*
  • *ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ಪೂರ್ವಭಾವಿ ಸಭೆ*

ಆಗಷ್ಟ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.8 : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸುವ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ವಿ.ಟಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ. ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರ (7 ಮಂದಿಯ ತಂಡ) ವಿಭಾಗಕ್ಕೆ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ (4 ಮಂದಿಯ ತಂಡ) ಮತ್ತು ಮಹಿಳೆಯರಿಗೆ ಥ್ರೋಬಾಲ್ (6 ಮಂದಿಯ ತಂಡ) ಪಂದ್ಯಾವಳಿ ನಡೆಯಲಿದೆ.
ಮಧ್ಯಾಹ್ನ 1 ಗಂಟೆಯಿಂದ ಕೆಸರು ಗದ್ದೆ ಓಟ ನಡೆಯಲಿದ್ದು, ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲಾ ಬಾಲಕ ಹಾಗೂ ಬಾಲಕಿಯರಿಗೆ, ಪ್ರೌಢಶಾಲಾ, ಪದವಿಪೂರ್ವ ಮತ್ತು ಪದವಿ ಕಾಲೇಜು ಯುವಕ, ಯುವತಿಯರಿಗೆ ಹಾಗೂ ಆಯೋಜಕರಿಗೆ ಓಟದ ಸ್ಪರ್ಧೆ, ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ ಮುಕ್ತ ಓಟದ ಸ್ಪರ್ಧೆ ನಡೆಯಲಿದೆ. ಸಂಜೆ ಸಾಂಪ್ರದಾಯಿಕ ಪೂಜೆಯ ನಂತರ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ವಿ.ಟಿ ಹಾಗೂ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಮನವಿ ಮಾಡಿದರು. ಸಾರ್ವಜನಿಕ ಹಗ್ಗಜಗ್ಗಾಟಕ್ಕೆ ಸ್ಪರ್ಧಿಸುವ ಪುರುಷರಿಗೆ ರೂ.1,500, ಮಹಿಳೆಯರು ರೂ.1,000, ಸಾರ್ವಜನಿಕರ ವಾಲಿಬಾಲ್ ಹಾಗೂ ಥ್ರೋಬಾಲ್‌ಗೆ ತಲಾ ರೂ.1,000 ಪ್ರವೇಶ ಶುಲ್ಕ ಪಾವತಿಸಬೇಕು. ಆ.22 ರ ಸಂಜೆ 5 ಗಂಟೆಯ ಒಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು. ಕ್ರೀಡಾಕೂಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಆಕರ್ಷಕ ನಗದು, ಪಾರಿತೋಷಕ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು. ವಾಲಿಬಾಲ್ ಮತ್ತು ಥ್ರೋಬಾಲ್ ನೋಂದಾವಣಿಗಾಗಿ ಕಾವೇರಿಮನೆ ಭರತ್ 8431515404, ಹಗ್ಗಜಗ್ಗಾಟ ಬಿದ್ದಿಯಂಡ ಸುಭಾಷ್ 9845053501 ನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ 9481213920, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ 8618568173, ಶ್ರೀ ಕೃಷ್ಣ ಯುವಕ ಸಂಘದ ಅಧ್ಯಕ್ಷ ಲತೇಶ್ 9483662610, ಜೀವನ್ ಕುಮಾರ್ 9353426073, ಕಾರ್ಯದರ್ಶಿ ಅಭಿಷೇಕ್ 6361621643, ಸದಸ್ಯ ಪ್ರತೀಶ್ 8217801336 ನ್ನು ಸಂಪರ್ಕಿಸಬಹುದಾಗಿದೆ. ಪೂರ್ವಭಾವಿ ಸಭೆಯಲ್ಲಿ ಯುವ ಒಕ್ಕೂಟದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಖಜಾಂಚಿ ಕೆ.ಎ.ಮೋಹನ್, ಸದಸ್ಯರಾದ ನವೀನ್ ದೇರಳ, ನಿಖಿಲ್ ಬೆಳ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 26 NEWS DESK : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು,…

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026

*ನಮ್ಮೂರ ಶಾಲೆ ನಮ್ಮದು, ನಮ್ಮೂರಲ್ಲೆ ಉಳಿಯಲಿ : ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ಹಾಗೂ ಗ್ರಾಮಸ್ಥರ ಆಗ್ರಹ*

ಮೇ 26, 2026

*ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

ಮೇ 26, 2026

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.