Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ನಿರ್ಧಾರ*

ಆಗಷ್ಟ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಆ.8 : ರೈತರ ಕೃಷಿ ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸುವುದಕ್ಕೆ ಸರ್ಕಾರ ಸೆಕ್ಷನ್-4 ಸರ್ವೆಗೆ ಮುಂದಾಗಿರುವುದನ್ನು ಖಂಡಿಸಿ ಆ.12 ರ ಮಂಗಳವಾರ ಸೋಮವಾರಪೇಟೆ ತಾಲ್ಲೂಕು ಬಂದ್ ನಡೆಸಲಾಗುವುದು ಎಂದು ರೈತ ಹೋರಾಟ ಸಮಿತಿಯ ತಾಲ್ಲೂಕು ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು. ಆ.11ರಂದು ನಡೆಸಬೇಕಿದ್ದ ತಾಲ್ಲೂಕು ಬಂದ್ ಅನ್ನು ಆ.12ಕ್ಕೆ ಮುಂದೂಡಲಾಗಿದ್ದು, ವರ್ತಕರು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ರೈತರು ಕೃಷಿ ಭೂಮಿಯನ್ನು ಕಳೆದುಕೊಂಡು ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಕೊಡಗು ಜಿಲ್ಲೆಯಲ್ಲಿ 25 ಸಾವಿರ ಎಕರೆಯಷ್ಟು ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಕಳೆದುಕೊಳ್ಳಬೇಕಾಗಿದ್ದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದರು. ರೈತರು ಅನೇಕ ದಶಕಗಳ ಹಿಂದೆಯೇ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬಂದಿದ್ದಾರೆ.  ಅನೇಕ ವರ್ಷಗಳಿಂದ ಕಂದಾಯ ಇಲಾಖೆಗೆ ನಮೂನೆ 50,53, 57 ಅರ್ಜಿ ಸಲ್ಲಿಸಿಕೊಂಡು ಹಕ್ಕುಪತ್ರಕ್ಕಾಗಿ ಪರದಾಡುತ್ತಿದ್ದಾರೆ. ಇದ್ದಕ್ಕಿದ್ದಂತೆ ಕೃಷಿ ಭೂಮಿಯನ್ನೇ ಸಿ ಆ್ಯಂಡ್ ಡಿ ಭೂಮಿಯೆಂದು ಸರ್ವೆಗೆ ಮುಂದಾಗಿರುವುದು ಖಂಡನೀಯ ಎಂದು ತಿಳಿಸಿದರು. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ ಬಹುತೇಕ ರೈತರು ಸಿ ಆ್ಯಂಡ್ ಡಿ ಭೂಮಿಯಲ್ಲೇ ಕೃಷಿ ಮಾಡಿದ್ದಾರೆ. ಮನೆ ನಿರ್ಮಿಸಿಕೊಂಡಿದ್ದಾರೆ. ಭತ್ತ, ಕಾಫಿ, ಏಲಕ್ಕಿ, ಬಾಳೆ, ತರಕಾರಿ ಬೆಳೆಯುತ್ತಿದ್ದಾರೆ. ಈ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ಎಂದು ಘೋಷಣೆ ಮಾಡಿದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಹಿಂದಿನ ಬೆಳಗಾವಿ ಅಧಿವೇಶನದಲ್ಲಿ  ಸಿ ಆ್ಯಂಡ್ ಡಿ ವಿಷಯ ಚರ್ಚೆಯಾಗಿದ್ದು, ಉನ್ನತಮಟ್ಟದ ಸಮಿತಿ  ರಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಅರಣ್ಯ, ಕಂದಾಯ ಸಚಿವರು ಭರವಸೆ ನೀಡಿದ್ದರು. ಆದರೆ ಇದುವರೆಗೆ ಸಮಸ್ಯೆ ಬಗೆಹರಿಸಿಲ್ಲ. ಇವೆಲ್ಲಾ ಕಾರಣದಿಂದ g ಹೋರಾಟ ಪ್ರಾರಂಭಿಸಲಾಗುವುದು ಎಂದು ಹೇಳಿದರು. ಆ.12 ರ ತಾಲ್ಲೂಕು ಬಂದ್ ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಆಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಮಿತಿ ಸಂಚಾಲಕ ಬಿ.ಜೆ.ದೀಪಕ್ ಮಾತನಾಡಿ. 1974ರಲ್ಲಿ ಸರ್ಕಾರದ ಸುತ್ತೋಲೆಯಂತೆ ಸಿ ಆ್ಯಂಡ್ ಡಿ ಭೂಮಿ ಗುರುತು ಮಾಡಲಾಯಿತು. ಆದರೆ ಕಂದಾಯ ಅಧಿಕಾರಿಗಳು ಜಾಗದ ಸರ್ವೆ ಮಾಡದೆ ಕಚೇರಿಯಲ್ಲಿ ಕುಳಿತುಕೊಂಡೆ ಕೊಡಗು ಜಿಲ್ಲೆಯಲ್ಲಿ ಸಾವಿರಾರು ಎಕರೆ ಜಾಗವನ್ನು ಸಿ ಆ್ಯಂಡ್ ಡಿ ಭೂಮಿ ಎಂದು ಗುರುತಿಸಿ ಸರ್ಕಾರಕ್ಕೆ ಲಿಖಿತ ವರದಿ ಕೊಟ್ಟರು. ಸರ್ಕಾರ ಈ ಅವೈಜ್ಞಾನಿಕ ವರದಿಯನ್ನೇ ಹೈಕೋರ್ಟ್ ಮತ್ತು ಸುಪ್ರಿಂ  ಕೋರ್ಟ್ಗೆ ಸಲ್ಲಿಸಿರುವುದರಿಂದ ರೈತರು ಭೂಮಿ ಕಳೆದುಕೊಳ್ಳುವ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು. ಸರ್ಕಾರ ಸಿ ಆ್ಯಂಡ್ ಡಿ  ಭೂಮಿಯ ಸಮಸೈ ಬಗೆಹರಿಸಲು ಕೂಡಲೆ ಉನ್ನತಮಟ್ಟದ ಸಮಿತಿ ರಚಿಸಬೇಕು. ಸರ್ವೆ ಇಲಾಖೆ, ಕಂದಾಯ, ಅರಣ್ಯ ಇಲಾಖೆಗಳಿಂದ ಜಂಟಿ ಸರ್ವೆ ನಡೆಸಿ, ಸಿ ಆ್ಯಂಡ್ ಡಿಯನ್ನು ಗುರುತು ಮಾಡಬೇಕು ಎಂದು ಹೇಳಿದರು. 1974ರ ವರೆಗೆ ಎಲ್ಲಾ ಸರ್ಕಾರಗಳು ಆಡಳಿತ ಮಾಡಿವೆ. ಆದರೆ ಸಿ ಆ್ಯಂಡ್ ಡಿ ಭೂಮಿಯನ್ನು ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ತಿಳಿಸಿದರು. ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಮಾತನಾಡಿ, ರೈತರು ಒಗ್ಗಟ್ಟಾದರೆ ಮಾತ್ರ ಹಕ್ಕುಗಳನ್ನು ಪಡೆದುಕೊಳ್ಳಬಹುದು. ತಾಲ್ಲೂಕಿನ ಸಂಘ ಸಂಸ್ಥೆಗಳು ಬಂದ್‌ಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಇಂದಿರಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಜಯರಾಮ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.