Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪದಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ : ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನಿಂದ ಕೊಡವರ ಹಕ್ಕುಗಳಿಗೆ ಮತ್ತಷ್ಟು ಬಲ : ಎನ್.ಯು.ನಾಚಪ್ಪ ಪ್ರತಿಪಾದನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪದಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ : ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನಿಂದ ಕೊಡವರ ಹಕ್ಕುಗಳಿಗೆ ಮತ್ತಷ್ಟು ಬಲ : ಎನ್.ಯು.ನಾಚಪ್ಪ ಪ್ರತಿಪಾದನೆ

ಆಗಷ್ಟ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಆ.10 : ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸುವುದರಿಂದ ಕೊಡವರ ಸಾಂವಿಧಾನಿಕ ಹಕ್ಕುಗಳಿಗೆ ಮತ್ತಷ್ಟು ಬಲ ಸಿಗಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸುಂಟಿಕೊಪ್ಪದಲ್ಲಿ 9ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 2026ರ ರಾಷ್ಟ್ರೀಯ ಜನಗಣತಿ ಮತ್ತು ಜನಾಂಗವಾರು ಮಾಹಿತಿ ಸಂಗ್ರಹಿಸುವ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸರ್ವ ಕೊಡವರು ಅರಿತುಕೊಳ್ಳಬೇಕು. ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಸಿಎನ್‌ಸಿ ನಡೆಸುವ ಶಾಂತಿಯುತ ಹೋರಾಟಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು. 2018ರಲ್ಲಿ ಕೊಡವಲ್ಯಾಂಡ್ ನಲ್ಲಿ ವ್ಯಾಪಕ ಜಲಸ್ಫೋಟ ಮತ್ತು ಭೂಸ್ಫೋಟ ಸಂಭವಿಸಿ ಸಾವುನೋವು, ಕಷ್ಟನಷ್ಟಗಳು ಎದುರಾಗಿದ್ದರೂ ಜಿಲ್ಲಾಡಳಿತ ಎಗ್ಗಿಲ್ಲದೆ ಭೂಪರಿವರ್ತನೆಗೆ ಅವಕಾಶ ನೀಡುತ್ತಿದೆ. ಹೊರಗಿನ ಬಂಡವಾಳಶಾಹಿಗಳು ಕಪ್ಪುಹಣವನ್ನು ಬಳಸಿ ಭೂಖರೀದಿಯಲ್ಲಿ ತೊಡಗಿದ್ದಾರೆ. ದೊಡ್ಡ ದೊಡ್ಡ ರೆಸಾರ್ಟ್ಗಳು ತಲೆ ಎತ್ತುತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತವೇ ಎದುರಾಗುವ ಸಾಧ್ಯತೆಗಳಿದೆ ಎಂದು ಆರೋಪಿಸಿದರು.
ಆದಿಮಸಂಜಾತ ಕೊಡವರಿಗೆ ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯೊಂದಿಗೆ ಸ್ವಯಂ ಆಡಳಿತ ಮತ್ತು ಆಂತರಿಕ ಸ್ವಯಂನಿರ್ಣಯದ ಹಕ್ಕನ್ನು ಖಾತ್ರಿ ಪಡಿಸುವುದರಿಂದ ಈ ರೀತಿಯ ಅಕ್ರಮ ಮತ್ತು ಅನಾಹುತಗಳನ್ನು ತಡೆಯಲು ಸಾಧ್ಯವೆಂದು ಅಭಿಪ್ರಾಯಪಟ್ಟರು. ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟಿçÃಯ ಕಾನೂನಿನಡಿ ಆದಿಮಸಂಜಾತ ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯಗಳನ್ನು ಎನ್.ಯು.ನಾಚಪ್ಪ ಮಂಡಿಸಿದರು. ಕೊಡವ ಸಮುದಾಯದ ಸಾಂವಿಧಾನಿಕ ಹಕ್ಕೊತ್ತಾಯಗಳ ಕುರಿತು ಸರಕಾರದ ಗಮನ ಸೆಳೆಯಲು ಮತ್ತು ಜನಜಾಗೃತಿ ಮೂಡಿಸಲು ಕೊಡಗಿನಾದ್ಯಂತ ಮಾನವ ಸರಪಳಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸಲಾಗುತ್ತಿದೆ. ಸುಂಟಿಕೊಪ್ಪ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದರಿಂದ ಸಿಎನ್‌ಸಿಯ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಿದೆ ಎಂದರು.
*ಆ.21 ರಂದು ಸಿದ್ದಾಪುರದಲ್ಲಿ ಜನಜಾಗೃತಿ* ಆ.21 ರಂದು ಬೆಳಿಗ್ಗೆ 10.30 ಗಂಟೆಗೆ ಸಿದ್ದಾಪುರದಲ್ಲಿ 10ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು. ಚೋಳಪಂಡ ಜ್ಯೋತಿ, ನಂದಿನೆರವಂಡ ರೇಖಾ, ಮರುವಂಡ ಲವ್ಲಿ, ಮಂಡಿರ ಸಬಿತಾ, ಮುಕ್ಕಾಟಿರ ಎ.ವಸಂತ್, ಪುಡಿಯಂಡ ಮುತ್ತಣ್ಣ, ದಾಸಂಡ ದೇವಯ್ಯ, ಕುಪ್ಪಂಡ ಮಹೇಶ್, ನಂದಿನೆರವಂಡ ಅಪ್ಪಯ್ಯ, ಮಾಳೇಟಿರ ಉತ್ತಪ್ಪ, ಪುಡಿಯಂಡ ರಂಜಿತ್, ಪುಲ್ಲೇರ ಕಾಳಪ್ಪ, ಬಲ್ಲಾರಂಡ ರಾಜಪ್ಪ, ನಾಗಶೆಟ್ಟಿರ ಮನು, ಚೋಳಪಂಡ ನಾಣಯ್ಯ, ನಾಗಶೆಟ್ಟಿರ ಪ್ರಕಾಶ್, ನಂದಿನೆರವಂಡ ಬಿದ್ದಪ್ಪ, ನಂದಿನೆರವಂಡ ಅಚ್ಚಯ್ಯ, ನಂದಿನೆರವಂಡ ಕುಟ್ಟಪ್ಪ, ನಂದಿನೆರವಂಡ ಪೃಥ್ವಿ, ಪುಲ್ಲೇರ ಹರ್ಷ, ಪುಲ್ಲೇರ ಅಶ್ವಿತ್, ಕಾಯಪಂಡ ತಿಮ್ಮಯ್ಯ, ಮರುವಂಡ ಶರತ್, ಮರುವಂಡ ಕವನ್, ನಂದಿನೆರವಂಡ ರಾಜೇಶ್, ಬೊಟ್ಟೋಳಂಡ ಕುಮಾರ್, ದಾಸಂಡ ವಿಕ್ರಮ್, ಮರುವಂಡ ತಿಮ್ಮಯ್ಯ, ಚೆಟ್ಟಿರ ಕವನ್, ಪಾರುವಂಗಡ ರವಿ, ಕಂಜಿತಂಡ ಅಯ್ಯಣ್ಣ, ಅಜ್ಜಿನಿಕಂಡ ಮೊಣ್ಣಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸೂರ್ಯ-ಚಂದ್ರ, ಭೂದೇವಿ, ಪ್ರಕೃತಿ ದೇವಿ, ಜಲದೇವಿ, ವನದೇವಿ, ಸಂವಿಧಾನ, ಗುರು ಕಾರೋಣ ಹೆಸರಿನಲ್ಲಿ ಸಿಎನ್‌ಸಿಯ ಕೊಡವಲ್ಯಾಂಡ್ ಹೋರಾಟದೊಂದಿಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ಪ್ರತಿಜ್ಞೆ ಸ್ವೀಕರಿಸಿದರು. ರಾಷ್ಟ್ರಗೀತೆ ಜನ-ಗಣ-ಮನದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.