
ಸೋಮವಾರಪೇಟೆ NEWS DESK ಆ.10 : ಸಿ ಮತ್ತು ಡಿ ಕೃಷಿ ಭೂಮಿ ಹಕ್ಕಿಗಾಗಿ ರೈತ ಹೋರಾಟ ಸಮಿತಿ ಆ.12ರಂದು ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ಬಿಜೆಪಿ ಕೃಷಿಮೋರ್ಚಾ ಹಾಗೂ ಮಂಡಲ ಬಿಜೆಪಿ ಸಂಪೂರ್ಣ ಬೆಂಬಲ ಸೂಚಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಶರತ್‌ಚಂದ್ರ ಅವರು ಬಿಜೆಪಿ ಶಕ್ತಿ ಕೇಂದ್ರ, ಕೃಷಿ ಮೋರ್ಚಾದ ಸದಸ್ಯರುಗಳು ಬಂದ್ ಹಾಗೂ ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ತರುವ ಮೂಲಕ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು. ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಎಸ್.ಆರ್.ಸೋಮೇಶ್, ಪ್ರಮುಖರಾದ ಭಾನುಪ್ರಕಾಶ್, ರವಿ, ಕಿಬ್ಬೆಟ್ಟ ಮಧು ಇದ್ದರು.







