Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ : ತಂತ್ರಜ್ಞಾನ ಮತ್ತು ನಿರ್ವಹಣೆ ಜಗತ್ತಿನ ಆರ್ಥಿಕತೆಯ ಆಧಾರ ಸ್ತಂಭ : ರಂಜನ್ ಕುಮಾರ್*
ಇತ್ತೀಚಿನ ಸುದ್ದಿಗಳು

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ : ತಂತ್ರಜ್ಞಾನ ಮತ್ತು ನಿರ್ವಹಣೆ ಜಗತ್ತಿನ ಆರ್ಥಿಕತೆಯ ಆಧಾರ ಸ್ತಂಭ : ರಂಜನ್ ಕುಮಾರ್*

August 11, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಆ.11 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ವಿದ್ಯಾರ್ಥಿ ವಿಭಾಗ, ಗ್ಲೋಬಲ್ ಡಿಗ್ರೀಸ್ ಮಣಿಪಾಲ್, ಇನ್ಸ್ಟಿಟ್ಯೂಶನ್ಸ್ ಇನ್ನೋವೇಶನ್ ಸೆಲ್ ಮತ್ತು ಕೆನರಾ ಬ್ಯಾಂಕ್ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು 3ನೇ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2025 ಕಾರ್ಯಕ್ರಮವು ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವು ಜಗತ್ತಿನಾದ್ಯಂತದ ಖ್ಯಾತ ಶಿಕ್ಷಣ ತಜ್ಞರು, ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟು ಸೇರಿಸಿ ಜ್ಞಾನ ಹಂಚಿಕೆ ಮತ್ತು ಸಹಯೋಗದ ಹೊಸ ಅವಕಾಶಗಳನ್ನು ಸೃಷ್ಟಿಸಿತು. ಇಲ್ಲಿ 267 ಸಂಶೋಧನಾ ಪ್ರಬಂಧಗಳ ಪ್ರಸ್ತುತಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆನರಾ ಬ್ಯಾಂಕಿನ ಪುತ್ತೂರು ಪ್ರಾದೇಶಿಕ ಕಛೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್, ತಂತ್ರಜ್ಞಾನ ಮತ್ತು ನಿರ್ವಹಣೆ ಜಗತ್ತಿನ ಆರ್ಥಿಕತೆಯ ಆಧಾರ ಸ್ತಂಭಗಳಾಗಿವೆ. ಇದರ ಹೊಸತನದ ಕಲಿಕೆ ಮತ್ತು ಬಳಕೆಗೆ ಅಗತ್ಯವಾದ ತಿಳುವಳಿಕೆಯನ್ನು ನೀಡಲು ಇಂತಹ ಸಮ್ಮೇಳನಗಳು ಸಹಕಾರಿಯಾಗುತ್ತವೆ ಎಂದರು. ಆನ್‍ಲೈನ್ ಮೂಲಕ ಜತೆಯಾದ ದಿ ಮೆನೇಜ್ಮೆಂಟ್ ಯುನಿವರ್ಸಿಟಿ ಆಫ್ ಆಫ್ರಿಕಾ, ಕೆನ್ಯಾ ಇದರ ಪ್ರಾಂಶುಪಾಲ ಡಾ.ನ್ಯಾಗಾ ಜಸ್ಟರ್ ಆರ್ಥಿಕ ಅಭಿವೃದ್ದಿಯನ್ನು ಹೆಚ್ಚಿಸಲು ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳ ಆವಶ್ಯಕತೆ ಇದೆ. ಈ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನವನ್ನು ಹರಿಸಬೇಕು ಎಂದು ಹೇಳಿದರು. ಗೌರವ ಅತಿಥಿಗಳಾಗಿ ಭಾಗವಹಿಸಿದ್ದ ಐಐಐಟಿ ಧಾರವಾಡ ಇದರ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಡೀನ್ ಡಾ.ರಾಜೇಂದ್ರ ಹೆಗಡಿ ಮಾತನಾಡಿ ವಿದ್ಯಾರ್ಥಿಗಳು ಕಲಿತು ಹೊರಬಂದಾಗ ಆ ತಂತ್ರಜ್ಞಾನಗಳು ಬದಲಾಗಿರುತ್ತವೆ ಇದಕ್ಕಾಗಿ ಪೂರಕ ವಿಷಯಗಳ ಕಲಿಕೆ ಅಗತ್ಯವಾಗಿದೆ. ಇಂತಹ ಸಮ್ಮೇಳನಗಳು ಜ್ಞಾನ ಹಂಚಿಕೆಗೆ ಅವಕಾಶವನ್ನು ನೀಡುತ್ತವೆ ಎಂದರು. ದಿ ಗ್ಲೋಬಲ್ ಡಿಗ್ರೀಸ್ ಮಣಿಪಾಲ್ ಇದರ ಶಾಖಾ ನಿರ್ದೇಶಕ ಶಿಜೋ ಮೋನ್ ಯೇಸುದಾಸ್ ಆನ್‍ಲೈನ್ ಮೂಲಕ ಪಾಲ್ಗೊಂಡು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜತೆಯಲ್ಲಿ ಅವರನ್ನು ಸಮಾಜದ ಜವಾಬ್ಧಾರಿಯುತ ನಾಗರಿಕನ್ನಾಗಿಸುವಲ್ಲಿ ಕಾಲೇಜು ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಹಿತಕ್ಕಾಗಿ ಇಂತಹ ಸಮ್ಮೇಳನಗಳು ನಿರಂತರವಾಗಿ ನಡೆಯುತ್ತಿವೆ ಎಂದು ಹೇಳಿದರು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆನರಾ ಬ್ಯಾಂಕ್ ನೆಹರೂ ನಗರ ಶಾಖೆಯ ವ್ಯವಸ್ಥಾಪಕ ತೇಜ್ ಕುಮಾರ್ ಸಮಾರಂಭದಲ್ಲಿ ಭಾಗವಹಿಸಿದರು. ಕಾರ್ಯಕ್ರಮ ಸಂಯೋಜಕ ಹಾಗೂ ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ಪ್ರಸ್ತಾವನೆಗೈದರು. ಸಹ-ಸಂಯೋಜಕಿ ಹಾಗೂ ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜ್ಯೋತಿಮಣಿ.ಕೆ ಸ್ವಾಗತಿಸಿ, ಪ್ರೊ.ರೇಶ್ಮಾ ಪೈ ವಂದಿಸಿದರು. ಪ್ರೊ.ನೀಮಾ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿ*
Next Article *ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.