Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ : ಪ್ರತಿಯೊಬ್ಬರೂ ಸದ್ಗುಣವಂತರಾಗಿ ಬಾಳಿ : ಡಾ.ಕಲ್ಲಡ್ಕ ಪ್ರಭಾಕರ ಭಟ್
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ : ಪ್ರತಿಯೊಬ್ಬರೂ ಸದ್ಗುಣವಂತರಾಗಿ ಬಾಳಿ : ಡಾ.ಕಲ್ಲಡ್ಕ ಪ್ರಭಾಕರ ಭಟ್

ಆಗಷ್ಟ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಆ.11 NEWS DESK : ಒಳ್ಳೆಯ ಗುಣ ಮನುಷ್ಯನನ್ನು ಎತ್ತರಕ್ಕೆ ಏರಿಸುತ್ತದೆ. ಗುಣ ಇದ್ದಾಗ ಹಣ ಬರುತ್ತದೆ. ಆದರೆ ಹಣ ಇದ್ದಾಗ ಗುಣ ಇರುವುದಿಲ್ಲ. ಆದುದರಿಂದ ಎಲ್ಲರೂ ಸದ್ಗುಣವಂತರಾಗಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2024-25ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದಲ್ಲಿ ಅವರು ಮಾತಾಡಿದರು. ಕಾಲೇಜಿನಲ್ಲಿ ಇದುವರೆಗಿನ ಬೇರೆ ಬೇರೆ ವಿಭಾಗಗಳಲ್ಲಿ ವಿದ್ಯಾರ್ಜನೆಯನ್ನು ಮಾಡಿದ್ದೀರಿ. ಆದರೆ ಮುಂದೆ ಇರುವ ಸಮಾಜ ಎನ್ನುವುದು ಬೇರೆಯದೇ ವಿಭಾಗ ಇದರಿಂದ ಕಲಿಯುವುದು ಸಾಕಷ್ಟಿದೆ. ಅದರಲ್ಲಿ ಸಫಲರಾದರೆ ಜೀವನವನ್ನು ಸಾರ್ಥಕಪಡಿಸಿದಂತೆ ಎಂದು ಹೇಳಿದರು. ವಿವಿಧ ವಿಷಯಗಳಲ್ಲಿ ಸಂಶೋಧನೆಗಳನ್ನು ಮಾಡುವತ್ತ ಗಮನಹರಿಸಬೇಕು. ಹಣದ ಹಿಂದೆ ಓಡುವುದಲ್ಲ ಕೊಡುವುದರಲ್ಲಿಯೂ ಮುಂದಾಗಬೇಕು. ಸಮಾಜಕ್ಕೋಸ್ಕರ ಬದುಕುವುದರಿಂದ ಮಾನಸಿಕ ನೆಮ್ಮೆದಿ ಸಿಗುತ್ತದೆ ಎಂದರು. ಬರುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಾತಿಯನ್ನು ಬೆಳೆಸಿಕೊಂಡು ದೇಶದ ಉನ್ನತಿಯ ನೀತಿ ರಚನೆಯ ಹರಿಕಾರರಾಗಬೇಕು ಎಂದು ನುಡಿದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಪರೀಕ್ಷೆಯಲ್ಲಿ ಡಾಟಾ ಸೈನ್ಸ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ಸುಚಿತಾ, ದ್ವಿತೀಯ ರ್ಯಾಂಕ್ ಗಳಿಸಿದ ಪ್ರಜ್ಞಾಶಂಕರಿ, 3ನೇ ರ್ಯಾಂಕ್ ಗಳಿಸಿದ ಸಿಂಚನಲಕ್ಷ್ಮಿ, 8ನೇ ರ್ಯಾಂಕ್ ಗಳಿಸಿದ ಶ್ರೀಲಕ್ಷ್ಮಿ.ವಿ, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದಲ್ಲಿ ದ್ವಿತೀಯ ರ್ಯಾಂಕ್ ಪಡೆದುಕೊಂಡ ರವಿನಾರಾಯಣ.ಕೆ.ಎಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 7ನೇ ರ್ಯಾಂಕ್ ಗಳಿಸಿದ ರಾಹುಲ್.ಕೆ ಮತ್ತು 9ನೇ ರ್ಯಾಂಕ್ ಗಳಿಸಿದ ಲಿಖಿತ.ಕೆ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ನಿರ್ದೇಶಕ ಬಲರಾಮ ಆಚಾರ್ಯ.ಜಿ, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರಾದ ಸತ್ಯನಾರಾಯಣ.ಬಿ, ಸಂತೋಷ್ ಕುತ್ತಮೊಟ್ಟೆ, ಡಾ.ಯಶೋದಾ ರಾಮಚಂದ್ರ, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ದಾಖಲಾತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್, ವಿವಿಧ ವಿಭಾಗ ಮುಖ್ಯಸ್ಥರುಗಳು, ಕಾರ್ಯಕ್ರಮ ಸಂಯೋಜಕರಾದ ಪ್ರೊ.ಪ್ರಶಾಂತ, ಪ್ರೊ.ರೂಪಾ.ಜಿ.ಕೆ, ಪ್ರೊ.ಪ್ರದೀಪ್ ಕುಮಾರ್.ಕೆ.ಜಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಸ್ವಾಗತಿಸಿದರು. ಪ್ರೊ.ಪ್ರದೀಪ್ ಕುಮಾರ್.ಕೆ.ಜಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರೊ.ನಿಶಾ.ಜಿ.ಆರ್ ಹಾಗೂ ಪ್ರೊ.ಶ್ರೀಶರಣ್ಯ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.