Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮತಗಳ್ಳತನ ಆರೋಪ : ಲಕ್ಷ್ಮಣ್ ವಿರುದ್ಧ ಪ್ರಕರಣ ದಾಖಲಿಸಲು ವಿರಾಜಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ಮತಗಳ್ಳತನ ಆರೋಪ : ಲಕ್ಷ್ಮಣ್ ವಿರುದ್ಧ ಪ್ರಕರಣ ದಾಖಲಿಸಲು ವಿರಾಜಪೇಟೆ ಬಿಜೆಪಿ ಒತ್ತಾಯ*

August 11, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.11 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮತಗಳ್ಳತನದ ಕುರಿತು ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡುತ್ತಿರುವುದರಿಂದ ಇವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕೆಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕೂಡ ಮತಗಳ್ಳತನದ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ ಎಂದು ಎಂ.ಲಕ್ಷ್ಮಣ್ ಅವರು ಮಾಡಿರುವ ಆರೋಪವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಸೋಲಿನ ಹತಾಶೆಯಿಂದ ಹೊರ ಬರಲಾಗದೆ ಪರಿತಪಿಸುತ್ತಿರುವ ಲಕ್ಷ್ಮಣ್ ಅವರು ತಮ್ಮ ನಾಯಕ ರಾಹುಲ್ ಗಾಂಧಿ ಅವರಂತೆ ಯಾವುದೇ ದಾಖಲೆ ಇಲ್ಲದ ಆಧಾರ ರಹಿತ ಆರೋಪಗಳನ್ನು ಮಾಡುತ್ತಾ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಸುಳ್ಳು ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವ ಕಾನೂನನ್ನು ಕಾಂಗ್ರೆಸ್ ಸರಕಾರವೇ ಜಾರಿಗೆ ತಂದಿದೆ. ಈ ಕಾನೂನಿನನ್ವಯ ಲಕ್ಷ್ಮಣ್ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಸಂದರ್ಭ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇತ್ತು. ಚುನಾವಣಾ ಆಯೋಗ ಮತದಾರರ ಅಧಿಕೃತ ಪಟ್ಟಿಯನ್ನು ಅಂತಿಮಗೊಳಿಸುವುದಕ್ಕೂ ಮೊದಲು ಪರಿಶೀಲನೆಗಾಗಿ ಪ್ರತಿಯನ್ನು ರಾಜ್ಯ ಸರಕಾರದ ಅಧೀನದ ಅಧಿಕಾರಿಗಳಿಗೆ ಕಳುಹಿಸುತ್ತಾರೆ. ಅಲ್ಲದೆ ಇದರ ಬಗ್ಗೆ ತಕರಾರು ಇದ್ದಲ್ಲಿ, ಹೆಸರನ್ನು ಸೇರಿಸಲು ಅಥವಾ ಹೆಸರನ್ನು ಕೈಬಿಡಲು ಸಂಬಂಧ ಪಟ್ಟ ದಾಖಲೆಯನ್ನು ಸರಿಹೊಂದಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಬೇಕು. ಇದು ಯಾವುದನ್ನೂ ಮಾಡದ ಎಂ.ಲಕ್ಷ್ಮಣ್ ಅವರು ಸೋತ ಮನೋಸ್ಥಿತಿಯಿಂದ ಹೊರಬರಲಾಗದೆ ವಿನಾಕಾರಣ ಚುನಾವಣಾ ಆಯೋಗದ ವಿರುದ್ಧ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರ ಹಕ್ಕಿನ ವಿರುದ್ಧ ಮತ್ತು ಚುನಾವಣಾ ಆಯೋಗದ ವಿರುದ್ಧ ಸುಳ್ಳು ಆರೋಪ ಮಾಡಿ ಸಮಾಜದಲ್ಲಿ ಗೊಂದಲವನ್ನು ಸೃಷ್ಟಿಸುತ್ತಿರುವ ಲಕ್ಷ್ಮಣ್ ಅವರು ಸೂಕ್ತ ದಾಖಲೆಯನ್ನು ನೀಡಬೇಕು. ತಪ್ಪಿದಲ್ಲಿ ಸುಳ್ಳು ಆರೋಪದಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲಕ್ಷ್ಮಣ್ ಅವರು ಸೂಕ್ತ ದಾಖಲೆಯನ್ನು ಒದಗಿಸದೇ ಇದ್ದರೆ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ ಗೆಲುವು ಪ್ರಶ್ನಾರ್ಥಕವಾಗಿಯೇ ಉಳಿದು ಬಿಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆ ನೂತನ‌ ಬಿಇಓ ಆಗಿ ಕೃಷ್ಣಪ್ಪ ಅಧಿಕಾರ ಸ್ವೀಕಾರ*
Next Article *ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಅಯ್ಯಂಡ್ರ ಲಿಖಿತಾ ನೇಮಕ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.