Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿಶ್ವ ಬುಡಕಟ್ಟು ದಿನಾಚರಣೆ : ಶಿಕ್ಷಣದೊಂದಿಗೆ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಬೇಕು : ಈರಮಂಡ ಹರಿಣಿ ವಿಜಯ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿಶ್ವ ಬುಡಕಟ್ಟು ದಿನಾಚರಣೆ : ಶಿಕ್ಷಣದೊಂದಿಗೆ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಬೇಕು : ಈರಮಂಡ ಹರಿಣಿ ವಿಜಯ್ ಕರೆ

ಆಗಷ್ಟ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.11 NEWS DESK : ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವೊಂದಿದ್ದರೆ ಸಾಕು ಎನ್ನುವ ಮನೋಭಾವ ಬೆಳೆಯುತ್ತಿದೆ. ಇದು ಸರಿಯಲ್ಲ, ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಿದರೆ ಮಾತ್ರ ನಮಗೆ ಭವಿಷ್ಯವಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅಭಿಪ್ರಾಯಪಟ್ಟಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಪಾಲೇಮಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬರಿಗೆ ಶಿಕ್ಷಣದ ಅಗತ್ಯವಿದೆ, ಆದರೆ ಶಿಕ್ಷಣದ ಜೊತೆ ಜೊತೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗಾಗಿ ಬೆಳೆಸಿಕೊಂಡು ಹೋಗಬೇಕು ಎಂದರು. ಬುಡಕಟ್ಟು ಜನರು ಈ ಪರಿಸರದ ಅವಿಭಾಜ್ಯ ಅಂಗವಾಗಿದ್ದಾರೆ, ಅವರಿದ್ದರೆ ಪರಿಸರ ಉಳಿಯುತ್ತದೆ. ನಾವು ಕೂಡ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕೊಡಗಿನ ಗದ್ದೆ ಮತ್ತು ತೋಟಗಳು ಇಂದು ಮರೆಯಾಗುತ್ತಿದ್ದು, ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿವೆ. ಸುತ್ತಮುತ್ತಲ ಹಸಿರ ಪರಿಸರ ಅಭಿವೃದ್ಧಿಯ ಹೆಸರಿನಲ್ಲಿ ನಾಶವಾಗುತ್ತಿದೆ. ಇಂದು ಪರಿಸರ ನಾಶವಾದರೆ ಮುಂದೊಂದು ದಿನ ಮನುಷ್ಯರು ಕೂಡ ನಾಶವಾಗಬೇಕಾಗುತ್ತದೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. ಮುಖ್ಯ ಭಾಷಣ ಮಾಡಿದ ಚೊಟ್ಟೆಪಾರೆ ಹಾಡಿಯ ಬುಡಕಟ್ಟು ಜನಾಂಗದ ಮುಖಂಡ ಜೆ.ಕೆ.ರಾಮು ಅವರು ಇಂದು ಆದಿವಾಸಿಗಳು ಕೂಡ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ, ಆದರೆ ಬುಡಕಟ್ಟು ಸಂಪ್ರದಾಯವನ್ನು ಕಡೆಗಣಿಸದೆ ಆಚರಿಸಿಕೊಂಡು ಹೋಗುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುಮಾರು 52 ಆದಿವಾಸಿ ಮೂಲ ಸಮುದಾಯಗಳಿವೆ. ಈ ಸಮುದಾಯಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಯಾವುದೇ ಕಾರಣಕ್ಕೂ ಬುಡಕಟ್ಟು ಜನಾಂಗ ನಶಿಸಿ ಹೋಗಬಾರದು. ಸಾಮಾಜಿಕ ಪಿಡುಗುಗಳ ದುಷ್ಪರಿಣಾಮದ ಕುರಿತು ಆದಿವಾಸಿಗಳಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸಬೇಕಾಗಿದೆ ಎಂದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೆರಾ ಅವರು ಮಾತನಾಡಿ ಬುಡಕಟ್ಟು ಜನರು ಶಿಕ್ಷಣಕ್ಕೆ ಮಹತ್ವ ನೀಡಬೇಕು, ಉನ್ನತ ಶಿಕ್ಷಣವನ್ನು ಪಡೆಯಬೇಕು ಎಂದು ಕಿವಿಮಾತು ಹೇಳಿದರು. ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎನ್ನುವ ಕಾರಣಕ್ಕಾಗಿ ಸರಕಾರ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ, ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇವುಗಳನ್ನೆಲ್ಲ ಸದುಪಯೋಗಪಡಿಸಿಕೊಳ್ಳಬೇಕು, ವಿದ್ಯೆಯನ್ನು 10ನೇ ತರಗತಿಗೆ ಮೊಟಕುಗೊಳಿಸಬಾರದು. ಹೆಚ್ಚಿನ ವಿದ್ಯಾಭ್ಯಾಸ ಪಡೆಯುವ ಮೂಲಕ ದಬ್ಬಾಳಿಕೆ ಮತ್ತು ಅಕ್ರಮಗಳನ್ನು ಧೈರ್ಯದಿಂದ ಎದುರಿಸಬೇಕು. ಹಣವೊಂದಿದ್ದರೆ ಸಾಲದು ಶಿಕ್ಷಣ ಅತಿ ಮುಖ್ಯ, ವಿದ್ಯೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ ಎಂದರು. ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಅವರು ಮಾತನಾಡಿ ಆದಿವಾಸಿಗಳು ಸ್ವಂತ ಸೂರು ಹೊಂದಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಮತ್ತು ಹೋರಾಟಗಳಿಗೆ ಸ್ಪಂದಿಸಲಾಗುತ್ತಿದೆ. ಬಡವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು. ಮೂರ್ನಾಡು ಪೊಲೀಸ್ ಉಪ ಠಾಣೆಯ ಸಹಾಯಕ ಉಪ ನಿರೀಕ್ಷಕ ಮೊಣ್ಣಪ್ಪ ಪಿ.ಬಿ ಮಾತನಾಡಿ ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಗಾಂಜಾ ವ್ಯಸನಿಗಳಿಂದ ಪೋಷಕರು ಅನುಭವಿಸುತ್ತಿರುವ ಕಷ್ಟವನ್ನು ವಿವರಿಸಿದ ಅವರು ಗಾಂಜಾ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದೆ. ಬುಡಕಟ್ಟು ಜನರು ದುಶ್ಚಟಗಳಿಂದ ಮುಕ್ತರಾಗಿ ಉತ್ತಮ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು. ಹೊದ್ದೂರು ಗ್ರಾ.ಪಂ ಸದಸ್ಯರುಗಳಾದ ಕೆ.ಮೊಣ್ಣಪ್ಪ, ಕುಸುಮಾವತಿ ಹಾಗೂ ಹಮೀದ್ ಅವರುಗಳು ಬುಡಕಟ್ಟು ಜನಾಂಗದ ಸಮಸ್ಯೆಗಳು ಮತ್ತು ಪ್ರಗತಿಯ ಕುರಿತು ಮಾತನಾಡಿದರು. *ಸನ್ಮಾನ* ಬುಡಕಟ್ಟು ಜನಾಂಗದ ಸಾಧಕರಾದ ಲಕ್ಷ್ಮಿ, ಜೆ.ಕೆ.ರಾಮು ಹಾಗೂ ವೈ.ಪಿ.ತಮ್ಮಯ್ಯ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚೊಟ್ಟೆಪಾರೆ ಹಾಡಿ ತಂಡದ ವತಿಯಿಂದ ನಡೆದ ಹಾಡು ಮತ್ತು ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಬುಡಕಟ್ಟು ಜನಾಂಗದ ಹಾಡು ಹಾಡಿದ ಲಕ್ಷ್ಮಿ ಅವರು ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎ.ಎ.ಅಬ್ದುಲ್ಲ, ಸದಸ್ಯೆ ಲಕ್ಷ್ಮಿ, ಸ್ಕೌಟ್ ಮತ್ತು ಗೈಡ್ ಜಿಲ್ಲಾ ಕಾರ್ಯದರ್ಶಿ ವಸಂತಿ ಎಂ.ಎಂ, ಉಪಾಧ್ಯಕ್ಷರುಗಳಾದ ನೀಲಮ್ಮ, ಪಿ.ಎಂ.ರವಿ, ಅರುಣ್ ಕುಮಾರ್, ಖಜಾಂಚಿ ಶಾಂತಿ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಕಾರ್ಯದರ್ಶಿಗಳಾದ ನಳಿನಿ ಸುವರ್ಣ, ಸುಚಿತ, ಸೂರಜ್, ಗುಲ್ಶನ್, ವಾಟೆಕಾಡು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಕುಮಾರಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು. ಸ್ಕೌಟ್ ಅಂಡ್ ಗೈಡ್ಸ್ ಪ್ರಾರ್ಥಿಸಿ, ರಂಜಿತ್ ಮೌರ್ಯ ನಿರೂಪಿಸಿ, ಆರ್.ಪಿ.ಚಂದ್ರಶೇಖರ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.