Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಅಬ್ಬಾ ! ಕೊಡಗಿನಲ್ಲಿ 12 ಕೆ.ಜಿ ಗೂ ಅಧಿಕ ಗಾಂಜಾ ವಶ : ಆರೋಪಿಗಳ ಬಂಧನ
Uncategorized

ಅಬ್ಬಾ ! ಕೊಡಗಿನಲ್ಲಿ 12 ಕೆ.ಜಿ ಗೂ ಅಧಿಕ ಗಾಂಜಾ ವಶ : ಆರೋಪಿಗಳ ಬಂಧನ

ಆಗಷ್ಟ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಆ.11 : ಮೂವರು ಆರೋಪಿಗಳ ಸಹಿತ 12 ಕೆ.ಜಿ ಗೂ ಅಧಿಕ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರು ಪಟ್ಟಣದ ವಿಜಯನಗರ ನಿವಾಸಿಗಳಾದ ಅನೀಸ್ ಅಹಮ್ಮದ್(45), ಪಿ.ಚೇತನ್(40) ಹಾಗೂ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಂಸಂತೆ ದೊಡ್ಡಬೈರನಕುಟ್ಟೆ ಗ್ರಾಮದ ನಿವಾಸಿ ಜಿ.ಅಕ್ರಂ(48) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಾದ ಅನೀಸ್ ಅಹಮ್ಮದ್ ಹಾಗೂ ಪಿ.ಚೇತನ್ ಅವರ ಬಳಿಯಿಂದ 7 ಕೆ.ಜಿ 872 ಗ್ರಾಂ ಗಾಂಜಾ, ಒಂದು ಕಾರು, 1 ಮೊಬೈಲ್ ಮತ್ತು ಗಾಂಜಾ ಸಾಗಿಸಲು ಬಳಸಿದ್ದ ಪ್ಲಾಸ್ಟಿಕ್ ಚೀಲವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಣಸೂರು ಕಡೆಯಿಂದ ವಿರಾಜಪೇಟೆ ಮಾರ್ಗವಾಗಿ ಕೇರಳಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಿಸುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪೊಲೀಸರು ಪತ್ತೆ ಹಚ್ಚಿದರು. ಕೇರಳದಲ್ಲಿ ಮಾರಾಟ ಮಾಡಲು ಗಾಂಜಾ ಸಾಗಾಟವಾಗುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ವಿರಾಜಪೇಟೆ ಪೊಲೀಸರು ಆರ್ಜಿ ಪೆರುಂಬಾಡಿ ಬಳಿ ಬಂದ ಕಾರನ್ನು ಪರಿಶೀಲನೆಗೆ ಒಳಪಡಿಸಿದರು. ಈ ಸಂದರ್ಭ ಕಾರಿನಲ್ಲಿ 4 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ. ಸ್ಥಳದಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎನ್‌ಡಿಪಿಎಸ್ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ವಿರಾಜಪೇಟೆ ಡಿವೈಎಸ್‌ಪಿ ಮಹೇಶ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿ ಪ್ರಮೋದ್, ಎಎಸ್‌ಐ ಮಂಜುನಾಥ್ ಸಿಬ್ಬಂದಿಗಳಾದ ಧರ್ಮ, ಗಿರೀಶ್, ಜೋಸ್ ನಿಶಾಂತ್, ಕುಮಾರ್, ಹೇಮಂತ್ ಕುಮಾರ್, ಶಿವ ಕುಮಾರ್ ಹಾಗೂ ಶಿವ ಶರಣಪ್ಪ ಕಾರ್ಯಾಚರಣೆ ನಡೆಸಿದರು.
*ಮತ್ತೊಂದು ಪ್ರಕರಣ* ಮತ್ತೊಂದು ಪ್ರಕರಣದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಂಸಂತೆ ದೊಡ್ಡಬೈರನಕುಟ್ಟೆ ಗ್ರಾಮದ ನಿವಾಸಿ ಜಿ.ಅಕ್ರಂ(48) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ 4 ಕೆ.ಜಿ 710 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಹೀಗೆ 12 ಕೆ.ಜಿ ಗೂ ಅಧಿಕ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ನ.4: ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಸುಂಟಿಕೊಪ್ಪಕ್ಕೆ ವಿಶೇಷ ಸ್ಥಾನಮಾನವಿದೆ ಎಂದು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ…

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ನವೆಂಬರ್ 4, 2026

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.