Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ : ವೃಂದ ಮತ್ತು ನೇಮಕಾತಿ ನಿಯಮ ಜಾರಿಗೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ : ವೃಂದ ಮತ್ತು ನೇಮಕಾತಿ ನಿಯಮ ಜಾರಿಗೆ ಆಗ್ರಹ*

ಆಗಷ್ಟ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.12 : ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಬದಗಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿತು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷ ಹೆಚ್.ಎನ್.ಮಂಜುನಾಥ್ ಹಾಗೂ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ನೂರಾರು ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ತಿದ್ದುಪಡಿಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಹೋರಾಟಗಳನ್ನು ನಡೆಸಿದರು ಸರ್ಕಾರ ಅನುಮೋದನೆ ನೀಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. *ಆ.25 ರ ಗಡುವು* ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್ ಮಾತನಾಡಿ, ಬೇಡಿಕೆಯ ಈಡೇರಿಕೆಗಾಗಿ ಇದೇ ಆ.25 ರ ಗಡುವನ್ನು ರಾಜ್ಯ ಸರಕಾರಕ್ಕೆ ನೀಡಲಾಗುತ್ತಿದೆ. ಈ ಅವಧಿಯಲ್ಲಿಯೂ ಬೇಡಿಕೆ ಈಡೇರದಿದ್ದಲ್ಲಿ ಸೆ.3 ರಂದು ಬೆಂಗಳೂರಿನಲ್ಲಿ ‘ಫ್ರೀಡಂ ಪಾರ್ಕ್ ಚಲೋ’ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ. ಇದಕ್ಕೂ ಸರಕಾರ ಸ್ಪಂದಿಸದಿದ್ದಲ್ಲಿ, ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು. ಕರ್ನಾಟಕ ರಾಜ್ಯ ಸರಕಾರ 2017 ರಲ್ಲಿ ಶಿಕ್ಷಕರ ವೃಂದ ಮತ್ತು ನೇಮಕಾತಿ ಆದೇಶಕ್ಕೆ ತಿದ್ದುಪಡಿಯೊಂದನ್ನು ತರುವ ಮೂಲಕ 1 ರಿಂದ 7 ನೇ ತರಗತಿಯವರೆಗೆ ಪಾಠ ಮಾಡುತ್ತಿದ್ದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1 ರಿಂದ 5 ನೇ ತರಗತಿಗಷ್ಟೆ ಸೀಮಿತಗೊಳಿಸುವ ಅಸಂವಿಧಾನಿಕ ನಿಲುವನ್ನು ತಳೆಯಿತು. ಈ ಆದೇಶದೊಂದಿಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪಿಎಸ್‌ಟಿ ಮತ್ತು ಜಿಪಿಟಿ ಎಂದು ಒಡೆದು ಹಾಕಿತೆಂದು ಆರೋಪಿಸಿದರು. ಯಾವುದೇ ಆದೇಶವನ್ನು ಜಾರಿಗೊಳಿಸುವ ಸಂದರ್ಭ ಅದನ್ನು, ಅದು ಜಾರಿಯಾದ ದಿನಾಂಕದ ಪೂರ್ವಕ್ಕೆ ಅನ್ವಯಿಸುವಂತಿಲ್ಲ. ಹೀಗಿದ್ದೂ ವೃಂದ ಮತ್ತು ನೇಮಕಾತಿ ಆದೇಶವನ್ನು 2017ಕ್ಕೂ ಮುಂಚಿತವಾಗಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗು ಅನ್ವಯಿಸಲಾಗಿದೆಯೆಂದು ಬೇಸರ ವ್ಯಕ್ತಪಡಿಸಿದರು. ಇನ್ನು ಮುಂದೆ ಇದೇ ಸಮಸ್ಯೆಗೆ ಸಂಬಂಧಿಸಿದಂತೆ ಯಾವುದೇ ಮನವಿಗಳನ್ನು ಸಲ್ಲಿಸುವುದಿಲ್ಲವೆಂದ ಚೇತನ್, ಮುಂಬರುವ ದಿನಗಳಲ್ಲಿ ಈಗಾಗಲೆ ಮಾಡಿರುವ ಆದೇಶದಂತೆ ಪ್ರಾಥಮಿಕ ಶಾಲಾ ಶಿಕ್ಷಕರು 1ರಿಂದ 5ನೇ ತರಗತಿಯವರೆಗೆ ಮಾತ್ರ ಪಾಠ ಪ್ರವಚನ ಮಾಡುತ್ತಾರೆ. 6 ಮತ್ತು 7ನೇ ತರಗತಿಗಳಿಗೆ ಪಾಠ ಪ್ರವಚನ ಮಾಡುವುದನ್ನು ಸ್ಥಗಿತಗೊಳಿಸಲಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಸಂಘದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಟಿ.ಕೆ.ಬಸವರಾಜು, ಕಾರ್ಯದರ್ಶಿ ಕವಿತಾ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮೋಹನ್ ಪೆರಾಜೆ, ಕಾರ್ಯದರ್ಶಿ ಆಕಾಶ್, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಸುರೇಂದ್ರ, ಕಾರ್ಯದರ್ಶಿ ಅಶ್ವತ್ಥ್ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಹಲವು ಶಿಕ್ಷಕರು ಪಾಲ್ಗೊಂಡು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.