Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೀಡಿಯಾ ಕಿಟ್‍ಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೀಡಿಯಾ ಕಿಟ್‍ಗೆ ಅರ್ಜಿ ಆಹ್ವಾನ

ಆಗಷ್ಟ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಆ.13 NEWS DESK : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಅಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (Accriditation Card) ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2025-26ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‍ಗಳನ್ನು ಪಡೆದಿರುವುದಿಲ್ಲ ಎಂದು ರೂ. 200 ರ ಬಾಂಡ್‍ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು. ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ 2025ನೇ ಆಗಸ್ಟ್ 22 ರ ಸಂಜೆ 5:00 ಗಂಟೆಯೊಳಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಂ.17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಬಾಗದಲ್ಲಿ “ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ” ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.