Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಆಯೋಜಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಆಯೋಜಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಆಗಷ್ಟ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.13 NEWS DESK : ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಆ.20 ರಂದು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ, ಭಾಷಣ, ರಾಷ್ಟ್ರಗೀತೆ ಸ್ಪರ್ಧೆಯನ್ನು ಆಯೋಜಿಸುವಂತಾಗಬೇಕು. ವಿಜೇತ ಮಕ್ಕಳಿಗೆ ಸೂಕ್ತ ಬಹುಮಾನ ವಿತರಿಸಲು ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ನಿಲಯಾರ್ಥಿಗಳನ್ನು ಸನ್ಮಾನಿಸುವಂತಾಗಬೇಕು. ಡಿ.ದೇವರಾಜ ಅವರ ವಿಚಾರಧಾರೆಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಣ್ಣ ಸಣ್ಣ ಸಮಾಜಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಡಿ.ದೇವರಾಜ ಅರಸು ಅವರನ್ನು ಸದಾ ಸ್ಮರಿಸುವಂತಾಗಬೇಕು. ಡಿ.ದೇವರಾಜ ಅರಸು ಅವರ ವಿಚಾರಧಾರೆಗಳು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಸಮಾಜದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಎಸ್.ದೀಪಕ್ ಮಾತನಾಡಿ, ಆ.20 ರಂದು ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಪ್ರತೀ ವರ್ಷದಂತೆ ಈ ವರ್ಷವೂ ಆಚರಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದರು. ಹಿಂದುಳಿದ ವರ್ಗಗಳ ನಿಲಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಗೆಯೇ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ನಿಲಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯಕ್ರಮ ಇದೆ ಎಂದು ತಿಳಿಸಿದರು. ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಯಶಸ್ಸಿಗೆ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಸಹಕರಿಸುವಂತೆ ಕೋರಿದರು. ಜಿ.ಪಂ.ಉಪ ಕಾರ್ಯದರ್ಶಿ ಚಂದ್ರಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಹಶೀಲ್ದಾರ್ ಶ್ರೀಧರ, ಶಾಲಾ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕವಿತಾ, ಮೋಹನ್ ಕುಮಾರ್, ವ್ಯವಸ್ಥಾಪಕರಾದ ಶಿವಶಂಕರ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಸವಿತಾ ಸಮಾಜ, ಗೊಲ್ಲ ಸಮಾಜ, ಕುಂಬಾರ ಸಂಘ, ವಿವಿಧ ಸಮಾಜ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.