Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಟ್ಟಗೇರಿಯಲ್ಲಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ : ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಶಿಸ್ತು ಮುಖ್ಯ : ತಳೂರು ಕಿಶೋರ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೆಟ್ಟಗೇರಿಯಲ್ಲಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ : ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಶಿಸ್ತು ಮುಖ್ಯ : ತಳೂರು ಕಿಶೋರ್ ಕುಮಾರ್*

ಆಗಷ್ಟ್ 14, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಆ.14 NEWS DESK : ವಿದ್ಯಾರ್ಥಿ ಜೀವನದಲ್ಲಿ, ಚಂಚಲ ಮನಸ್ಸನ್ನು ನಿಯಂತ್ರಿಸಲು ಏಕಾಗ್ರತೆ ಮತ್ತು ಶಿಸ್ತು ಬಹಳ ಮುಖ್ಯ ಎಂದು ಬೆಟ್ಟಗೇರಿ ಉದಯ ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಭಾರತ ಸರ್ಕಾರ ಕಾಫೀ ಮಂಡಳಿ ನಿರ್ದೇಶಕರಾದ ತಳೂರು ಕಿಶೋರ್ ಕುಮಾರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ, ವಲಯ ಮತ್ತು ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಬೆಟ್ಟಗೇರಿ ಉದಯ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯ ಕುರಿತಂತೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ. ಇಂತಹ ವಿಶೇಷವಾದ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ನಡೆಸಿದ ಧರ್ಮಸ್ಥಳ ಸಂಸ್ಥೆಗೆ ಧನ್ಯವಾದ ಸಮರ್ಪಿಸುತ್ತೇನೆ ಎಂದರು. ಹತ್ತು ಹಲವು ಕಾರ್ಯಕ್ರಮಗಳನ್ನು ಸಮುದಾಯದ ಅಭಿವೃದ್ಧಿಗಾಗಿ ಲೋಕಾರ್ಪಣೆ ಮಾಡಿ ಅದರಲ್ಲೂ ಉದಯ ಪ್ರೌಢ ಶಾಲೆಯ ಅಭಿವೃದ್ಧಿ ಕೆಲಸ ಕಾರ್ಯಗಳಿಗಾಗಿ 1992ನೇ ಇಸವಿಯಲ್ಲಿ ಅನುದಾನ ರೂಪದಲ್ಲಿ ಧನಸಹಾಯ ನೀಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಬೃಹತ್ ಚಿಂತನೆಗಳನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್‍ನ ಸದಸ್ಯ ಬೆಳ್ಯನ ಚಂದ್ರಪ್ರಕಾಶ್ ಮಾತನಾಡಿ, ಪ್ರತೀ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ ಮಹನೀಯರನ್ನು ಮಾದರಿಯಾಗಿ ತೆಗೆದುಕೊಂಡು ಶ್ರದ್ಧೆಯಿಂದ ಕಲಿತರೆ ಜವಾಬ್ದಾರಿಯುತ ಸ್ಥಾನ ಹಾಗೂ ಹುದ್ದೆಯನ್ನು ಪಡೆಯಬಹುದು. ನಮ್ಮ ಪರಿಸರ ಹಾಗೂ ನಮ್ಮಲ್ಲಿ ಸ್ವಾಸ್ಥ್ಯ ಸಂಕಲ್ಪಕ್ಕೆ ಸ್ವಚ್ಛತೆ ಪ್ರಮುಖ ಅಸ್ತ್ರವಾಗಿದೆ. ಶಿಸ್ತು ಸಂಯಮ ಹಾಗೂ ದುಶ್ಚಟ ರಹಿತವಾಗಿ ಏಕಾಗ್ರತೆಯಿಂದ ನಡೆಸುವ ಜೀವನ ಸಮೃದ್ಧ ಆರೋಗ್ಯಕ್ಕೆ ಪೂರಕವಾಗಿದೆ ಎಂದರು. ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‍ನ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ್ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ 20,675 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ 17,51,947 ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1960 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 50 ಸಾವಿರಕ್ಕೂ ಮಿಕ್ಕಿ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದರು. ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ. ಪ್ರಪಂಚದ ಐದು ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು (ಉದಾ : ಕ್ಯಾನ್ಸರ್, ಕ್ಷಯ, ಹೆಚ್.ಐ.ವಿ, ಹೃದಯ ಸಂಬಂಧಿತ ಖಾಯಿಲೆಗಳು, ಮತ್ತು ಮಾದಕ ವ್ಯಸನ) ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ ಹೆಚ್ಚು ಸಡಿಲ ಮಾಡಿದರೂ ಹೆಚ್ಚು ಬಿಗಿ ಮಾಡಿದರೂ ಒಡೆಯುವುದು ಮಡಿಕೆಯೆ. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ ಎಂದರು. ಸಪ್ತ ವ್ಯಸನಗಳಲ್ಲಿ ಮಾದಕ ವ್ಯಸನ ಮೊದಲ ಮೆಟ್ಟಿಲು. ಈ ಮೆಟ್ಟಿಲನ್ನು ಜಾರಿದರೆ ಉಳಿದೆಲ್ಲಾ ಮೆಟ್ಟಿಲುಗಳು ತನ್ನಿಷ್ಟಕ್ಕೆ ಜಾರುತ್ತವೆ (ಮಾದಕ ವ್ಯಸನ, ಮಾಂಸ, ಮಾನಿನಿ, ಜೂಜುಜುಗಾರಿ, ಮೃಗವಿಹಾರ, ದಿವಾಸ್ವಪ್ನ ಮತ್ತು ದಿವಾಮೈಥುನ) ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ ಎಂದು ಹೇಳಿದರು. ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣ ದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ ಹರಿಸಬೇಕು. ಇವುಗಳಿಂದ ಹೊರಬರಲು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ. ದೃಢ ನಿರ್ಧಾರ, ಸಂಧಾನ ಕೌಶಲ್ಯ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ, ಸಂವಹನ ಕುಶಲತೆ ವ್ಯಕ್ತಿ – ವ್ಯಕ್ತಿ ಸಂಬಂಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೈರ್ಯ, ಸಮರಸ್ಯಾ ಪರಿಹಾರ, ಪರಾನುಭೂತಿ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ ಎಂದು ಸಲಹೆ ನೀಡಿದರು. ದೈವಶಕ್ತಿ, ಗುರುಶಕ್ತಿ, ಜನಶಕ್ತಿ, ಇಚ್ಛಾಶಕ್ತಿ ಈ ನಾಲ್ಕು ಪ್ರಮುಖ ಅಂಶಗಳಲ್ಲಿ ನಂಬಿಗಳನ್ನಿಟ್ಟು ನಡೆದರೆ ವಿದ್ಯಾರ್ಥಿ ಒಬ್ಬ ಆದರ್ಶ ವಿದ್ಯಾರ್ಥಿಯಾಗಿ ಬೆಳೆದು ತನ್ನ ಜೀವನವನ್ನು ತಾನೇ ರೂಪಿಸಿಕೊಳ್ಳುತ್ತಾನೆ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ. ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ಎಂದು ಹೇಳಿದರು. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ದೊರೆ ಮಾದಪ್ಪ, ಮುಖ್ಯ ಶಿಕ್ಷಕರಾದ ಹೇಮಂತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಬೆಟ್ಟಗೇರಿ ವಲಯದ ಮೇಲ್ವಿಚಾರಕರಾದ ವಿದ್ಯಾ, ಬೆಟ್ಟಗೇರಿ ಒಕ್ಕೂಟದ ಅಧ್ಯಕ್ಷರಾದ ಪದ್ಮವೇಣಿ, ಬೆಟ್ಟಗೇರಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಗೌರಮ್ಮ, ಶಾಲೆಯ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಗಳಾದ ಶ್ರೇಯ ಮತ್ತು ಮಾನ್ವಿ ಪ್ರಾರ್ಥಿಸಿದರು. ವಿದ್ಯಾ ಮೇಲ್ವಿಚಾರಕರು ಸ್ವಾಗತಿಸಿದರು. ಶಿಕ್ಷಕರುಗಳಾದ ಜಾಸ್ಮಿ ನಿರೂಪಿಸಿದರು. ಸೌಮ್ಯ ವಂದಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.