
ಮಡಿಕೇರಿ ಆ.14 NEWS DESK : 41 ಕೋಟಿ ರೂಪಾಯಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಮಡಿಕೇರಿಯ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಆ.15 ರಂದು ಕಾಮಗಾರಿಯ ಶಿಲಾನ್ಯಾಸ ನಡೆಯಲಿದೆ. ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಿ ಅನುದಾನ ಒದಗಿಸಿದ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಧನ್ಯವಾದ ಸಲ್ಲಿಸಿದರು.








