Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಸೈನಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ಸಂಭ್ರಮ : ವಿದ್ಯಾರ್ಥಿಗಳು ಸುಭದ್ರ ಹಾಗೂ ಭವ್ಯ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು : ಕರ್ನಲ್ ಅಮರ್ ಜೀತ್ ಸಿಂಗ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಸೈನಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ಸಂಭ್ರಮ : ವಿದ್ಯಾರ್ಥಿಗಳು ಸುಭದ್ರ ಹಾಗೂ ಭವ್ಯ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು : ಕರ್ನಲ್ ಅಮರ್ ಜೀತ್ ಸಿಂಗ್ ಕರೆ

ಆಗಷ್ಟ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಆ.15 NEWS DESK : ಕೊಡಗು ಸೈನಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸೈನಿಕ ಶಾಲೆಯ ಜನರಲ್ ತಿಮಯ್ಯ ಪರೇಡ್ ಮೈದಾನದಲ್ಲಿ ಶಾಲೆಯ ಪ್ರಾಂಶುಪಾರಾದ ಕರ್ನಲ್ ಅಮರ್ ಜೀತ್ ಸಿಂಗ್ ಧ್ವಜಾರೋಹಣ ನೆರವೇರಿ, ಗೌರವ ವಂದನೆ ಸ್ವೀಕರಿಸಿದರು. ನಂತರ ಶಾಲೆಯಲ್ಲಿನ ವೀರಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕರ್ನಲ್ ಅಮರ್ ಜೀತ್ ಸಿಂಗ್,  ಶಿಸ್ತು, ನಿಷ್ಠೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮೈಗೂಡಿಸಿಕೊಂಡು ಸುಭದ್ರ ಹಾಗೂ ಭವ್ಯ ಭಾರತದ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಜೀವಿತದ ಪ್ರತಿ ಕ್ಷಣದಲ್ಲಿಯೂ ದೇಶಪ್ರೇಮವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕೆಂದು ತಿಳಿಸಿದರು. ಶಾಲೆಯಲ್ಲಿನ ಸರ್ವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡು ಆದರ್ಶ ನಾಗರೀಕರಾಗಬೇಕೆಂದು ತಿಳಿ ಹೇಳಿದರು. ಶಾಲೆ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್ ಹಾಗೂ ಉಪಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಶಾಲೆಯ ಪ್ರಥಮ ಮಹಿಳೆ ದಿವ್ಯಾಸಿಂಗ್, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸಿಬ್ಬಂದಿ ವರ್ಗದ ಕುಟುಂಬ ಸದಸ್ಯರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಾಲೆಯ ವಿದ್ಯಾರ್ಥಿಗಳು ಶಿಸ್ತು ಹಾಗೂ ನಿಯಮಬದ್ಧತೆಯಿಂದ  ಪಥಸಂಚಲನ ನಡೆಸಿಕೊಟ್ಟರು. :: ಪ್ರಶಸ್ತಿ ವಿತರಣೆ ಹಾಗೂ ಸನ್ಮಾನ ::  2024-25ನೇ ಶೈಕ್ಷಣಿಕ ವರ್ಷದಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಾದ ಕೆಡೆಟ್ ಶರಣಬಸು ದಸ್ತರೆಡ್ಡಿಗೆ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ, ಕೆಡೆಟ್ ಯಶಸ್ ಎಸ್ ನಾಯಕ್ ಗೆ ಉತ್ತಮ ಶೈಕ್ಷಣಿಕ ವಿಭಾಗ ಪ್ರಶಸ್ತಿ, ಕೆಡೆಟ್ ಮೊಹಮ್ಮದ್ ಅಫ್ತಾಬ್ ಗೆ ಶ್ರೇಷ್ಠ ಕ್ರೀಡಾಪಟು ಪ್ರಶಸ್ತಿ, ಕೆಡೆಟ್ ಎಂ.ಕೆ.ಪ್ರಜ್ವಲ್ ಗೆ ಶ್ರೇಷ್ಠ ಗುಡ್ಡಗಾಡು ಓಟಗಾರ ಪ್ರಶಸ್ತಿ, ಕೆಡೆಟ್ ಲಕ್ಷ್ಯ ಕುಮಾರ್ ಸಿಂಗ್ ಗೆ ಶ್ರೇಷ್ಠ ವಿಜ್ಞಾನ ವಸ್ತು ಪ್ರದರ್ಶನ ಪ್ರಶಸ್ತಿ, ಕೆಡೆಟ್ ಆದಿತ್ಯ ಕುಮಾರ್ ಸಿಂಗ್ ಗೆ ಶ್ರೇಷ್ಠ ಸಾಹಿತ್ಯಿಕ ಸ್ಪರ್ಧೆಗಳ ಪ್ರಶಸ್ತಿ ಹಾಗೂ 7ನೇ ತರಗತಿಯ ಕೆಡೆಟ್ ಧನ್ವಿನ್ ಎಂ  ಗೆ ಪ್ರತಿಭಾವಂತ ವಿದ್ಯಾರ್ಥಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನಂತರ 2024-25ನೇ ಶೈಕ್ಷಣಿಕ ಸಾಲಿನ 10ನೇ ತರಗತಿಯ ಸಿಬಿಎಸ್ ಸಿ  ಬೋರ್ಡ್ ಪರೀಕ್ಷೆಗಳಲ್ಲಿ  ಅತಿ ಹೆಚ್ಚು ಅಂಕ ಗಳಿಸಿದ ಕೆಡೆಟ್ ಬಿ.ಯು.ದೀಪ್ತಿ, 10 ಮತ್ತು 12ನೇ ತರಗತಿಯ ಸಿಬಿಎಸ್ಸಿ  ಬೋರ್ಡ್ ಪರೀಕ್ಷೆಯ ವಿವಿಧ ವಿಷಯಗಳಲ್ಲಿ ಶೇ.100ಕ್ಕೆ 100  ಅಂಕಗಳನ್ನು ಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಅವರಿಗೆ ಬೋಧಿಸಿ, ಸೂಕ್ತ  ಮಾರ್ಗದರ್ಶನ ನೀಡಿದ ಶಿಕ್ಷಕರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ನೀಡಿ, ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಶಾಲೆಯಲ್ಲಿ ಅನುಪಮ ಸೇವೆಗೈದ ಶಾಲೆಯ ರಸಾಯನ ಶಾಸ್ತ್ರ ಪ್ರಯೋಗ ಸಹಾಯಕ ಖಾದರ್ ಮೋಹೀದ್ದೀನ್ ಸಿ.ಎಂ, ದ್ವಿತೀಯ ದರ್ಜೆ ಸಹಾಯಕರಾದ  ರಾಮಚಂದ್ರ ರಾವ್ ಹಾಗೂ ಸಾಮಾನ್ಯ ಸಿಬ್ಬಂದಿ ವರ್ಗದ  ಶರತ್ ಸಿ.ಆರ್ ಅವರಿಗೆ  ಪ್ರಶಂಸನಾ ಪ್ರಮಾಣಪತ್ರ ಹಾಗೂ ನಗದು ಬಹುಮಾನ ನೀಡುವುದರೊಂದಿಗೆ ಗೌರವಿಸಲಾಯಿತು. ಶಾಲೆಯ ಕುದುರೆ ಸವಾರಿಯ ತರಬೇತಿಯಲ್ಲಿ ವಿಶೇಷ ಸೇವೆ ಸಲ್ಲಿಸಿದ      ಶ್ರೀ ಅಜಯ್ ಸಿ ಮತ್ತು ಶ್ರೀ ಅರುಣ್ ಕುಮಾರ್ ಉತ್ತಮ ತರಬೇತುದಾರ  ಬಹುಮಾನ ನೀಡಲಾಯಿತು. ಇದರೊಂದಿಗೆ ಶಾಲೆಯ ಮೆನನ್ ನಿಲಯವು ಪ್ರದರ್ಶಿಸಿದ ಮನೋಜ್ಞವಾದ ಪಥಸಂಚಲನಕ್ಕೆ ‘ಶ್ರೇಷ್ಠ ಪಥಸಂಚಲನ’ ತಂಡವೆಂದು ಘೋಷಿಸಿ ಪ್ರಶಸ್ತಿಯನ್ನು ನೀಡಲಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿವರ್ಗದರಿಗೆ ವಿಶೇಷ ಭೋಜವನ್ನು ಏರ್ಪಡಿಸಲಾಗಿತ್ತು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೈಸೂರು, NEWS DESK ಅ. 16: ಮೈಸೂರು ದಸರಾ ಮಹೋತ್ಸವ–2026ರ ಅಂಗವಾಗಿ ಮೈಸೂರಿನ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪಿ.…

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.