
ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿಗಳು ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.









