Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಾರತಮ್ಯವಿಲ್ಲದೆ ಒಗ್ಗಟ್ಟಾಗಿ ಪ್ರಗತಿ ಸಾಧಿಸೋಣ : ಸಚಿವ ಎನ್.ಎಸ್.ಭೋಸರಾಜು : ಮಳೆಯ ನಡುವೆ ದೇಶಭಕ್ತಿ ಮೆರೆದ ಮಡಿಕೇರಿ ಮಕ್ಕಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಾರತಮ್ಯವಿಲ್ಲದೆ ಒಗ್ಗಟ್ಟಾಗಿ ಪ್ರಗತಿ ಸಾಧಿಸೋಣ : ಸಚಿವ ಎನ್.ಎಸ್.ಭೋಸರಾಜು : ಮಳೆಯ ನಡುವೆ ದೇಶಭಕ್ತಿ ಮೆರೆದ ಮಡಿಕೇರಿ ಮಕ್ಕಳು*

ಆಗಷ್ಟ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.15 : ಕೊಡಗು ಜಿಲ್ಲಾಡಳಿತದ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವವನ್ನು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು. *ಸಚಿವರ ಸಂದೇಶ* ಸ್ವಾತಂತ್ರ‍್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ನಾವೆಲ್ಲ ಒಂದಾಗಿ ನಡೆಯಬೇಕಿದೆ. ಸ್ವಾತಂತ್ರ‍್ಯದ ಪರಿಕಲ್ಪನೆಯ ಸಮಗ್ರತೆಯನ್ನು ಅರ್ಥೈಸಿಕೊಂಡು ಯಾವುದೇ ತಾರತಮ್ಯ ಇಲ್ಲದೆ ಎಲ್ಲರೂ ಒಟ್ಟುಗೂಡಿ ಪ್ರಗತಿಯತ್ತ ಚಿಂತನೆ ಮಾಡೋಣವೆಂದು ಸಚಿವ ಎನ್.ಎಸ್.ಭೋಸರಾಜು ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಕಳೆದ ಎರಡು ವರ್ಷಗಳಲ್ಲಿ ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ ಶ್ರಮಿಸಿದೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ತಲಾ ಆದಾಯ ಹೆಚಾಗ್ತಿದೆ. ಪ್ರತಿಯೊಬ್ಬರ ಕೊಳ್ಳುವ ಶಕ್ತಿ ವೃದ್ಧಿಸಿದೆ. ಬಡವರ ಸಂಖ್ಯೆ ಹಾಗೂ ಅಸಮಾನತೆ ಕಡಿಮೆಯಾಗುತ್ತಿದ್ದು, ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು. ಭಾರತೀಯರ ಚಳುವಳಿಯು ದೇಶದ ಸ್ವಾತಂತ್ರ್ಯದ ಹೋರಾಟದ ಮೈಲುಗಲ್ಲಾಗಿದೆ. ಸ್ವಾತಂತ್ರ‍್ಯ ಚಳುವಳಿಯಲ್ಲಿ ಶ್ರಮಿಸಿದ ಕೊಡಗಿನ ಗುಡ್ಡೆಮನೆ ಅಪ್ಪಯ್ಯಗೌಡ, ಪಂದ್ಯಂಡ ಬೆಳ್ಯಪ್ಪ, ಸಿ.ಎಂ.ಪೂಣಚ್ಚ, ಕೊಡಂದೇರ ಪೂವಯ್ಯ, ಕೋದಂಡ ಅಪ್ಪಯ್ಯ, ಸಿ.ಎಂ.ವೆಂಕಪ್ಪಯ್ಯ, ಗುಂಡುಗುಟ್ಟಿ ಮಂಜುನಾಥಯ್ಯ, ಎಂ.ಎಂ.ಸಿದ್ದಿಕ್. ಎಚ್.ಆರ್.ಕೃಷ್ಣಯ್ಯ, ಕೊಳ್ಳಿಮಾಡ ಕರುಂಬಯ್ಯ, ಮಂಡೇಪಂಡ ಕಾರ್ಯಪ್ಪ, ಮುಕ್ಕಾಟಿರ ಭೋಜಪ್ಪ, ಮಲ್ಲಂಗಡ ಚಂಗಪ್ಪ, ಮಾರಯ್ಯ ಮೊದಲಾದ ಮಹಾ ನಾಯಕರುಗಳನ್ನು ಸ್ಮರಿಸಿಕೊಳ್ಳಬೇಕಾಗಿದೆ. ಬಹು ಹಿಂದಿನಿಂದಲೂ ಕೊಡಗು ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡುವ ನಾಯಕರನ್ನು ಕೊಟ್ಟಿದೆ. ಅದೇ ಸಂದರ್ಭದಲ್ಲಿ ಭಾರತೀಯ ಸೈನ್ಯದಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿ ದೇಶಕ್ಕಾಗಿ ಸೇವೆ ಸಲ್ಲಿಸಿದ ಸ್ಮರಣೀಯರನ್ನು ಸಹ ನೀಡಿದೆ. ಈ ಪೈಕಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಭಾರತೀಯ ಸೇನಾ ಇತಿಹಾಸದಲ್ಲಿ ಎಂದಿಗೂ ಮರೆಯಲಾಗದ ರತ್ನಗಳು. ಈ ಬಾರಿ ದೀಪಾ ಬಾಸ್ತಿ ಅವರ ಹಾರ್ಟ್ ಲ್ಯಾಂಪ್(ಎದೆಯ ಹಣತೆ) ಕಥಾ ಸಂಕಲನಕ್ಕೆ ಅಂತರರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ದೊರೆತಿದ್ದು, ಕೊಡಗು ಜಿಲ್ಲೆಗೆ ಕೀರ್ತಿಯನ್ನು ತಂದಿದೆ ಎಂದು ಸಚಿವ ಭೋಸರಾಜು ಶ್ಲಾಘಿಸಿದರು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 35 ಕೋಟಿ ಅನುದಾನ ಲಭ್ಯವಿದೆ. ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ 3 ಮಾನವಹಾನಿ ಸಂಭವಿಸಿದ್ದು, ತಲಾ 5 ಲಕ್ಷಗಳನ್ನು ಸಂಬಂಧಪಟ್ಟವರಿಗೆ ಪಾವತಿಸಲಾಗಿದೆ. 41 ಮನೆಗಳು ಪೂರ್ಣಹಾನಿಯಾಗಿದ್ದು, ಒಟ್ಟು ರೂ.49.20 ಲಕ್ಷಗಳನ್ನು, 34 ಮನೆಗಳು ತೀವ್ರಹಾನಿ ಹಾಗೂ 181 ಮನೆಗಳು ಭಾಗಶಃ ಹಾನಿಯಾಗಿದ್ದು ಒಟ್ಟು 22.26 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಾವತಿಸಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪವನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆ ಬಂದಲ್ಲಿ ಮತ್ತಷ್ಟು ಎಚ್ಚರವಹಿಸುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ ಇದಕ್ಕೆ ಸರಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು. ಗಾಳಿಮಳೆಯ ನಡುವೆಯೂ ಆಕರ್ಷಕ ನೃತ್ಯಗಳನ್ನು ಪ್ರದರ್ಶಿಸಿ ವಿದ್ಯಾರ್ಥಿಗಳು ದೇಶಭಕ್ತಿ ಮೆರೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.