
ನಾಪೋಕ್ಲು ಆ.18 NEWS DESK : ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಕರ್ನಲ್ ನಾಯಡ ಬಿ.ಚಿನ್ನಪ್ಪ ವಿದ್ಯಾರ್ಥಿಗಳು ನಾಯಕತ್ವ ಮತ್ತು ಸಂಘ ಆಯೋಜಿಸುವ ವಿವಿಧ ಚಟುವಟಿಕೆಯಲ್ಲಿ ಭಾಗಿಯಾಗುವ ಮೂಲಕ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿ, ಶುಭ ಹಾರೈಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚೌರಿರ ಡಾ.ಜಗತ್ ತಿಮ್ಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ವೇಣು ಅಪ್ಪಣ್ಣ, ನಿರ್ದೇಶಕರಾದ ಹರೀಶ್ ದೇವಯ್ಯ, ಪ್ರಾಂಶುಪಾಲರಾದ ದೇವಕಿ, ಬೋಧಕರು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ : ದುಗ್ಗಳ ಸದಾನಂದ.









