
ನಾಪೋಕ್ಲು ಆ.8 NEWS DESK : ಕೊಡವ ಸಮಾಜ ರಸ್ತೆಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಅತ್ಯಂತ ಜನಸಂಚಾರ ಹಾಗೂ ವಾಹನ ದಟ್ಟಣೆ ಇರುವ ಈ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು 20 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆಯ ಉನ್ನತೀಕರಣ ಮಾಡಲು ಅನುದಾನ ನೀಡಿದ್ದರು. ಕಾಮಗಾರಿ ಆರಂಭಿಸಲು ಭೂಮಿ ಪೂಜೆ ನೆರವೇರಿಸಿದ ಶಾಸಕರು ಅತ್ಯಂತ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಇದೇ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ನೀಡಲಾದ ಮಲ ತ್ಯಾಜ್ಯ ನಿರ್ವಹಣಾ ಸಂಚಾರಿ ಘಟಕವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಗೆ ವಾಹನದ ಕೀಯನ್ನು ಶಾಸಕರು ಹಸ್ತಾಂತರ ಮಾಡಿ ಸೂಕ್ತವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಾಚೇಟಿರ ಕುಸು ಕುಶಾಲಪ್ಪ, ಅರುಣ್ ಬೇಬ, ಹೇಮಾವತಿ ಅರುಣ್, ಬಿ.ಎಂ.ಪ್ರತೀಪ, ಟಿ.ಎ.ಅಹಮದ್, ಸಾಬಾ ತಿಮ್ಮಯ್ಯ, ಕೆ.ಎ.ಇಸ್ಮಾಯಿಲ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಿಬ್ಬಂದಿಗಳು, ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹಾಗೂ ನಿರ್ದೇಶಕರುಗಳು, ಮಹಿಳಾ ಪರಿಷತ್ ಅಧ್ಯಕ್ಷ ನಿಶಾ ಮೇದಪ್ಪ ಹಾಗೂ ನಿರ್ದೇಶಕರುಗಳು, ಕ್ರೀಡಾ ಮತ್ತು ಸಂಸ್ಕೃತಿಕ ಸಂಘದ ಅಧ್ಯಕ್ಷ ಬಿದ್ದಾಟoಡ ತಮ್ಮಯ್ಯ, ಮೇರಿ ಚಿಟ್ಟಿಯಪ್ಪ, ಸದಸ್ಯರು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮದ ಉತ್ತಪ್ಪ, ಬಾಚಮಂಡ ಲವ ಚಿನ್ನಪ್ಪ, ನಾಪೋಕ್ಲು ಯೂಥ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಚರ್ಮದಂಡ ಸೋಮಣ್ಣ, ಸಮಿತಿ ಸದಸ್ಯರು ಸಂಪನ್ ಅಯ್ಯಪ್ಪ, ಎಂ.ಹೆಚ್.ಅಬ್ದುಲ್ ರೆಹಮಾನ್, ಮಹಮ್ಮದ್ ಹಾಜಿ ಕುಂಜಿಲ, ಕೇಲೇಟಿರ ದೀಪು, ಎಂ.ಎ ಮನ್ಸೂರ್ ಅಲಿ, ಅಝೀಜ್, ಲತೀಫ್ ಸಮಿತಿ ಸದಸ್ಯರು, ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ









