Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
  • *ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*
  • *ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಹೇಳಿಕೆ ಬಾಲಿಶ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಹೇಳಿಕೆ ಬಾಲಿಶ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ*

ಆಗಷ್ಟ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK  : ಜಾತ್ಯಾತೀತ ಪಕ್ಷವೆಂದು ಘೋಷಿಸಿಕೊಂಡು ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಜೆಡಿಎಸ್ ನ ಅಲ್ಪಸಂಖ್ಯಾತರ ಘಟಕಕ್ಕೆ ಅಲ್ಪಸಂಖ್ಯಾತರ ಅಭಿವೃದ್ಧಿಯ ಬಗ್ಗೆ ಮತ್ತು ಜನಪರ ಕಾಳಜಿಯ ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆ ಇಲ್ಲವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಅವರು, ನೆಲಕಚ್ಚಿರುವ ಜೆಡಿಎಸ್ ಪಕ್ಷದಲ್ಲಿ ತಮ್ಮ ಸ್ಥಾನವನ್ನು ಭದ್ರ ಮಾಡಿಕೊಳ್ಳುವ ಉದ್ದೇಶದಿಂದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಶಾಸಕರ ವಿರುದ್ಧ ಬಾಲಿಶ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ವಿದ್ಯಾವಂತ ಯುವ ಶಾಸಕರಿದ್ದಾರೆ, ಎಲ್ಲಾ ವರ್ಗದ ಜನರನ್ನು ಸಮಾನವಾಗಿ ವಿಶ್ವಾಸದಿಂದ ಕಾಣುತ್ತಿದ್ದಾರೆ. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಅನುದಾನವನ್ನು ತಂದು ಎರಡೂ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ಇದನ್ನು ಸಹಿಸದ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದರು. ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಇಲ್ಲಿಯವರೆಗೆ 1800 ಕೋಟಿ ರೂ. ಅನುದಾನ ತಂದಿದ್ದಾರೆ. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ 1.25 ಕೋಟಿ ರೂ.ಗಳ ಕಾಮಗಾರಿ ಮತ್ತು ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯಲ್ಲಿ 2 ಕೋಟಿ ರೂ.ಗಳ ಕಾಮಗಾರಿ ನಡೆದಿದೆ ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರು 1266 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ನಿರಾಶ್ರಿತರಿಗೆ 1395 ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ಕೆಲವು ಮನೆಗಳು ಪೂರ್ಣಗೊಂಡಿವೆ. ಉಳಿದ ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 15.76 ಕೋಟಿ ರೂ. ಅನುದಾನ ಬಂದಿದ್ದು, ಮಸೀದಿ, ಮದರಸಾ ಮತ್ತು ಸ್ಮಶಾನಗಳ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಅನುಮೋದನೆಗೊಳ್ಳಲು ಸಿದ್ಧವಾಗಿದೆ. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ನಾಪೋಕ್ಲುವಿನಲ್ಲಿ 3 ಕೋಟಿ ರೂ. ಮತ್ತು ಎಮ್ಮೆಮಾಡು ವ್ಯಾಪ್ತಿಯಲ್ಲಿ 2.10 ಕೋಟಿ ರೂ.ಗಳ ಕಾಮಗಾರಿ ನಡೆದಿದೆ. ಅಲ್ಲದೆ ಕ್ಷೇತ್ರದ ಎಲ್ಲಾ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಎಲ್ಲಾ ಊರುಗಳಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಆದರೆ ವಿನಾಕಾರಣ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಕ್ಫ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಅಧಿಕ ಸಂಖ್ಯೆಯಲ್ಲಿದ್ದ ಕಾರಣ ಅಭಿಪ್ರಾಯ ಸಂಗ್ರಹಣೆಗಾಗಿ ಸಭೆಗಳನ್ನು ನಡೆಸಲಾಗಿದೆ. ಇಬ್ಬರು ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಮೂಲಕ ಪಕ್ಷದ ವರಿಷ್ಠರಿಗೆ ಅಭಿಪ್ರಾಯಗಳನ್ನು ಕಳುಹಿಸಿಕೊಡಲಾಗಿದೆ. ಶೀಘ್ರದಲ್ಲೇ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು. ಪಕ್ಷದ ರಾಜ್ಯ ಮಟ್ಟದ ನಾಮ ನಿರ್ದೇಶಿತ ಸ್ಥಾನಗಳಿಗೆ ಬೇಡಿಕೆ ಇದ್ದು, ಈಗಾಗಲೇ ಪಟ್ಟಿಯನ್ನು ರಾಜ್ಯ ಮಟ್ಟಕ್ಕೆ ಕಳುಹಿಸಲಾಗಿದೆ. ಪಕ್ಷದ ವರಿಷ್ಠರು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕುಶಾಲನಗರ ಬ್ಲಾಕ್ ಅಧ್ಯಕ್ಷ ಕೆ.ಇ.ಅಬ್ದುಲ್ ರಜಾಕ್ ಮಾತನಾಡಿ, ಜಾತ್ಯಾತೀತ ಹೆಸರಿನ ಜೆಡಿಎಸ್ ಪಕ್ಷ  ಬಿಜೆಪಿಯೊಂದಿಗೆ ಕೈಜೊಡಿಸಿದ ಕಾರಣ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ನ್ನು ಹುಡುಕುವ ಪರಿಸ್ಥಿತಿ ಬಂದೊದಗಿದ್ದು, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ, ಇದು ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಯ್ಯದ್ ಬಾವ, ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಫೀಕ್ ಪೋಳುಮಂಡ, ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಎ.ಎಂ.ಉಮ್ಮರ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಮಾ೨೦: ಮುಸಲ್ಮಾನರ ಪವಿತ್ರ ಧರ್ಮಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಆಚರಿಸಲಾಯಿತು.…

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*

ಮಾರ್ಚ್ 20, 2026

*ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*

ಮಾರ್ಚ್ 20, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.