Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾರತದಲ್ಲಿ ವೈದ್ಯಕೀಯ ಪ್ರವಾಸೋದ್ಯಮದ ಕುರಿತು ಸಂಸತ್ತಿನಲ್ಲಿ ಪ್ರಸ್ತಾಪಿಸಿದ ಸಂಸದ ಯದುವೀರ್ ಒಡೆಯರ್ : ಕಳೆದ ಐದು ವರ್ಷಗಳ ಅವಧಿಯ ಮಾಹಿತಿಯನ್ನು ಹಂಚಿಕೊಂಡ ಕೇಂದ್ರ ಸಚಿವರು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಭಾರತದಲ್ಲಿ ವೈದ್ಯಕೀಯ ಪ್ರವಾಸೋದ್ಯಮದ ಕುರಿತು ಸಂಸತ್ತಿನಲ್ಲಿ ಪ್ರಸ್ತಾಪಿಸಿದ ಸಂಸದ ಯದುವೀರ್ ಒಡೆಯರ್ : ಕಳೆದ ಐದು ವರ್ಷಗಳ ಅವಧಿಯ ಮಾಹಿತಿಯನ್ನು ಹಂಚಿಕೊಂಡ ಕೇಂದ್ರ ಸಚಿವರು

ಆಗಷ್ಟ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ಆ.18 NEWS DESK : ಜಾಗತಿಕ ಮಟ್ಟದಲ್ಲಿ ಭಾರತ ವೈದ್ಯಕೀಯ ಸೇವೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. “ಹೀಲ್ ಇನ್ ಇಂಡಿಯಾ” ಎಂಬ ಯೋಜನೆಯಡಿ ಇದುವರೆಗೆ ಭಾರತಕ್ಕೆ ಬಂದಿರುವ ವಿದೇಶಿ ಪ್ರವಾಸಿಗರ ಸಂಖ್ಯೆ ಕುರಿತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದು, ಅದಕ್ಕೆ ಕೇಂದ್ರ ಸಚಿವರು ವಿವರ ನೀಡಿದ್ದಾರೆ. ಸಂಸತ್ತಿನ ಅಧಿವೇಶನದ ಲೋಕಸಭಾ ಕಲಾಪದಲ್ಲಿ ಸಂಸದ ಯದುವೀರ್ ಅವರ ಚುಕ್ಕಿ ರಹಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ಶೇಖಾವತ್, ಜಾಗತಿಕ ಸ್ವಾಸ್ಥ್ಯ ಪ್ರವಾಸೋದ್ಯಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಯದುವೀರ್, ಕಳೆದ ಐದು ವರ್ಷದಲ್ಲಿ ಭಾರತಕ್ಕೆ ಹಲವಾರು ದೇಶಗಳ ಪ್ರವಾಸಿಗರು ಬಂದು ಚಿಕಿತ್ಸೆ ಪಡೆದು ಕೊಂಡಿದ್ದಾರೆ. ವೈದ್ಯಕೀಯ ಪ್ರವಾಸೋದ್ಯಮಕ್ಕೆ ಹೆಚ್ಚು ಸ್ಪಂದನೆ ದೊರಕಿದೆ ಎಂದಿದ್ದಾರೆ. ನಮ್ಮ ಕೇಂದ್ರ ಸರ್ಕಾರ ಆರಂಭಿಸಿರುವ “ಹೀಲ್‍ಇನ್‍ಇಂಡಿಯಾ”ಯೋಜನೆಯಡಿ ಚಿಕಿತ್ಸೆಗೆ ಬರುವ ವಿದೇಶಿಗರು ಹಾಗೂ ಅವರ ಜೊತೆಗಿರುವ ವೀಸಾ ಸೌಲಭ್ಯವನ್ನು ಸರಳೀಕರಣಗೊಳಿಸಿ ನೀಡಲಾಗಿದೆ. ವೈದ್ಯಕೀಯ ಪ್ರವಾಸೋದ್ಯಮ ಸೇರಿದಂತೆ ಪ್ರವಾಸಿ ತಾಣಗಳು ಮತ್ತು ಉತ್ಪನ್ನಗಳ ಅಭಿವೃದ್ಧಿ ಮತ್ತು ಪ್ರಚಾರವನ್ನು ಆಯಾ ರಾಜ್ಯಸರ್ಕಾರ/ಕೇಂದ್ರಾಡಳಿತ ಪ್ರದೇಶದ (ಯುಟಿ) ಆಡಳಿತವು ಕೈಗೊಳ್ಳುತ್ತದೆ. ಸಚಿವಾಲಯವು ವಿವಿಧ ಯೋಜನೆಗಳು ಮತ್ತು ಉಪಕ್ರಮಗಳ ಮೂಲಕ ವೈದ್ಯಕೀಯ ಪ್ರವಾಸೋದ್ಯಮ ಸೇರಿದಂತೆ ದೇಶದ ವಿವಿಧ ಪ್ರವಾಸೋದ್ಯಮ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುವ ಮತ್ತು ಉತ್ತೇಜಿಸಲು ಸೂಕ್ತ ಬೆಂಬಲ ಒದಗಿಸುತ್ತಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ ಎಂದು ಸಂಸದರು ಸ್ಪಷ್ಟಪಡಿಸಿದ್ದಾರೆ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಎಲ್ಲ ಸಹಕಾರ/ಬೆಂಬಲ ಒದಗಿಸುತ್ತಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬರುವ ವಿದೇಶಿ ಪ್ರಜೆಗಳ ಭೇಟಿಗೆ ಅನುಕೂಲವಾಗುವಂತೆ, ಇ-ವೈದ್ಯಕೀಯ ವೀಸಾ/ಇ-ವೈದ್ಯಕೀಯ ಅಟೆಂಡೆಂಟ್ವೀಸಾ ಸೌಲಭ್ಯ ಒದಗಿಸುತ್ತಿದೆ ಎಂದು ಯದುವೀರ್ ವಿವರಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಸೇವೆಗಳ ರಫ್ತು ಉತ್ತೇಜನ ಮಂಡಳಿ (SEPC) “ಸಂಜೀವಿನಿ” ಎಂಬ ಅಂತರ ರಾಷ್ಟ್ರೀಯ ಆರೋಗ್ಯ ಮತ್ತು ಸ್ವಾಸ್ಥ್ಯ ಕಾರ್ಯಕ್ರಮ ಆಯೋಜಿಸುತ್ತದೆ, ಇದು ಭಾರತದ ಗುಣ ಪಡಿಸುವಿಕೆ ಮತ್ತು ಸ್ವಾಸ್ಥ್ಯದ ತಾಣದ ಸಾಮಥ್ರ್ಯಗಳನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

 

 

 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.