
ನಾಪೋಕ್ಲು ಆ.19 NEWS DESK : 2024-25ರ ಸಾಲಿನ ವಾರ್ಷಿಕ ರೂ.61.77 ಲಕ್ಷ ಲಾಭ ಗಳಿಸಿದ್ದು ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ ಸದಸ್ಯರಿಗೆ ಕೆಜಿಗೆ ರೂ1.50 ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಹೇಳಿದರು. ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 8ನೇ ವರ್ಷದ 2024-25ರ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರ ಕನಸಾದ ವಿಕಸಿತ ಭಾರತ ಸಂಕಲ್ಪಕ್ಕೆ ಸಹಕಾರ ಕ್ಷೇತ್ರವು ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ ಎಂದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಪಿ.ಎಂ.ಅಶೋಕ, ನಿರ್ದೇಶಕರುಗಳಾದ ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಕೆ.ಎಂ.ಪ್ರದೀಪ, ದೀನರಾಜ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಪಿ.ಟಿ.ಜಯರಾಮ, ಕಿರಣ ಬಂಗಾರಕೋಡಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ವಿನೀತ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಥೆಯ ಪ್ರಗತಿಯ ಬಗ್ಗೆ ಶ್ಲಾಗಿಸಿ, ಸಂಘದ ಲೆಕ್ಕಪತ್ರಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಕಾರ್ಯಕ್ರಮದಲ್ಲಿ ಗೌತಮ್ ಬಂಗಾರಕೋಡಿ ಅವರು ಪ್ರಾರ್ಥನೆಗೈದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಲೋಕೇಶ್ ಹೆಚ್ ಕೆ ರವರು ಸ್ವಾಗತಿಸಿದರು. ನಿರ್ದೇಶಕರಾದ ಪ್ರಮೀಳಾ ರವರು ವಂದಿಸಿದರು. ರಾಷ್ಟ್ರ ಗೀತೆಯೊಂದಿಗೆ ಮಹಾಸಭೆಯನ್ನು ಮುಕ್ತಾಯ ಗೊಳಿಸಲಾಯಿತು.
ವರದಿ : ದುಗ್ಗಳ ಸದಾನಂದ








