Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ : ಮೊಬೈಲ್ ಫೋಟೋ ಗಳಿಂದ ಛಾಯಾಗ್ರಾಹಕರ ವೃತ್ತಿ ಬದುಕಿಗೆ ಆತಂಕ : ಆವೃತ್ತಿ ಮಹದೇವಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ : ಮೊಬೈಲ್ ಫೋಟೋ ಗಳಿಂದ ಛಾಯಾಗ್ರಾಹಕರ ವೃತ್ತಿ ಬದುಕಿಗೆ ಆತಂಕ : ಆವೃತ್ತಿ ಮಹದೇವಪ್ಪ

ಆಗಷ್ಟ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಆ.19 NEWS DESK : ಮೊಬೈಲ್ ಫೋಟೋಗ್ರ್ರಾಫಿ ಪರಿಣಾಮ ವೃತ್ತಿ ಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕುಶಾಲನಗರದ ಗೌಡ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಒಂದೇ ನಾಣ್ಯದ ಎರಡು ಮುಖ ವೆಂದು ಬಣ್ಣಿಸಿದ ಅವರು, ಈ ಇಬ್ಬರ ಸಂಬಂಧ ಬಿಡಿಸಲಾಗದ ಅನುಬಂಧ ಎಂದು ಆವರು ಬಣ್ಣಿಸಿದರು. ತಮ್ಮ ಛಾಯಾಗ್ರಾಹಕ ವೃತ್ತಿ ಜೀವನದ ಅನುಭವವನ್ನು ವಿವರಿಸಿದ ಅವರು ನಮ್ಮ ಜೀವನದಲ್ಲಿ ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿಕೊಡಬೇಕೆಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ ಪತ್ರಕರ್ತರಷ್ಟೇ ಜವಾಬ್ದಾರಿ ಛಾಯಾಚಿತ್ರ ಗಾಹಕರಿಗಿದೆ. ಒಬ್ಬ ವ್ಯಕ್ತಿಯ ಭವಿಷ್ಯವನ್ನು ನಿರ್ಧರಿಸುವ ಶಕ್ತಿ ಛಾಯಾಚಿತ್ರಕ್ಕಿದೆ. ಯಾವುದೇ ಛಾಯಾಚಿತ್ರವು ಸಂಬಂಧಿಸಿದ ವಿಷಯಕ್ಕೆ ಪೂರಕವಾಗಿರಬೇಕೇ ಹೊರತು ಮಾರಕವಾಗಿರಬಾರದು ಎಂದು ಹೇಳಿದರು. ದತ್ತಿ ಪ್ರಶಸ್ತಿ ದಾನಿಗಳಾದ ಪತ್ರಕರ್ತ ರ ಸಂಘದ ಗೌರವ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಬದಲಾದ ಆಧುನಿಕ ಯುಗದಲ್ಲಿ ಆರ್ಟಿಫಿಷಲ್ ಇಂಟಲಿಜೆನ್ಸ್ ಯಿಂದಾಗಿ ಫೋಟೋ ಹಾಗೂ ವಿಡಿಯೋಗ್ರಫಿ ಕ್ಷೇತ್ರ ಸಾಕಷ್ಟು ಕಮರಿ ಹೋಗುತ್ತಿದೆ. ಇದರಿಂದ ಛಾಯಾಗ್ರಾಹಕರ ಹಾಗೂ ವಿಡಿಯೋಚಿತ್ರಗಾರರ ಭವಿಷ್ಯ ತೂಗುಯ್ಯಾಲೆಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಉದ್ಯಮಿ ಹೆನ್ರಿಕ್ ಮಾರ್ಟಿನ್ ಮಾತನಾಡಿ 2000ರ ಆಸುಪಾಸಿನಲ್ಲಿ ಒಂದು ಫೋಟೋ ಬೇಕಾದರೆ ಹತ್ತು ದಿನ ಬೇಕಾಗಿತ್ತು. ಆದರೆ ಈಗ ಕೆಲವೇ ಕ್ಷಣಗಳಲ್ಲಿ ಛಾಯಾಚಿತ್ರ ಲಭ್ಯವಾಗುತ್ತಿದೆ. ಬದಲಾದ ತಂತ್ರಜ್ಞಾನದ ಪ್ರಭಾವ ಇದಾಗಿದೆ ಎಂದರಲ್ಲದೆ, ಛಾಯಾಚಿತ್ರದ ನವ ತಾಂತ್ರಿಕತೆಯಿಂದ ಒಳಿತು ಹಾಗೂ ಕೆಡುಕುಗಳಿದೆ ಎಂದರು. ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಮಾತನಾಡಿ ಛಾಯಾಗ್ರಹಣ ಹಾಗೂ ವಿಡಿಯೋಗ್ರಹಕರು ಯಾವುದೇ ಸಭೆ ಸಮಾರಂಭ ಸೇರಿದಂತೆ ಹಲವು ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಾರೆ. ಅವರಿಂದಾಗಿ ನಮ್ಮ ಪದ್ದತಿ ಪರಂಪರೆ ಆಚರಣೆಗಳು ಮುಂದುವರೆದು ಬರುತ್ತಿದೆ ಎಂದು ಹೇಳಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಪ್ರಾಸ್ತಾವಿಕವಾಗಿ ಮಾತನಾಡಿ ಒಂದು ಚಿತ್ರ ಸಾವಿರ ಪದಗಳಿಗೆ ಸಮ. ಛಾಯಾಚಿತ್ರವಿಲ್ಲದ ಸುದ್ದಿಗಳು ಅಪೂರ್ಣವಾಗಿರುತ್ತದೆ ಎಂದರು. ಕೆಲವರಿಗೆ ಫೋಟೋ ತೆಗೆಸಿಕೊಳ್ಳುವುದು ಖುಷಿ ಯಾದರೆ ಮತ್ತೆ ಕೆಲವರಿಗೆ ಫೋಟೋ ತೆಗೆಯುವುದೇ ಖುಷಿ. ಇವರಿಬ್ಬರ ಸಂಗಮವೇ ಇಂದಿನ ವಿಶ್ವ ಛಾಯಾಗ್ರಹಣ ಕಾರ್ಯಕ್ರಮ ಎಂದರು. ಬಿಜೆಪಿ ಯುವ ಮುಖಂಡ ಹೇರೂರು ಚಂದ್ರಶೇಖರ್, ಗುಡ್ಡೆಹೊಸೂರು ಪಂಚಾಯಿತಿ ಯೂತ್ ಸಂಘಟನೆ ಎಂ.ಎಸ್. ರಂಜಿತ್, ಗುಡ್ಡೆಹೊಸೂರು ಗ್ರಾಪಂ ಸದಸ್ಯ ನಿತ್ಯಾನಂದ ಕುಡೆಕಲ್ ಮಾತನಾಡಿದರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅನಂತಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲೀನಿಕ್ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ಛಾಯಾಚಿತ್ರ ಸ್ಪರ್ಧೆಯ ವಿಜೇತರಾದ ವಿಘ್ನೇಶ್ ಭೂತನಕಾಡು, ಕೊಡಗು ಪತ್ರಕರ್ತರ ಸಂಘದಿಂದ ಆಯೋಜಿಸಲಾದ ಸುದ್ದಿ ಚಿತ್ರ ಸ್ಪರ್ಧೆಯ ವಿಜೇತರಾದ ಕೆ. ಎಸ್. ಅನಿಲ್, ಗುಡ್ಡೆ ಮನೆ ವಿಶುಕುಮಾರ್, ವಿಡಿಯೋಗ್ರಫಿಯಲ್ಲಿ ಮಹಮ್ಮದ್ ಹನೀಫ್, ಉಷಾಪ್ರೀತಂ, ಸಾರ್ವಜನಿಕರಿಗೆ ಆಯೋಜಿತಗೊಂಡಿದ್ದ ರೀಲ್ಸ್ ಸ್ಪರ್ಧೆಯ ವಿಜೇತರಾದ ಭಾಗೀರಥಿ ಹುಲಿತಾಳ, ರಮ್ಯಾ ಮಾಚಯ್ಯ ಅವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಪತ್ರಕರ್ತರ ಸಂಘದಿಂದ ಛಾಯಾಗ್ರಾಹಕರಾದ ಮಹಮ್ಮದ್ ಹನೀಫ್ ಹಾಗೂ ಸಂದೀಪ್ ಅವರನ್ನು ಸನ್ಮಾನಿಸಲಾಯಿತು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಪುಲಿಯಂಡ ರಾಮ್ ದೇವಯ್ಯ ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸಂಘದಲ್ಲಿ ಹಿರಿಯ ಪತ್ರಕರ್ತರಿಗೆ ಸ್ಥಾಪಿಸಿರುವ ದತ್ತಿ ಪ್ರಶಸ್ತಿಯನ್ನು ಸುಂಟಿಕೊಪ್ಪದ ಹಿರಿಯ ವರದಿಗಾರ ಕೆ.ಎಚ್.ಶಿವಣ್ಣ ಅವರಿಗೆ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಘದ ನವೀನ್ ಚಿನ್ನಪ್ಪ ಅವರನ್ನು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ನಿರ್ದೇಶಕರಾದ ಗುಡ್ಡೆಮನೆ ವಿಶ್ವಕುಮಾರ್ ಅವರಿಂದ ಛಾಯಾಚಿತ್ರಗಳ ಆಕರ್ಷಕ ಪ್ರದರ್ಶನ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸಿಲ್ವೆಸ್ಟರ್ ಪ್ರಾರ್ಥಿಸಿದರೆ, ವಿಘ್ನೇಶ್ ಭೂತನ ಕಾಡು ಸ್ವಾಗತಿಸಿ, ಕೆ.ತಿಮ್ಮಪ್ಪ ನಿರೂಪಿಸಿ, ನವೀನ್ ಚಿನ್ನಪ್ಪ ವಂದಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.