Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಕಾಫಿ ಬೆಳೆಗಾರರ ಸಹಕಾರದ ಆರ್ಥಿಕ ಸಮಸ್ಯೆ ಬಗೆಹರಿಸಲು ಯದುವೀರ್‌ ಸಂಕಲ್ಪ :  ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಕೊಡಗು ಕಾಫಿ ಬೆಳೆಗಾರರ ಸಹಕಾರದ ಆರ್ಥಿಕ ಸಮಸ್ಯೆ ಬಗೆಹರಿಸಲು ಯದುವೀರ್‌ ಸಂಕಲ್ಪ :  ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದ

ಆಗಷ್ಟ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ಆ.19 NEWS DESK : ದಶಕಗಳ ಕಾಲದಿಂದಲೂ ಕಾರ್ಯ ನಿರ್ವಹಿಸುತ್ತಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ನಿಯಮಿತದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಕಲ್ಪ ತೊಟ್ಟಿದ್ದಾರೆ. ಕೊಡಗು ಕಾಫಿ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಯದುವೀರ್‌ ಒಡೆಯರ್‌ ಮನವಿ ಮಾಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿದ ಸಂಸದ ಯದುವೀರ್‌, ಮನವಿ ಸಲ್ಲಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ. ಈ ಕುರಿತು ಸಂಸದರು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದಶಕಗಳ ಹಿಂದೆ ಸ್ಥಾಪನೆಯಾದ ಸಂಸ್ಥೆ 1956 ರಲ್ಲಿ ಸ್ಥಾಪನೆಯಾದ ಕಾಫಿ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 10,000–12,000 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರಿಗೆ ಸಾಕಷ್ಟು ಬೆಂಬಲ ಒದಗಿಸಿದೆ. ಸುಮಾರು 40,000 ಕುಟುಂಬಗಳಿಗೆ ಬೆನ್ನೆಲುಬಾಗಿದೆ. ಸಾವಿರಾರು ಎಸ್ಟೇಟ್ ಕಾರ್ಮಿಕರಿಗೆ ಉದ್ಯೋಗ ನೀಡಿದೆ. ಇಂಥ ಸಂಘ ಮಾರುಕಟ್ಟೆ ಏರಿಳಿತಗಳು ಹಾಗೂ ಬಂಡವಾಳದ ಕೊರತೆಯಿಂದಾಗಿ, 1995-96 ರಲ್ಲಿ ₹6.85 ಕೋಟಿ ನಷ್ಟವನ್ನು ಅನುಭವಿಸಿತು ಎಂದು ತಿಳಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ. :: ಭಾರಿ ಬಡ್ಡಿ ಹೇರಿಕೆ ::  ಕಾಫಿ ಮಂಡಳಿಯು 12.9.2011 ರಂದು ನೀಡಿದ ತೀರ್ಪಿನ ಪ್ರಕಾರ, ಸೊಸೈಟಿಯು ₹1,55,28,034 ಬಡ್ಡಿ ಪಾವತಿಸಲು ಸೂಚಿಸಿತ್ತು. ನಂತರ ಕಾಫಿ ಮಂಡಳಿಯು 20.09.2015 ರಂದು ಪತ್ರ ಬರೆದು, ಅಸಲು ಪಾವತಿಸಿದರೆ ಬಡ್ಡಿಯನ್ನು ಮನ್ನಾ ಮಾಡುವ ಅವಕಾಶ ಒದಗಿಸಿತ್ತು. ಅದರನ್ವಯ ಸೊಸೈಟಿಯು 22.12.2015 ರಂದು ₹1,55,28,090 ಅನ್ನು ಪಾವತಿಸಿತು. ಆದರೆ 2017 ರಲ್ಲಿ ಕಾಫಿ ಮಂಡಳಿಯು ₹5,83,85,155 ಬಡ್ಡಿ ವಿಧಿಸಿ ಮತ್ತು ಹೆಚ್ಚಿನ ಮೊತ್ತದ ವೆಚ್ಚವನ್ನು ಪಾವತಿಸಲು ಪತ್ರ ಬರೆಯಿತು ಎಂದು ಕೇಂದ್ರ ಸಚಿವರಿಗೆ ವಸ್ತುಸ್ಥಿತಿ ತಿಳಿಸಲಾಯಿತು ಎಂದು ಸಂಸದರು ಸ್ಪಷ್ಟಪಡಿಸಿದ್ದಾರೆ. ಸೊಸೈಟಿಯು ಈಗ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ₹13.13 ಕೋಟಿ ನಷ್ಟ ಅನುಭವಿಸಿದೆ. ಈ ಸಂದರ್ಭದಲ್ಲಿ ಬಡ್ಡಿಯನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಬಡ್ಡಿ ಪಾವತಿಸಿದರೆ, ಸೊಸೈಟಿಯು ಆರ್ಥಿಕವಾಗಿ ದಿವಾಳಿಯಾಗಲಿದೆ. ಇದರಿಂದ ಸುಮಾರು ಒಂದು ಲಕ್ಷ ಜನರು ತೀವ್ರ ಪರಿಣಾಮ ಎದುರಿಸಬೇಕಾದೀತು ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ. :: ವಾಣಿಜ್ಯ, ಹಣಕಾಸು ಸಚಿವಾಲಯಕ್ಕೆ ಮನವಿ ::  ಈ ನಿಟ್ಟಿನಲ್ಲಿ ವಾಣಿಜ್ಯ ಸಚಿವರು ಕೂಡಲೇ ಮಧ್ಯಪ್ರವೇಶಿಸಿ, ಸೊಸೈಟಿಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದು ಸಂಸದರು ಹೇಳಿದ್ದಾರೆ. ಈ ಸಂಬಂಧ ಹಣಕಾಸು ಸಚಿವಾಲಯ ಜೊತೆಗೆ ಸಮನ್ವಯ ಸಾಧಿಸಿ ಸಂಸ್ಥೆಗೆ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು ಎಂದು ಯದುವೀರ್‌ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.