Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಚುಚ್ಚುಮದ್ದು ಅರಿವು ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಚುಚ್ಚುಮದ್ದು ಅರಿವು ಕಾರ್ಯಕ್ರಮ*

ಆಗಷ್ಟ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.19 NEWS DESK : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಅರಿವು ಕಾರ್ಯಕ್ರಮವು ನೆರವೇರಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಇಲಾಖೆಯ ಯೋಜನೆಗಳ ಬಗ್ಗೆ, ಬಾಲ್ಯ ವಿವಾಹದ ಕುರಿತು, ಸ್ತನ್ಯಪಾನ ಸಪ್ತಾಹ, ಪೋಷಣ್ ಟ್ರ್ಯಾಕರ್, ಪೋಷಣ್ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯವರೊಂದಿಗೆ ಸೇರಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲಹೆ ಮಾರ್ಗದರ್ಶನ ನೀಡುವುದಲ್ಲದೆ, ಕಾಲಕಾಲಕ್ಕೆ ನೀಡಿದ ಸಲಹೆಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದರು. ಭಾಗ್ಯಲಕ್ಷ್ಮಿ ಮತ್ತು ಮಾತೃವಂದನ ಫಲಾನುಭವಿಗಳನ್ನು ಭೇಟಿ ಮಾಡಿ ಹಣ ಪಾವತಿ ಯಾಗಿರುವ ಬಗ್ಗೆ ಮಾಹಿತಿ ಪಡೆದರು. ಸಮುದಾಯ ಆರೋಗ್ಯ ಅಧಿಕಾರಿ ಕಲ್ಮೇಶ್ ಅವರು ಮಾತನಾಡಿ, ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. “ಹೊಸ ಹೆಜ್ಜೆ “ಕಾರ್ಯಕ್ರಮದಡಿ ವಿವಾಹಿತರು ತಾವು ಯಾವಾಗ ಪೋಷಕರಾಗಬೇಕು ಎಂಬುದನ್ನು ಅರಿತು ಮಾನಸಿಕವಾಗಿ ಸದೃಢರಾದಾಗ ಮಗುವನ್ನು ಪಡೆಯಲು ಮುಂದಾಗಬೇಕು ಎಂದು ತಿಳಿಸಿದರು. ಅಂತರದ ಹೆರಿಗೆಯ ಬಗ್ಗೆ ಕುಟುಂಬ ಕಲ್ಯಾಣ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ಸಹಾಯಕರಾದ ಕುಸುಮಾ ಮಾತನಾಡಿ ಚುಚ್ಚುಮದ್ದಿನ ಬಗ್ಗೆ ಮಾಹಿತಿ ನೀಡಿದರು. ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಪ್ರತಿ ತಿಂಗಳು ಮಕ್ಕಳಿಗೆ ತಪ್ಪದೇ ತೂಕ ಎತ್ತರವನ್ನು ಹಾಕಿಸಿ ಮಾಹಿತಿಯನ್ನು ಪೋಷಕರು ನಿರ್ವಹಿಸಿಕೊಳ್ಳುವುದರಿಂದ ಮಕ್ಕಳ ಬೆಳವಣಿಗೆ ಸರಿಯಾಗಿ ಆಗುತ್ತಿರುವ ಬಗ್ಗೆ ತಿಳಿದುಕೊಳ್ಳಬಹುದಾಗಿದ್ದು, ಪೋಷಕರು ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ಅಂಗನವಾಡಿಯಲ್ಲಿ ತೂಕ ಹಾಕಿಸಬೇಕೆಂದು ಕರೆ ನೀಡಿದರು. ಎಫ್‍ಆರ್‍ಎಸ್ ಬಳಕೆ ಬಗ್ಗೆ ಮಾಹಿತಿ ನೀಡಿದರು. ಸ್ಥಳೀಯವಾಗಿ ಸಿಗುವ ಸೊಪ್ಪು ತರಕಾರಿ ಹಣ್ಣುಗಳನ್ನು ಬಳಸಲು ಮಾಹಿತಿ ನೀಡಿದರು. ನುಗ್ಗೆ ಸೊಪ್ಪಿನ (ಮೊರೆಂಗಾ) ಮಹತ್ವದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕರಾದ ಮಮತ ಮಾತನಾಡಿ, ಮಹಿಳೆಯರಿಗಾಗಿ ಜಿಲ್ಲಾ ಮಹಿಳಾ ಸಬಲೀಕಣ ಘಟಕ ಕಾರ್ಯ ನಿರ್ವಹಿಸುತ್ತಿದ್ದು, 181 ಮಹಿಳಾ ಸಹಾಯವಾಣಿ, 1098 ಮಕ್ಕಳ ಸಹಾಯವಾಣಿ, ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆಗಾಗಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯದ ಸೌಲಭ್ಯವನ್ನು, ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಸಂದರ್ಭದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಇದ್ದು ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲೀಸ್ಟ್ ಕೇಶಿನಿ ಎಸ್.ಆರ್. ಹಾಗೂ ಪೋಷಣ್ ಅಭಿಯಾನದ ಜಿಲ್ಲಾ ಸಂಯೋಜರಾದ ನಿತಿನ್, ಆಶಾ ಕಾರ್ಯಕರ್ತೆ ಲೀಲಾವತಿ, ಅಂಗನವಾಡಿ ಕಾರ್ಯಕರ್ತೆ ಶೋಭಾ, ಸಹಾಯಕಿ ಹೇಮಲತಾ ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತವನ್ನು ಕಡಗದಾಳು ಅಂಗನವಾಡಿ ಕಾರ್ಯಕರ್ತೆ ಅನಿಲ ಕೆ.ಆರ್. ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*

ಮಾರ್ಚ್ 20, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.19 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾಗಮಂಡಲ…

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.