
ಬೆಂಗಳೂರು ಆ.20 NEWS DESK : ಆಧುನಿಕ ಭಾರತದ ನಿರ್ಮಾತೃ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಚರಿಸಲ್ಪಡುವ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೋಧಿಸಿದರು. ಈ ಸಂದರ್ಭ ಸಚಿವರಾದ ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಹಾಗೂ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರತಿಜ್ಞೆ ಸ್ವೀಕರಿಸಿದರು.









