Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆನ್ಲೈನ್‍ ಕುರಿತು ಜಾಗೃತಿ ಕಾರ್ಯಕ್ರಮ : ಸೈಬರ್ ಕ್ರೈಂ ಬಗ್ಗೆ ಅರಿವು ಅಗತ್ಯ : ಪಿಎಸ್‍ಐ ಉದಯ ರವಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆನ್ಲೈನ್‍ ಕುರಿತು ಜಾಗೃತಿ ಕಾರ್ಯಕ್ರಮ : ಸೈಬರ್ ಕ್ರೈಂ ಬಗ್ಗೆ ಅರಿವು ಅಗತ್ಯ : ಪಿಎಸ್‍ಐ ಉದಯ ರವಿ

ಆಗಷ್ಟ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಆ.20  NEWS DESK : ಆಧುನಿಕ ಸಮಾಜದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯಗಳ ಬಳಕೆ ವ್ಯಾಪಕವಾಗಿ ಹೆಚ್ಚಳವನ್ನು ಕಂಡಿದ್ದು, ಇದು ವ್ಯಕ್ತಿಯೊಬ್ಬನ ಚಾರಿತ್ರ್ಯ ಹಾಗೂ ಹಣಕಾಸಿನ ಮೂಲವನ್ನು ನಾಶಮಾಡುತ್ತವೆ. ಅದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದು ಪುತ್ತೂರು ಟ್ರಾಫಿಕ್  ಪೊಲೀಸರು ಠಾಣೆಯ ಪಿಎಸ್‍ಐ ಉದಯ ರವಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿಯ ಆಶ್ರಯದಲ್ಲಿ ನಡೆದ ಆನ್ಲೈನ್‍ನಲ್ಲಿ ಸುರಕ್ಷಿತವಾಗಿರಿ ಎನ್ನುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಯಾವಾಗ ಮಾಹಿತಿ ತಂತ್ರಜ್ಞಾನದ ಕ್ರಾಂತಿಯಾಯಿತೋ ಅದರ ಜತೆಯಲ್ಲಿ ಈ ಅಪರಾಧ ಪ್ರಕರಣಗಳೂ ಹೆಚ್ಚಾಯ್ತು. ಆನ್ಲೈನ್ ಮೂಲಕ ಮಕ್ಕಳ ದೌರ್ಜನ್ಯ, ಇಚ್ಚೆಗೆ ವಿರುದ್ದವಾಗಿ ಮಾನಸಿಕ ಹಿಂಸೆಯನ್ನು ನೀಡುವುದು, ಡೇಟಿಂಗ್ ಆಪ್ ಮೂಲಕ ತೊಂದರೆಯನ್ನು ನೀಡುವುದು, ಉದ್ಯೋಗದ ಆಮಿಷವೊಡ್ಡಿ ಹಣ ಸಂಗ್ರಹಿಸುವುದು, ಅಧಿಕ ಲಾಭಾಂಶದ ನೆಪದಿಂದ ಹೂಡಿಕೆ ಮಾಡಿಸುವುದು ಡಿಜಿಟಲ್ ಅರೆಸ್ಟ್, ಫೋನ್ ಮೂಲಕ ಒಟಿಪಿಗಳನ್ನು ಸಂಗ್ರಹಿಸಿ ಹಣ ಲಪಟಾಯಿಸುವುದು ಇವೇ ಮೊದಲಾದ ಅಪರಾಧಗಳು ಸಾಮಾನ್ಯವಾಗಿದ್ದು ಇದರ ಕಡಿವಾಣಕ್ಕಿರುವ ಕಟ್ಟುನಿಟ್ಟಿನ ಕಾಯ್ದೆಯ ಬಗ್ಗೆ ತಿಳುವಳಿಕೆ ಹೊಂದಬೇಕು ಎಂದರು. ನೀವು ಬಳಸುವ ಸಾಫ್ಟ್‍ವೇರ್‍ಗಳನ್ನು, ಆಪರೇಟಿಂಗ್ ಸಿಸ್ಟಮ್‍ಗಳನ್ನು ಕಾಲಕಾಲಕ್ಕೆ ಉನ್ನತೀಕರಿಸುವುದು, ಆಂಟಿ-ವೈರಸ್‍ಗಳನ್ನು ಬಳಸುವುದು, ಆಗಾಗ ಪಾಸ್ವರ್ಡ್‍ಗಳನ್ನು ಬದಲಿಸುವುದು ಮತ್ತು ಬಲವಾದ ಪಾಸ್ವರ್ಡ್‍ಗಳನ್ನು ಬಳಸುವುದು, ವಾಟ್ಸಾಪ್ ಅಥವಾ ಇ-ಮೈಲ್‍ಗಳಲ್ಲಿ ಬರುವ ಅಪರಿಚಿತ ಲಿಂಕ್‍ಗಳನ್ನು ಬಳಸದೇ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಸುರಕ್ಷಿತ ವೈಫೈ ನೆಟ್ವರ್ಕ್‍ಗಳನ್ನು ಬಳಸದೇ ಇರುವುದರಿಂದ ಸೈಬರ್ ಅಪರಾಧಗಳಿಗೆ ತುತ್ತಾಗದೇ ಇರಬಹುದು ಎಂದರು. ಸೈಬರ್ ಭದ್ರತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಅಪರಾಧಗಳಿಗೆ ಒಳಗಾದಾಗ ತಕ್ಷಣಕ್ಕೆ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಜಾಲತಾಣಗಳನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿದರೆ ಏನೂ ತೊಂದರೆಯಾಗದು ಎಂದು ಕಿವಿಮಾತು ಹೇಳಿದರು
ಸೈಬರ್ ಅಪರಾಧಗಳ ಒಳನೋಟಗಳು ಈ ವಿಷಯದ ಬಗ್ಗೆ ನಮ್ಮ ಆತ್ಮವನ್ನು ಉಳಿಸಿ ಎನ್ನುವ ಕಿರುಚಿತ್ರದ ಮೂಲಕ ನಟ ಹಾಗೂ ನಿರ್ದೇಶಕ ಅಚಲ್ ಭಟ್ ಉಬರಡ್ಕ ಮಾಹಿತಿ ನೀಡಿದರು. ತುರ್ತು ಸಂದರ್ಭಗಳಲ್ಲಿ ನಮ್ಮ ಮೊಬೈಲ್  ಫೋನ್ ಗಳಲ್ಲಿರುವ SOS ಸೌಲಭ್ಯ, 112 ಪೊಲೀಸ್ ಹೆಲ್ಪ್‍ಲೈನ್ ಸೇವೆಯ ಮಹತ್ವದ ಬಗ್ಗೆ ತಿಳಿಸಿದರು. ಕಾಲೇಜು ಆಂತರಿಕ ದೂರು ಸಮಿತಿಯ ಸಂಚಾಲಕಿ ಹಾಗೂ ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ಮತ್ತು ಕಾರ್ಯಕ್ರಮ ಸಂಯೋಜಕ ಪ್ರೊ.ಅಜಯ್ ಶಾಸ್ತ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಿಶೆಲ್ ಜಾಸ್ಮಿನ್ ಡಿ’ಸೋಜ ಸ್ವಾಗತಿಸಿ, ವಂದಿಸಿದರು. ಕ್ಷಿತಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.