Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿದ್ದಾಪುರದಲ್ಲಿ ಸಿಎನ್‍ಸಿಯಿಂದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ : ಮತಬ್ಯಾಂಕ್ ಗಾಗಿ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳಿಗೆ ನೆಲೆ ಕಲ್ಪಿಸಲು ಹುನ್ನಾರ : ಎನ್.ಯು.ನಾಚಪ್ಪ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿದ್ದಾಪುರದಲ್ಲಿ ಸಿಎನ್‍ಸಿಯಿಂದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ : ಮತಬ್ಯಾಂಕ್ ಗಾಗಿ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳಿಗೆ ನೆಲೆ ಕಲ್ಪಿಸಲು ಹುನ್ನಾರ : ಎನ್.ಯು.ನಾಚಪ್ಪ ಆರೋಪ*

ಆಗಷ್ಟ್ 21, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.21 NEWS DESK : ಮತಬ್ಯಾಂಕ್ ಗಾಗಿ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳಿಗೆ ಪವಿತ್ರ ಕೊಡವ ಲ್ಯಾಂಡ್ ನಲ್ಲಿ ನೆಲೆ ಕಲ್ಪಿಸಲು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹುನ್ನಾರ ನಡೆಯುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸಿದ್ದಾಪುರದಲ್ಲಿ 10ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ರೋಹಿಂಗ್ಯಗಳಿಂದ ಕೊಡವ ಲ್ಯಾಂಡ್ ಗೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಅವರ ಇರುವಿಕೆಯನ್ನು ಸಕ್ರಮಗೊಳಿಸುವ ಮತ್ತು ಕೊಡವ ನೆಲದಲ್ಲಿ ನೆಲೆ ನೀಡುವ ಪ್ರಯತ್ನಗಳು ನಡೆಯುತ್ತಿದೆ. ಕೊಡವ ನೆಲದ ಆಯಕಟ್ಟಿನ ಜಾಗಗಳಲ್ಲಿ ಬುಡಕಟ್ಟು ಮತ್ತು ಅಲ್ಪಸಂಖ್ಯಾತ ಎನ್ನುವ ನಕಲಿ ಹೊದಿಕೆ ಹಾಕಿ ನೂರಾರು ಏಕರೆ ಜಾಗವನ್ನು ಮಂಜೂರು ಮಾಡಲು ಹವಣಿಸಲಾಗುತ್ತಿದೆ. ಈ ಪ್ರಯತ್ನ ಜನಸಂಖ್ಯಾ ಪಲ್ಲಟಕ್ಕೆ ಕಾರಣವಾಗಲಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಕೊಡವ ನೆಲದ ನಿಜ ವಾರಸುದಾರರಾದ ಆದಿಮಸಂಜಾತ ಕೊಡವರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಬಾಂಗ್ಲಾ ಮತ್ತು ಮಾಯನ್ಮಾರ್‍ನ ರಾಖಿನೆ ಪ್ರಾಂತ್ಯದ ರೋಹಿಂಗ್ಯಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಸಂಚು ನಡೆದಿದೆ ಎಂದು ಆರೋಪಿಸಿದರು. ಸುಮಾರು 1 ಲಕ್ಷ ವಿದೇಶಿಯರು ಅಕ್ರಮವಾಗಿ ಕೊಡವ ಭೂಮಿಯಲ್ಲಿ ನೆಲೆಸಿದ್ದಾರೆ ಎನ್ನುವ ಮಾಹಿತಿ ಇದೆ. ಮತಬ್ಯಾಂಕ್ ನಿರ್ಮಿಸಲು ಕಾರಸ್ಥಾನ ರೂಪಿಸಿದ್ದು, ಇದು ಕೊಡವ ನೆಲದ ಜನಸಂಖ್ಯೆ ಪಲ್ಲಟ ಮತ್ತು ಜನಸಂಖ್ಯಾ ದುರಾಕ್ರಮಣಕ್ಕೆ ಕಾರಣವಾಗಿ ರಾಷ್ಟ್ರೀಯ ಭದ್ರತೆಗೆ ಸವಾಲಾಗಲಿದೆ. ಈ ವಿಪತ್ತಿನಿಂದ ಹೊರ ಬರಬೇಕಾದರೆ ಆದಿಮ ಸಂಜಾತ ಅಖಂಡ ದೇಶ ಪ್ರೇಮಿ ಕೊಡವರ ಹಕ್ಕು ರಕ್ಷಣೆಯಾಗಬೇಕು. ಆ ಹಕ್ಕು ರಕ್ಷಣೆಯ ಖಾತರಿಯಾಗಬೇಕಾದರೆ ಕೊಡವರ ಜನಸಂಖ್ಯಾ ಮಾಹಿತಿಯ ಅನನ್ಯತೆ, ಅದಕ್ಕೆ ಪೂರಕವಾದ “ಕೋಡ್ ಮತ್ತು ಕಲಂ” ಅನ್ನು 2026ರ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿವಾರು ಮಾಹಿತಿ ಕಲೆ ಹಾಕುವ ಸಂದರ್ಭ ಸ್ಪಷ್ಟವಾಗಿ ದಾಖಲಿಸಲ್ಪಡಬೇಕೆಂದು ಎನ್.ಯು.ನಾಚಪ್ಪ ಹೇಳಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯ ಹಕ್ಕು ಮತ್ತು ಎಸ್‍ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆನ್ನುವ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ವಿವಿಧಡೆ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸರ್ವ ಕೊಡವರು ಅರಿತುಕೊಳ್ಳಬೇಕು. ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಸಿಎನ್‍ಸಿ ನಡೆಸುವ ಶಾಂತಿಯುತ ಹೋರಾಟಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‍ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆ್ಯನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಎಂದು ತಿಳಿಸಿದರು. ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮವು ಶಾಂತಿಯುತವಾಗಿ ಕೊಡವಲ್ಯಾಂಡ್ ನಾದ್ಯಂತ ನಡೆಯುತ್ತಿದೆ. ಸಿದ್ದಾಪುರ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದರಿಂದ ಸಿಎನ್‍ಸಿಯ ಹೋರಾಟದ ಬಲ ಮತ್ತಷ್ಟು ಹೆಚ್ಚಿದೆ ಎಂದು ಎನ್.ಯು.ನಾಚಪ್ಪ ಹೇಳಿದರು. **ಭೂಪರಿವರ್ತನೆಯಿಂದ ಅನಾಹುತ** 2018ರಲ್ಲಿ ಕೊಡವಲ್ಯಾಂಡ್ ನಲ್ಲಿ ವ್ಯಾಪಕ ಜಲಸ್ಫೋಟ ಮತ್ತು ಭೂಸ್ಫೋಟ ಸಂಭವಿಸಿ ಸಾವುನೋವು, ಕಷ್ಟನಷ್ಟಗಳು ಎದುರಾಗಿದ್ದರೂ ಇದನ್ನು ಲೆಕ್ಕಿಸದೆ ಮತ್ತು ಪರಿಸರ ಕಾಳಜಿಯನ್ನು ತೋರದೆ ಸಿದ್ದಾಪುರದ ಸಾವಿರಾರು ಏಕರೆ ಕಾಫಿ ತೋಟವನ್ನು ಬೃಹತ್ ವಿಲ್ಲಾ ಹಾಗೂ ಟೌನ್‍ಶಿಪ್ ಮಾಡಲು ಸಂಚು ನಡೆದಿದೆ. ಜಿಲ್ಲಾಡಳಿತ ಎಗ್ಗಿಲ್ಲದೆ ಭೂಪರಿವರ್ತನೆಗೆ ಅವಕಾಶ ನೀಡುತ್ತಿದೆ. ಹೊರಗಿನ ಬಂಡವಾಳಶಾಹಿಗಳು ಕಪ್ಪುಹಣವನ್ನು ಬಳಸಿ ಭೂಖರೀದಿಯಲ್ಲಿ ತೊಡಗಿದ್ದಾರೆ. ದೊಡ್ಡ ದೊಡ್ಡ ರೆಸಾರ್ಟ್‍ಗಳು ತಲೆ ಎತ್ತುತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತವೇ ಎದುರಾಗುವ ಸಾಧ್ಯತೆಗಳಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು.ಆದಿಮಸಂಜಾತ ಕೊಡವರಿಗೆ ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯೊಂದಿಗೆ ಸ್ವಯಂ ಆಡಳಿತ ಮತ್ತು ಆಂತರಿಕ ಸ್ವಯಂನಿರ್ಣಯದ ಹಕ್ಕನ್ನು ಖಾತ್ರಿ ಪಡಿಸುವುದರಿಂದ ಈ ರೀತಿಯ ಅಕ್ರಮ ಮತ್ತು ಅನಾಹುತಗಳನ್ನು ತಡೆಯಲು ಸಾಧ್ಯವೆಂದು ಅಭಿಪ್ರಾಯಪಟ್ಟರು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸೂರ್ಯ-ಚಂದ್ರ, ಭೂದೇವಿ, ಪ್ರಕೃತಿ ದೇವಿ, ಜಲದೇವಿ, ವನದೇವಿ, ಸಂವಿಧಾನ, ಗುರು ಕಾರೋಣ ಹೆಸರಿನಲ್ಲಿ ಸಿಎನ್‍ಸಿಯ ಕೊಡವಲ್ಯಾಂಡ್ ಹೋರಾಟದೊಂದಿಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ಪ್ರತಿಜ್ಞೆ ಸ್ವೀಕರಿಸಿದರು. ರಾಷ್ಟ್ರಗೀತೆ ಜನ-ಗಣ-ಮನದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು. **ಆ.27 ರಂದು ವಿರಾಜಪೇಟೆಯಲ್ಲಿ ಜನಜಾಗೃತಿ** ಇಲ್ಲಿಯವರೆಗೆ ಬಿರುನಾಣಿ, ಕಡಂಗ, ಟಿ.ಶೆಟ್ಟಿಗೇರಿ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ನಾಪೋಕ್, ಮಾದಾಪುರ, ಸುಂಟಿಕೊಪ್ಪಗಳಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಸಲಾಗಿದೆ. ಆ.27 ರಂದು ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆಯಲ್ಲಿ 11ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು. ಕಾರ್ಯಕ್ರಮದಲ್ಲಿ ಚೋಳಪಂಡ ಜ್ಯೋತಿ ನಾಣಯ್ಯ, ನಂದಿನೆರವಂಡ ರೇಖಾ ನಾಚಪ್ಪ, ಕಾವಡಿಚಂಡ ಕಮಲಾ, ಕಮೋಡೋರ್ ಕುಕ್ಕೇರ ಕೇಶು ಉತ್ತಪ್ಪ, ಕುಕ್ಕೇರ ಜಯ ಚಿಣ್ಣಪ್ಪ, ಚೇರಂಡ ಸುಭಾಷ್, ಚೇಂದಂಡ ಚುಮ್ಮಿ ಪೂವಯ್ಯ, ಪಾಲಚಂಡ ಜಾಲಿ ತಮ್ಮಯ್ಯ, ಕಾಡುಮಂಡ ತಮ್ಮಯ್ಯ, ಮೂಕೊಂಡ ದಿಲೀಪ್, ಅಜ್ಜಿನಿಕಂಡ ಸನ್ನಿ, ನೆಲ್ಲಮಕ್ಕಡ ವಿವೇಕ್, ಚೋಳಪಂಡ ನಾಣಯ್ಯ, ಬಲ್ಲಾರಂಡ ಅಭಿನ್, ಬಲ್ಲಚಂಡ ಸುನಿಲ್, ಬಲ್ಲಚಂಡ ಚಂದನ್, ಪುಟ್ಟಿಚಂಡ ಸನ್ನು, ಬಲ್ಲಚಂಡ ವಿಠಲ್ ಕಾವೇರಪ್ಪ, ಮರುವಂಡ ಸಾಬು, ಮರುವಂಡ ಕವಿನ್, ಕಂಗಂಡ ಮುದ್ದಯ್ಯ, ಅಣ್ಣಾರ್ಕಂಡ ವಿಜು, ಮಂಡೀರ ಬಬ್ಬು, ಪುಟ್ಟಿಚಂಡ ಉದಯ, ಕೂಪದಿರ ಸಾಬು, ಮೇಕೇರಿರ ದಿಲೀಪ್, ಚೇರಂಡ ಸುನಿಲ್, ಚೇರಂಡ ನಂದ, ಕುಕ್ಕೇರ ಗಣೇಶ್, ಕುಮ್ಮಂಡ ದರ್ಶನ್ ಬೋಪಣ್ಣ, ಪಟ್ಟಡ ವಿಜು, ಚೇನಂಡ ಉತ್ತಯ್ಯ, ಬಲ್ಲಚಂಡ ಮುತ್ತಣ್ಣ, ಕುಕ್ಕೇರ ಅಯ್ಯಪ್ಪ, ಮಂಡೇಪಂಡ ಅರ್ಜುನ್, ಅಣ್ಣಾರ್ಕಂಡ ಸೋಮಯ್ಯ, ತೊಂಡಿಯಂಡ ಕುಶ, ಮೂಕೊಂಡ ಸುಬ್ರಮಣಿ, ಬೊಮ್ಮಂಡ ಬೋಪಣ್ಣ, ಬಾಳೆಯಡ ಸದಾ ಕುಶಾಲಪ್ಪ, ಮುರುವಂಡ ಸತೀಶ್, ಕುಕ್ಕೇರ ಪಾಲು ಪೂಣಚ್ಚ ಮತ್ತಿತರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.