Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ : ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ : ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

ಆಗಷ್ಟ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.22 NEWS DESK : ಶ್ರೀ ಧರ್ಮಸ್ಥಳ ಕ್ಷೇತ್ರದ ಮೇಲೆ ನಿರಂತರವಾಗಿ ನಡೆಸುತ್ತಿರುವ ಅಪಪ್ರಚಾರದ ಹಿಂದಿನ ಷಡ್ಯಂತ್ರದ ಕುರಿತು ರಾಜ್ಯ ಸರಕಾರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥgನ್ನು ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿತು. ಜಿಲ್ಲಾಡಳಿತ ಭವನದ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಕೆಲವು ಧರ್ಮದ್ರೋಹಿಗಳು ಹಾಗೂ ಎಡ ಪಂಥೀಯರು ಅಪಪ್ರಚಾರ ಮಾಡುವ ಮೂಲಕ ಅಪಚಾರವೆಸಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎನ್ನುವ ಅನಾಮಿಕ ವ್ಯಕ್ತಿಯ ದೂರನ್ನು ಆಧರಿಸಿ ಗುಂಡಿಗಳನ್ನು ತೋಡಿದರು ಸೂಕ್ತವಾದ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲ. ದೂರು ನೀಡುವ ಹಂತದಲ್ಲೆ ಅನಾಮಿಕ ವ್ಯಕ್ತಿ ನೀಡಿರುವ ದೂರಿನಲ್ಲಿ ಹುರುಳಿದೆಯೇ ಎನ್ನುವುದನ್ನು ಪರಿಶೀಲಿಸದೆ ಪ್ರಕರಣವನ್ನು ಸರ್ಕಾರ ಎಸ್‍ಐಟಿ ತನಿಖೆಗೆ ಒಪ್ಪಿಸಿತು. ಇದೀಗ ಪ್ರಕರಣದ ಹಿಂದೆ ಷಡ್ಯಂತ್ರ ನಡೆದಿದೆ ಎನ್ನುವ ಸರ್ಕಾರ ಮೊದಲಾಗಿ ಸಮಗ್ರ ತನಿಖೆ ನಡೆಸಲಿ ಎಂದರು. ಹಿಂದೂ ಧಾರ್ಮಿಕ ಕೇಂದ್ರಕ್ಕೆ ಧಕ್ಕೆಯನ್ನುಂಟುಮಾಡುವ ಈ ಪ್ರಕರಣಕ್ಕೆ ಸರ್ಕಾರ ಅಂತ್ಯವನ್ನು ಹಾಡಬೇಕು ಮತ್ತು ಅಪಪ್ರಚಾರ ಮಾಡುವವರನ್ನು ತಕ್ಷಣ ಬಂಧಿಸಬೇಕು. ತಪ್ಪಿದಲ್ಲಿ ಬಿಜೆಪಿ ದೊಡ್ಡ ಮಟ್ಟದ ಹೋರಾಟವನ್ನು ರೂಪಿಸಲಿದೆ ಎಂದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಶ್ರೀ ಧರ್ಮಸ್ಥಳ ಕ್ಷೇತ್ರ ಮಾತ್ರವಲ್ಲ ಹಿಂದೂಗಳ ವಿವಿಧ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ನಡೆಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿ ಹಿಂದೂಗಳನ್ನು ಒಡೆಯುವ ಪ್ರಯತ್ನ ನಡೆಯುತ್ತಿದೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಮಾಜಿ ಎಂಎಲ್‍ಸಿ ಸುನಿಲ್ ಸುಬ್ರಮಣಿ ಮಾತನಾಡಿ, ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕೆಲವರು ಮನಸ್ಸಿಗೆ ಬಂದಂತೆ ಆರೋಪಗಳನ್ನು ಮಾಡುತ್ತಿದ್ದಾರೆ. ಅನಾಮಿಕ ವ್ಯಕ್ತಿ ಆರೋಪಗಳನ್ನು ಮಾಡುವ ಹಂತದಲ್ಲೆ ಆತನನ್ನು ಮೊದಲು ಬಂಧಿಸಿ ತನಿಖೆ ನಡೆಸಬೇಕಿತ್ತು. ಇದಕ್ಕೆ ಬದಲಾಗಿ ತನಿಖೆಯನ್ನು ಎಸ್‍ಐಟಿಗೆ ವಹಿಸಲಾಯಿತು, ಸರಕಾರ ಪೊಲೀಸರಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲವೆಂದು ಟೀಕಿಸಿದರು. ಪ್ರತಿಭಟನೆಯ ನಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಪಕ್ಷದ ಪ್ರಮುಖರೊಂದಿಗೆ ಎಡಿಸಿ ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ಸಜಿಲ್ ಕೃಷ್ಣನ್, ನಾಗೇಶ್ ಕುಂದಲ್ಪಾಡಿ, ಕನ್ನಂಡ ಸಂಪತ್, ಪಿ.ಎಂ.ರವಿ, ಎಸ್.ಸಿ.ಸತೀಶ್, ಅರುಣ್ ಶೆಟ್ಟಿ, ಸವಿತಾ ರಾಕೇಶ್, ಕನ್ನಿಕೆ, ಉಮಾ ಪ್ರಭು, ಬೊಳ್ಳಜಿರ ಅಯ್ಯಪ್ಪ, ಅಪ್ಪಣ್ಣ, ಮನು ಮಂಜುನಾಥ್, ನೆಲ್ಲೀರ ಚಲನ್, ಡೀನ್ ಬೋಪಣ್ಣ, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಕಾಂಗೀರ ಸತೀಶ್ ಮೊದಲಾದವರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.