
ನಾಪೋಕ್ಲು ಆ.23 NEWS DESK : ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಪಾರಾಣೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಜನಿ ಹೇಳಿದರು. ಶಾಲಾಶಿಕ್ಷಣ ಇಲಾಖೆ ಮತ್ತು ಪಾರಾಣೆ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಚೆರಿಯಪರಂಬು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿಯನ್ನು ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರುದರು. ಕ್ರೀಡಾಕೂಟದಲ್ಲಿ ಪಾರಾಣೆ ಕಕ್ಕಬ್ಬೆ, ಬಲ್ಲಮಾವಟಿ, ಆಕ್ಸ್ ಫರ್ಡ್, ಎಕ್ಸೆಲ್, ಸೇಕ್ರೆಡ್ ಹಾರ್ಟ್, ಹೊದವಾಡ, ಕೆಪಿಎಸ್, ಮರ್ಕಝ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.





































