Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗರಹಳ್ಳಿಯಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ : ಧರ್ಮದ ತಳಹದಿಯ ಮೇಲೆ ಮಹಿಳಾ ಸಬಲತೆ : ಸದಾಶಿವ ಸ್ವಾಮೀಜಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗರಹಳ್ಳಿಯಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ : ಧರ್ಮದ ತಳಹದಿಯ ಮೇಲೆ ಮಹಿಳಾ ಸಬಲತೆ : ಸದಾಶಿವ ಸ್ವಾಮೀಜಿ

ಆಗಷ್ಟ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ ಆ.23 NEWS DESK : ಧರ್ಮದ ತಳಹದಿಯ ಮೇಲೆ ಆರ್ಥಿಕ ಸಬಲತೆಯನ್ನು ಹೊಂದುವ ವ್ಯವಸ್ಥೆಯನ್ನು ಮಹಿಳಾ ಸಬಲೀಕರಣದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಧಿಸಿದೆ ಎಂದು ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠದ ಕೊಡ್ಲಿಪೇಟೆಯ ಶ್ರೀ ಸದಾಶಿವ ಸ್ವಾಮಿಗಳು ಹೇಳಿದ್ದಾರೆ. ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಗಳ ಒಕ್ಕೂಟ ಗುಡ್ಡೆಹೊಸೂರು ವಲಯ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಸೌಹಾರ್ದತೆ ಹಾಗೂ ಗ್ರಾಮಸುಭಿಕ್ಷೆಗಾಗಿ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಜನರಿಂದ ಜನರಿಗಾಗಿ ಜನರಿಗೋಸ್ಕರ ಗ್ರಾಮಾಭಿವೃದ್ಧಿ ಯೋಜನೆ ರೂಪುಗೊಂಡಿದ್ದು, ಮಾನಸಿಕವಾಗಿ ಸಾಮಾಜಿಕವಾಗಿ ಧಾರ್ಮಿಕವಾಗಿ ಜನರನ್ನು ಎಚ್ಚರಗೊಳಿಸಿ ಧರ್ಮದ ತಳಹದಿಯ ಮೇರೆ ಆರ್ಥಿಕ ಸಬಲೀಕರಣದ ಮೂಲಕ ಬದುಕನ್ನು ಕಟ್ಟಿಕೊಳ್ಳುವುದು ಶ್ರೇಷ್ಠ ಸಾಧನೆಯೆಂದು ಸ್ವಾಮೀಜಿ ಬಣ್ಣಿಸಿದರು. ಭಾರತ ಎಲ್ಲಾ ರೀತಿಯಲ್ಲೂ ಪ್ರಗತಿ ಹೊಂದುತ್ತಿರುವ ದೇಶವಾಗಿದ್ದು, ವಿಶ್ವಗುರು ಎಂಬ ಪಟ್ಟಕ್ಕೆ ಹತ್ತಿರವಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಬಾಹ್ಯ ಅನುಕೂಲಗಳನ್ನು ಪಡೆಯಬಹುದು ಆದರೆ ಅಂತರಗದಲ್ಲಿ ಶಾಂತಿ ಸಮಾಧಾನ ಆರೋಗ್ಯವನ್ನು ಹೊಂದಲು ಧರ್ಮ ಅಗತ್ಯವೆಂದು ಸ್ವಾಮೀಜಿ ಪ್ರತಿಪಾದಿಸಿದರು. ತಾಳ್ಮೆ ತಾಯಿತನ ಸಮದಾನಗಳ ಪ್ರತಿರೂಪವಾಗಿರುವ ಮಹಿಳೆಯರು ಆರ್ಥಿಕ ಸಬಲೀಕರಣ ಆಡಳಿತ ರಂಗದಲ್ಲಿ ಸಕ್ರಿಯವಾಗಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವಿರೇಂದ್ರ ಹೆಗ್ಡೆಯವರ ದೂರದರ್ಶಿತ್ವ ಸಂಘಟನಾ ಚತುರತೆ ನಾಯಕತ್ವದ ಗುಣಗಳ ಕಾರಣ ಎಂದು ಸ್ವಾಮೀಜಿ ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಅರಣ್ಯ ಉಪ ಸಂರಕ್ಷಣಾಧಿಕಾರಿ ಎಂ.ಎಸ್.ಸುರೇಶ್ ಚಂಗಪ್ಪ ಮಾತನಾಡಿ, ತೊಟ್ಟಿಲನ್ನು ತೂಗುವ ಕೈ ಪ್ರಪಂಚವನ್ನು ಆಳಬಲದ್ದು ಎಂಬುದನ್ನು ಮಾಜಿ ಪ್ರಧಾನಿ ಇಂಧಿರಾ ಗಾಂಧಿಯವರಿಂದ ಇಡಿದು ಇಂದಿನವರೆಗೆ ಮಹಿಳೆಯರು ತೋರಿಸಿಕೊಟ್ಟಿದ್ದಾರೆ. ಅದಕ್ಕೆ ಜಲ್ವಂತ ಸಾಕ್ಷಿಯಾಗಿ ಶ್ರೀ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ನಮ್ಮ ಮುಂದಿದ್ದು, ಜನೋಪಯೋಗಿ ಮತ್ತು ಸಮಾಜ ಮುಖಿ ಯಾಗಿದ್ದು, ಕಾರ್ಯಕ್ರಮಗಳಿಗೆ ನಾವೆಲ್ಲಾರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾದ ಡಾ.ಶಶಿಕಾಂತ ರೈ ಮಾತನಾಡಿ ಸನತಾನ ಧರ್ಮದ ಪರಿಕಲ್ಪನೆ ವಸುದೈವಕುಟುಂಬಕಂ ಎಂಬುದು ನಮ್ಮ ಮುಂದಿದ್ದು, ಪ್ರತಿಯೊಬ್ಬರಿಗೂ ಅವರವರ ಧರ್ಮ ಶ್ರೇಷ್ಠವಾಗಿದ್ದು, ಧರ್ಮಗಳ ನಡುವೆ ಒಡಕನ್ನು ತರದೆ ಶಾಂತಿ ಗೌರವ ಸಹಬಾಳ್ವೆಯನ್ನು ಪಾಲಿಸಬೇಕು ಧರ್ಮ ಮತ್ತು ಧಾರ್ಮಿಕ ವಿಧಿವಿಧಾನಗಳಿಂದ ಸಾಮೂಹಿಕ ಪ್ರಾರ್ಥನೆಯು ಆನೆ ಬಲವನ್ನು ಅಂದರೆ ಆರೋಗ್ಯ ಮತ್ತು ನೆಮ್ಮದಿಯನ್ನು ನೀಡುವಂತಾಗಬೇಕೆಂದು ಅವರು ಆಶೀಸಿದರು. ಕಂಬಿಬಾಣೆಯ ಕಮಲ ನೆಹರೂ ಮಹಿಳಾ ಮಂಡಳಿಯ ಅಧ್ಯಕ್ಷೆ ಪೂರ್ಣಿಮಾ ಪ್ರಭಾಕರ್ ಮಾತನಾಡಿ, ಮಹಿಳಾ ಅಭಿವೃದ್ಧಿ ದೇಶದ ಅಭಿವೃದ್ಧಿ ಎÀಂದು ಸ್ವಾಮಿ ವಿವೇಕಾನಂದರು ಹೇಳಿ ಸತ್ಯವಾಗಿದೆ. ಮಹಿಳಾ ಸಬಲೀಕರಣದಿಂದ ನಾಲ್ಕು ಗೋಡೆಗಳ ನಡುವೆ ಅಡುಗೆ ಮನೆಗೆ ಸಿಮೀತವಾಗಿದ್ದ ಮಹಿಳೆಯರು ಹಣಕಾಸು ಮತ್ತು ಆಡಳಿತ ಕ್ಷೇತ್ರದಲ್ಲಿ ಪುರುಷರೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಬೆರೆತ್ತಿದ್ದಾರೆ. ಯುವಜನಾಂಗ ಹೆಚ್ಚು ಉದ್ಯಮ ಶಿಲತೆಯತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನ ನಿಧಿ ವಿಚಾರಣೆಯ ಅಡಿಯಲ್ಲಿ ಹಲವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಅಪರಾಧ ವಿಭಾಗದ ಉಪ ನಿರೀಕ್ಷಕಿ ಕೆ.ಹೆಚ್.ಭಾರತಿ, ತೊಂಡೂರು ಬಸವೇಶ್ವರ ದೇವಸ್ಥಾನದ ಕಾರ್ಯದರ್ಶಿ ಕೆ.ಜಿ.ಶಿವನ್, ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ರವೀಶ್, ಗುಡ್ಡೆಹೊಸೂರು ವಲಯದ ಶ್ರೀ.ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಕೆ.ಎಂ.ರಮೇಶ್ ಶಾಂತಿನಿಕೇತನ ಮುಖ್ಯೋಪಾದ್ಯಾಯನಿ ಎಂ.ಬಿ.ಕವಿತ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾ ಪ್ರತಿನಿಧಿ ಜೀವನ್ ಕುಮಾರ್ ನಿರೂಪಿಸಿ, ಹೇಮಾವತಿ ವಂದಿಸಿದರು. ವೇದಿಕೆಯಲ್ಲಿ ಸೋಮವಾರಪೇಟೆ ತಾಲೂಕಿನ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರಾದ ಜೀವನ್ ಕುಮಾರ್, ಕುಂದುಮೊಟ್ಟೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಅರುಣ್ ಪೂಜಾರಿ, ನೇತಾಜಿ ಯುವಕ ಸಂಘದ ಅಧ್ಯಕ್ಷ ಎಂ.ಸಿ.ಪೂಣ್ಣಚ್ಚ, ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಹಾಗೂ ಸೇವಾ ಪ್ರತಿನಿಧಿಗಳಾದ ಹೇಮಾವತಿ, ಮೇಲ್ವಿಚಾರಕರಾದ ಕೆ.ಯತೀಶ್, ವಿವಿಧ ಒಕ್ಕೂಟಗಳ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.