
ಮಡಿಕೇರಿ ಆ.23 NEWS DESK : ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ 18ನೇ ಪುಣ್ಯಸ್ಮರಣೆಯ ಅಂಗವಾಗಿ ಆ.25 ರಂದು ಮಡಿಕೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಮಡಿಕೇರಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ, ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬ್ರಹ್ಮಾಕುಮಾರಿ ಲೈಟ್‍ಹೌಸ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ 1.30ರ ವರೆಗೆ ಶಿಬಿರ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬ್ರಹ್ಮಾಕುಮಾರಿ ಲೈಟ್‍ಹೌಸ್‍ನ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.









