Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಫಲಿತಾಂಶ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಫಲಿತಾಂಶ

ಆಗಷ್ಟ್ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಆ.23 : ಕೊಡಗು ವಿಶ್ವವಿದ್ಯಾಲಯದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಹತ್ತು ದಿನಗಳಲ್ಲಿ ಮೌಲ್ಯಮಾಪನದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅದೇ ದಿನ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ. ಇದೇ ಅಗಸ್ಟ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು 200 ವಿದ್ಯಾರ್ಥಿಗಳು ಹಾಜರಾಗಿದ್ದರು.   ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ಮತ್ತು ಹೊರಗಿನ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.  ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ. ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್ ಮತ್ತು UUCMS ಸಿಬ್ಬಂದಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.