


ಮಡಿಕೇರಿ ಆ.25 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಮತ್ತು ಪರಿವರ್ತನಾ ಸಹಕಾರ ಸಂಘದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಸಹಕಾರ ಸಂಘಗಳು ರೈತರ ಹಾಗೂ ನಾಡಿನ ಆರ್ಥಿಕ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡುತ್ತಿವೆ. ನೂತನ ಕಟ್ಟಡದಲ್ಲಿ, ಪ್ರಸ್ತುತ ಸಂಘವು ಮತ್ತಷ್ಟು ಯಶಸ್ಸನ್ನು ಕಾಣುತ್ತಾ ಲಾಭದೊಂದಿಗೆ ಈ ಭಾಗದ ಎಲ್ಲಾ ರೈತರ ಶ್ರೇಯೋಭಿವೃದ್ಧಿಗೆ ಕೊಡುಗೆ ನೀಡುವಂತಾಗಲಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸದರಾದ ಯದುವೀರ್ ಒಡೆಯರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪೃಥ್ವಿ, ಬಾಳಲೆ ವಲಯ ಅಧ್ಯಕ್ಷ ಕೋದಂಡ ಸೋಮಣ್ಣ, ಬಾಳಲೆ ಪಂಚಾಯಿತಿ ಅಧ್ಯಕ್ಷ ಸ್ಮಿತಾ ಪೊನ್ನಪ್ಪ, ಬಾಳಲೆ ಪಂಚಾಯಿತಿಯ ಮಾಜಿ ಸದಸ್ಯ ವಿನು ಉತ್ತಪ್ಪ, ನಿಟ್ಟೂರು ವಲಯ ಅಧ್ಯಕ್ಷರಾದ ಪವನ್, ಪಂಚಾಯಿತಿ ಅಧ್ಯಕ್ಷರಾದ ಅಮುಣಿ, ಸದಸ್ಯ ಅಪ್ಪಣ್ಣ, ಪೊನ್ನಪ್ಪಸಂತೆ ವಲಯ ಅಧ್ಯಕ್ಷ ಚೆಟ್ಟಿಮಾಡ ರಾಬಿನ್ ಬೋಪಣ್ಣ, ತಾರಾ ಅಯ್ಯಮ್ಮ, ಚೋಂದಮ್ಮ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೋಮಣ್ಣ ಎಲ್ಲಾ ಆಹ್ವಾನಿತ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.






































