
ಮಡಿಕೇರಿ ಆ.25 NEWS DESK : ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಆ.27 ರಿಂದ ಸೆ.12ರ ವರೆಗೆ 47ನೇ ವರ್ಷದ ಅದ್ಧೂರಿ ಗಣೇಶೋತ್ಸವ ನಡೆಯಲಿದೆ. ಆ.27 ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿನಿಕೇತನ ಬಡಾವಣೆಯಲ್ಲಿ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಮಹಾಪೂಜೆ ನಡೆಯಲಿದೆ. ನಂತರ 17 ದಿನಗಳ ಕಾಲ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಭಜನೆ ಮತ್ತು ಮಹಾಪೂಜೆ ಜರುಗಲಿದೆ. ಸೆ.6 ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗ ಪೂಜೆ ನಡೆಯಲಿದ್ದು, ಸೆ.12 ರಂದು ಮಹಾಪೂಜೆ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ದೂರಿ ಶೋಭಾಯಾತ್ರೆಯೊಂದಿಗೆ ಮಡಿಕೇರಿಯ ಮುಖ್ಯ ಬೀದಿಗಳಲ್ಲಿ ಕೊಂಡೊಯ್ದು, ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಂತಿನಿಕೇತನ ಯುವ ಸಂಘ ಮನವಿ ಮಾಡಿದೆ.
ಕ್ರೀಡಾಕೂಟ : ಗಣೇಶ ಉತ್ಸವದ ಪ್ರಯುಕ್ತ ಸೆ.7 ರಂದು ಸಾರ್ವಜನಿಕರಿಗೆ ಕ್ರೀಡಾಕೂಟ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟಕ್ಕೆ ಗಣ್ಯರಿಂದ ಚಾಲನೆ ದೊರೆಯಲಿದೆ. ಮಕ್ಕಳಿಗೆ ಬಣ್ಣ ಹಚ್ಚುವುದು, ಚಿತ್ರ ಬಿಡಿಸುವುದು, ಬಾಲಕರಿಗೆ ಮತ್ತು ಬಾಲಕಿಯರಿಗೆ ಮ್ಯಾರಥಾನ್ ಹಾಗೂ ರಸ್ತೆ ಓಟ ಸ್ಪರ್ಧೆ ನಡೆಯಲಿದೆ. ಪುರುಷರಿಗೆ ಮತ್ತು ಮಹಿಳೆಯರಿಗೆ ಬಾರದ ಗುಂಡು ಎಸೆತ, ಬಾಂಬ್ ಇನ್ ಸಿಟಿ ಹಾಗೂ ಹಲವು ಕ್ರೀಡೆಗಳನ್ನು ಆಯೋಜಿಸಲಾಗಿದೆ.









