


ಮಡಿಕೇರಿ ಆ.25 NEWS DESK : ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಿಗೆ ಸರ್ಕಲ್ ನಲ್ಲಿ ಶಾಶ್ವತವಾಗಿ ನೂತನ ತಂತ್ರಜ್ಞಾನದ ಮೂಲಕ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುವ ಬಗ್ಗೆ ಜಾಗವನ್ನು ಗುರುತಿಸಿ ಅದರ ಮೂಲಕ ನಿರ್ಮಾಣ ಕಾಮಗಾರಿಯ ಕೈಗೊಳ್ಳುವ ಬಗ್ಗೆ ಸಭೆಯು ಒಕ್ಕೊರಲಿನ ತೀರ್ಮಾನ ಕೈಗೊಂಡಿತು. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಎಲ್ಲಾ ವಾರ್ಡ್ ಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳು ನಡೆದವು. ಬೀದಿ ನಾಯಿಗಳ ಹಾವಾಳಿಗಳ ಬಗ್ಗೆ ಸಾರ್ವಜನಿಕರಿಂದ ಬಂದ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಅಧ್ಯಕ್ಷ ಕೆ.ಟಿ.ಗಿರೀಶ್ ಮಾತಾನಾಡಿ, ಸಭೆಯಲ್ಲಿ ಚರ್ಚೆಗೊಂಡ ವಿಷಯಗಳ ಬಗ್ಗೆ ಸಮಗ್ರವಾದ ವ್ಯವಸ್ಥೆವನ್ನು ಕೈಗೊಳ್ಳುವ ಮೂಲಕ ಗ್ರಾಮ ವ್ಯಾಪ್ತಿಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲಾಗುವುದು .ಅಲ್ಲದೆ 15 .ನೇ ಹಣಕಾಸು ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಕ್ಕೆ ಮುಂದಾಗುತ್ತೇವೆ ಎಂದರು. ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗವನ್ನು ಗುರುತಿಸಿ ಇಂಜಿನಿಯರನವರ ಕ್ರಿಯಾ ಯೋಜನೆ ಅನುಗುಣವಾಗಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು, ಗ್ರಾಮ ಪಂಚಾಯತಿ ಯೋಜನೆಯ ಅನುಗುಣವಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಮುಖೇನ ಗ್ರಾಮದ ಅಭಿವೃದ್ಧಿಗೆ ಪ್ರಯತ್ನ ಮಾಡಲಾಗುವುದು ಎಂದರು.
ಅಭಿವೃದ್ಧಿ ಅಧಿಕಾರಿ ಮಂಜಳಾ ಸಭೆಗೆ ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಗೆ ಬಂದ ಅರ್ಜಿಗಳ ಮಾಹಿತಿಯನ್ನು ಕಾರ್ಯದರ್ಶಿ ಪುನೀತ್ ಒದಗಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಟಿ. ಪಿ. ಹಮೀದ್, ಮಂಗಳ, ಮೋಹಿನಿ, ಅರುಣ್ ರಾವ್, ಕೆ.ಎಸ್. ಶಿವಕುಮಾರ್, ಅನಂತ, ವಾಣಿ, ಹೆಚ್.ಎಸ್. ರವಿ, ರತ್ನಮ್ಮ, ಪಲ್ಲವಿ, ಲಕ್ಷಿ, ಚಂದ್ರು, ಜಯಶೀಲಾ. ಸೇರಿದಂತೆ ಕಾರ್ಯದರ್ಶಿ ಪುನೀತ್ ಹಾಜರಿದ್ದರು.






































