


ಮಡಿಕೇರಿ ಆ.25 NEWS DESK : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆ.27 ರಂದು ಬೆಳಗ್ಗೆ 7 ಗಂಟೆಯಿಂದ ಭಕ್ತಾಧಿಗಳಿಗೆ ಗಣಪತಿ ಪೂಜೆ ಹಾಗೂ ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 7.30 ಗಂಟೆಗೆ ಮಹಾಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.









