Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿಎನ್‌ಸಿಯಿಂದ ವಿರಾಜಪೇಟೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ : ಅಕ್ರಮ ವಲಸಿಗರಿಗೆ ಆಶ್ರಯ, ನಕಲಿ ಆಧಾರ್ ಕಾರ್ಡ್ ಜಾಲದ ವಿರುದ್ಧ ಎನ್.ಯು.ನಾಚಪ್ಪ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿಎನ್‌ಸಿಯಿಂದ ವಿರಾಜಪೇಟೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ : ಅಕ್ರಮ ವಲಸಿಗರಿಗೆ ಆಶ್ರಯ, ನಕಲಿ ಆಧಾರ್ ಕಾರ್ಡ್ ಜಾಲದ ವಿರುದ್ಧ ಎನ್.ಯು.ನಾಚಪ್ಪ ಅಸಮಾಧಾನ*

ಆಗಷ್ಟ್ 27, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.27 : ಕೊಡವರ ಬಾಹುಳ್ಯದ ಮೂಲ ನೆಲೆಯಾದ ಪಶ್ಚಿಮ ಘಟ್ಟದ ಪರ್ವತ ಶ್ರೇಣಿಯ ಸಂಕೋಲೆಗಳಾದ ಮರೆನಾಡಿನಿಂದ ಸೂರ್ಲಬ್ಬಿನಾಡ್ ವರೆಗೆ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳಿಗೆ ಆಶ್ರಯ ಕಲ್ಪಿಸಲು ಷಡ್ಯಂತ್ರ ನಡೆದಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಆರೋಪಿಸಿದ್ದಾರೆ. ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕೆಂದು ಒತ್ತಾಯಿಸಿ ವಿರಾಜಪೇಟೆಯಲ್ಲಿ ಸಿಎನ್‌ಸಿ ವತಿಯಿಂದ ನಡೆದ 11ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಕ್ರಮ ವಲಸಿಗರಿಗೆ ಆಶ್ರಯ ಕಲ್ಪಿಸುವ ಏಕೈಕ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಲಾಗುತ್ತಿದ್ದು, ದೊಡ್ಡ ಜಾಲವೊಂದು ಕಾರ್ಯಾಚರಿಸುತ್ತಿದೆ. ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳು ಕಾನೂನು ಬಾಹಿರವಾಗಿ ಕೊಡವ ಲ್ಯಾಂಡ್ ನಲ್ಲಿ ಆಶ್ರಯ ಪಡೆದು ತಮ್ಮ ಇರುವಿಕೆಯನ್ನು ಸಕ್ರಮಗೊಳಿಸಿಕೊಳ್ಳಲು ಮುಂದಾಗಿರುವುದು, ಸರಕಾರಿ ಯಂತ್ರಗಳು ಆಶ್ರಯ ನೀಡಲು ಹವಣಿಸುತ್ತಿರುವುದು ಮತ್ತು ದೊಡ್ಡ ದೊಡ್ಡ ಕಂಪೆನಿಗಳು ಬೆಂಬಲಕ್ಕೆ ನಿಂತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ನಕಲಿ ಆಧಾರ್ ಮತ್ತು ಐಡಿ ಕಾರ್ಡ್ ನೀಡುವ ಜಾಲ ಕಳೆದ ಎರಡು ವರ್ಷಗಳಿಂದ ಚಟುವಟಿಕೆಯಿಂದ ಇದ್ದು, ಈ ನಕಲಿ ಆಧಾರ್ ಕಾರ್ಡ್ನ್ನೇ ಬಳಸಿ ಅಕ್ರಮ ವಲಸಿಗರು ಕೊಡಗು ಮಾತ್ರವಲ್ಲದೆ ಹೊರ ಭಾಗದಲ್ಲೂ ತೋಟದ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಕೊಡವ ಲ್ಯಾಂಡ್ ನ ಪ್ರತೀ ಗ್ರಾಮಗಳಲ್ಲಿ ಅವರದ್ದೇ ಆದ ಮಾರುಕಟ್ಟೆ, ಮನಿಚೈನ್, ಬಡ್ಡಿದಂಧೆ, ಗೋವು ಕಳ್ಳತನ, ಹಲ್ಲೆ, ಸುಲಿಗೆ, ಕಾಫಿ, ಕಾಳು ಮೆಣಸು ಕಳ್ಳತನ, ಕಳ್ಳಬೇಟೆ, ಅಕ್ರಮವಾಗಿ ಕಾವೇರಿ ನದಿಯಿಂದ ವಿದ್ಯುತ್ ತಂತಿ ಬಳಸಿ ಮೀನು ಹಿಡಿಯುವುದು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಭ್ರಷ್ಟ ರಾಜಕಾರಣಿಗಳು ಅಕ್ರಮ ವಲಸಿಗರ ಮಾಹಿತಿ ಕಲೆಹಾಕಿ ಅವರನ್ನೆಲ್ಲ ಮತದಾರರ ಪಟ್ಟಿಯಲ್ಲಿ ಸೇರಿಸಿ ನಿವೇಶನ ಮತ್ತು ವಸತಿ ನೀಡುವ ಭರವಸೆ ನೀಡುತ್ತಿದ್ದು, ಇದಕ್ಕೆ ಆಡಳಿತ ಯಂತ್ರ ಬೆಂಬಲ ನೀಡುತ್ತಿದೆ ಎಂದು ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಮುಕ್ಕೋಡ್ಲುವಿನ ಆದಿಮಸಂಜಾತ ವೃದ್ಧ ದಂಪತಿಗಳಾದ ಕಾಳಚಂಡ ನಾಣಿಯಪ್ಪ ಅವರ ತೋಟವನ್ನು ನಾಶ ಮಾಡಿ ಅವಮಾನಿಸಿರುವುದು ಅಮಾನವೀಯ ಕೃತ್ಯ ಮತ್ತು ಕ್ರೂರ ವ್ಯಂಗ್ಯವಾಗಿದೆ. ಮೂಲ ನಿವಾಸಿ ಕೊಡವರನ್ನು ಅವರ ಪ್ರಾಚೀನ ನೆಲೆಯಿಂದ ಪಲ್ಲಟಗೊಳಿಸಿ ಖಾಲಿಯಾದ ಆ ಪ್ರದೇಶದಲ್ಲಿ ಅಕ್ರಮ ವಲಸಿಗರಿಗೆ ಆಶ್ರಯ ನೀಡಿ ಓಟ್ ಬ್ಯಾಂಕ್ ಸೃಷ್ಟಿಕೊಳ್ಳುವ ಹುನ್ನಾರ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡವ ನೆಲದ ನಿಜ ವಾರಸುದಾರರಾದ ಆದಿಮಸಂಜಾತ ಕೊಡವರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಬಾಂಗ್ಲಾ ಮತ್ತು ಮಾಯನ್ಮಾರ್‌ನ ರಾಖಿನೆ ಪ್ರಾಂತ್ಯದ ರೋಹಿಂಗ್ಯಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಸಂಚು ನಡೆದಿದೆ ಎಂದು ಆರೋಪಿಸಿದರು. ಸುಮಾರು 1 ಲಕ್ಷ ವಿದೇಶಿಯರು ಅಕ್ರಮವಾಗಿ ಕೊಡವ ಭೂಮಿಯಲ್ಲಿ ನೆಲೆಸಿದ್ದಾರೆ ಎನ್ನುವ ಮಾಹಿತಿ ಇದೆ. ದೊಡ್ಡ ದೊಡ್ಡ ಕಂಪೆನಿ ತೋಟಗಳು ಇದರಲ್ಲಿ ಶಾಮೀಲಾಗಿದ್ದು, ಅವರನ್ನು ಸಂಪರ್ಕಿಸಿರುವ ಆಡಳಿತಾಂಗ ಸಮೃದ್ಧ ಗ್ಯಾರಂಟಿ ಮತಬ್ಯಾಂಕ್ ನಿರ್ಮಿಸಲು ಕಾರಸ್ಥಾನ ರೂಪಿಸಿದೆ. ಇದು ಕೊಡವ ನೆಲದ ಜನಸಂಖ್ಯೆ ಪಲ್ಲಟ ಮತ್ತು ಜನಸಂಖ್ಯಾ ದುರಾಕ್ರಮಣಕ್ಕೆ ಕಾರಣವಾಗಿ ರಾಷ್ಟಿçÃಯ ಭದ್ರತೆಗೆ ಸವಾಲಾಗಲಿದೆ. ಈ ವಿಪತ್ತಿನಿಂದ ಹೊರ ಬರಬೇಕಾದರೆ ಆದಿಮ ಸಂಜಾತ ಅಖಂಡ ದೇಶ ಪ್ರೇಮಿ ಕೊಡವರ ಹಕ್ಕು ರಕ್ಷಣೆಯಾಗಬೇಕು. ಆ ಹಕ್ಕು ರಕ್ಷಣೆಯ ಖಾತರಿಯಾಗಬೇಕಾದರೆ ಕೊಡವರ ಜನಸಂಖ್ಯಾ ಮಾಹಿತಿಯ ಅನನ್ಯತೆ, ಅದಕ್ಕೆ ಪೂರಕವಾದ “ಕೋಡ್ ಮತ್ತು ಕಲಂ” ಅನ್ನು 2026ರ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿವಾರು ಮಾಹಿತಿ ಕಲೆ ಹಾಕುವ ಸಂದರ್ಭ ಸ್ಪಷ್ಟವಾಗಿ ದಾಖಲಿಸಲ್ಪಡಬೇಕೆಂದು ಎನ್.ಯು.ನಾಚಪ್ಪ ಹೇಳಿದರು.
ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯ ಹಕ್ಕು ಮತ್ತು ಎಸ್‌ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆನ್ನುವ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ವಿವಿಧಡೆ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸರ್ವ ಕೊಡವರು ಅರಿತುಕೊಳ್ಳಬೇಕು. ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಸಿಎನ್‌ಸಿ ನಡೆಸುವ ಶಾಂತಿಯುತ ಹೋರಾಟಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.
2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟç ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆ್ಯನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಎಂದು ತಿಳಿಸಿದರು. ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮವು ಶಾಂತಿಯುತವಾಗಿ ಕೊಡವಲ್ಯಾಂಡ್ ನಾದ್ಯಂತ ನಡೆಯುತ್ತಿದೆ. ಸಿದ್ದಾಪುರ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದರಿAದ ಸಿಎನ್‌ಸಿಯ ಹೋರಾಟದ ಬಲ ಮತ್ತಷ್ಟು ಹೆಚ್ಚಿದೆ ಎಂದು ಎನ್.ಯು.ನಾಚಪ್ಪ ಹೇಳಿದರು. *ಭೂಪರಿವರ್ತನೆಯಿಂದ ಅನಾಹುತ* 2018ರಲ್ಲಿ ಕೊಡವಲ್ಯಾಂಡ್ ನಲ್ಲಿ ವ್ಯಾಪಕ ಜಲಸ್ಫೋಟ ಮತ್ತು ಭೂಸ್ಫೋಟ ಸಂಭವಿಸಿ ಸಾವುನೋವು, ಕಷ್ಟನಷ್ಟಗಳು ಎದುರಾಗಿದ್ದರೂ ಇದನ್ನು ಲೆಕ್ಕಿಸದೆ ಸಿದ್ದಾಪುರದ ಭೂತಪೂರ್ವ ಬಿಬಿಟಿಸಿ ತೋಟ, ಈಗಿನ 2400 ಏಕ್ರೆ “ಎಲ್ಕಿಹಿಲ್” ಕಾಫಿ ತೋಟವನ್ನು ಪರಿಸರ ಕಾಳಾಜಿಯನ್ನು ಬಲಿಕೊಟ್ಟು ಬೃಹತ್ ವಿಲ್ಲಾ ಮತ್ತು ಟೌನ್‌ಶಿಪ್ ಮಾಡಲು ಆಡಳಿತಾಂಗ ಸಂಚುರೂಪಿಸಿದೆ. ಜಿಲ್ಲಾಡಳಿತ ಎಗ್ಗಿಲ್ಲದೆ ಭೂಪರಿವರ್ತನೆಗೆ ಅವಕಾಶ ನೀಡುತ್ತಿದೆ. ಹೊರಗಿನ ಬಂಡವಾಳಶಾಹಿಗಳು ಕಪುö್ಪಹಣವನ್ನು ಬಳಸಿ ಭೂಖರೀದಿಯಲ್ಲಿ ತೊಡಗಿದ್ದಾರೆ. ದೊಡ್ಡ ದೊಡ್ಡ ರೆಸಾರ್ಟ್ಗಳು ತಲೆ ಎತ್ತುತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತವೇ ಎದುರಾಗುವ ಸಾಧ್ಯತೆಗಳಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಆದಿಮಸಂಜಾತ ಕೊಡವರಿಗೆ ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯೊಂದಿಗೆ ಸ್ವಯಂ ಆಡಳಿತ ಮತ್ತು ಆಂತರಿಕ ಸ್ವಯಂನಿರ್ಣಯದ ಹಕ್ಕನ್ನು ಖಾತ್ರಿ ಪಡಿಸುವುದರಿಂದ ಈ ರೀತಿಯ ಅಕ್ರಮ ಮತ್ತು ಅನಾಹುತಗಳನ್ನು ತಡೆಯಲು ಸಾಧ್ಯವೆಂದು ಅಭಿಪ್ರಾಯಪಟ್ಟರು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸೂರ್ಯ-ಚಂದ್ರ, ಭೂದೇವಿ, ಪ್ರಕೃತಿ ದೇವಿ, ಜಲದೇವಿ, ವನದೇವಿ, ಸಂವಿಧಾನ, ಗುರು ಕಾರೋಣ ಹೆಸರಿನಲ್ಲಿ ಸಿಎನ್‌ಸಿಯ ಕೊಡವಲ್ಯಾಂಡ್ ಹೋರಾಟದೊಂದಿಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ಪ್ರತಿಜ್ಞೆ ಸ್ವೀಕರಿಸಿದರು. ರಾಷ್ಟçಗೀತೆ ಜನ-ಗಣ-ಮನದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.
*ಸೆ.8 ರಂದು ಗೋಣಿಕೊಪ್ಪಲಿನಲ್ಲಿ ಜನಜಾಗೃತಿ* ಕೊಡವ ಲ್ಯಾಂಡ್ ಗೆ ಹಾಗೂ ಕೊಡವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಇಲ್ಲಿಯವರೆಗೆ ಬಿರುನಾಣಿ, ಕಡಂಗ, ಟಿ.ಶೆಟ್ಟಿಗೇರಿ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ನಾಪೋಕ್ಲು, ಮಾದಾಪುರ, ಸುಂಟಿಕೊಪ್ಪ ಮತ್ತು ಸಿದ್ದಾಪುರದಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸಿ ಜನಜಾಗೃತಿ ಮೂಡಿಸಲಾಗಿದೆ. ಸೆ.8 ರಂದು ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪಲಿನಲ್ಲಿ 12ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು. ಬಿದ್ದಂಡ ಉಷಾ ದೇವಮ್ಮ, ಮುದ್ದಿಯಡ ಲೀಲಾವತಿ, ಬೊಳ್ಳಂಡ ಸೌಮ್ಯಾ ಪೂವಯ್ಯ, ಪಾಂಡಂಡ ಗೊಂಬೆ ಪ್ರಕಾಶ್, ಕೋಳೆರ ಟೀನ ರನ್ನ, ಪಾಲಂಧೀರ ಗಂಗಮ್ಮ, ದೇಯಂಡ ಶಾಂತಿ, ನೆಲ್ಲಮಕ್ಕಡ ಕಾವೇರಮ್ಮ, ಮುಂಡಂಡ ಲವ್ಲಿ, ಕರಿನೆರವಂಡ ಬೋಜಿ ಭೀಮಯ್ಯ, ಕರಿನೆರವಂಡ ಶಾಂತಿ, ಬಿದ್ದಂಡ ತಿಲಕ, ಬಿದ್ದಂಡ ಸುರಕ್ಷಿತಾ, ಕರಿನೆರವಂಡ ಜಯ, ಚಿಲ್ಲವಂಡ ರೇಖಾ ಹರೀಶ್, ಕೂತಂಡ ಅಕ್ಷಿತಾ ಲೋಕೇಶ್, ಪಾಂಡಂಡ ರಾಧಾ ದೇವಯ್ಯ, ಬೊಳ್ಳಚೆಟ್ಟಿರ ಯಮುನಾ ಪೂವಯ್ಯ, ಕಾಳೆಂಗಡ ರಮೇಶ್, ಮಾಚೆಟ್ಟಿರ ಚೋಟು ಕಾವೇರಪ್ಪ, ಮಾಳೇಟಿರ ಶ್ರೀನಿವಾಸ್, ಪಟ್ಟಡ ಚರ್ಮಣ, ನಿವೃತ್ತ ಎಸಿಎಫ್ ಮುಕ್ಕಾಟಿರ ಅಚ್ಚಪ್ಪ, ಲೆಫ್ಟಿನೆಂಟ್ ಕರ್ನಲ್ ಕರ್ತಮಾಡ ದೇವಯ್ಯ, ಕೋಳೇರ ರನ್ನ, ಬಯವಂಡ ಬೊಳ್ಳಿಯಪ್ಪ, ಕೋಳೇರ ರಜತ್, ಕೋಳೇರ ರತನ್, ಪಾಂಡಂಡ ಪ್ರಕಾಶ್, ಬೊಳ್ಳಂಡ ಪೂವಯ್ಯ, ಮುಕ್ಕಾಟಿರ ಅಯ್ಯಪ್ಪ, ಬಲ್ಲಟ್ಟಿಕಾಳಂಡ ಮಂದಣ್ಣ, ಚೆಂಗಂಡ ಚಾಮಿ, ಬೊಳ್ಳಚಂಡ ಮಂದಣ್ಣ, ಕೋಡಿರ ತಮ್ಮಯ್ಯ, ಅಲ್ಮಚಂಡ ಗಣಪತಿ, ಕುಲ್ಲಚಂಡ ಜಯ, ಮೇರಿಯಂಡ ಅರಸು, ಐಚೆಟ್ಟಿರ ರಂಜಿ ಕುಟ್ಟಯ್ಯ, ಐಚೆಟ್ಟಿರ ರೊಮೆಲ್, ಬಲ್ಯಂಡ ಮುತ್ತಪ್ಪ, ಮಾಳೆಯಂಡ ಹರಿ, ಬಟ್ಟಿಯಂಡ ಜಾಲು ಭೀಮಯ್ಯ, ಕ್ಯಾಪ್ಟನ್ ಬಿದ್ದಂಡ ನಾಣಿ ದೇವಯ್ಯ, ಬಲ್ಲಚಂಡ ಸಂಪತ್, ಪಟ್ಟಚೆರವಂಡ ಹರಿ, ಮೇಕತಂಡ ಕುಶ ಬೋಪಯ್ಯ, ಕಾನತಂಡ ಪೂವಯ್ಯ, ಮುಂಡಂಡ ಪಳಂಗಪ್ಪ, ಕಳ್ಳೀರ ಉತ್ಸವ, ಚೇಂದ್ರಿಮಾಡ ಗಣೇಶ್, ಕರಿನೆರವಂಡ ಜಯ, ಕರಿನೆರವಂಡ ಧರಣು ತಮ್ಮಯ್ಯ, ಮಂಡೇಪಂಡ ರಿಶು, ಪುಟ್ಟಿಚಂಡ ಡಾನ್ ದೇವಯ್ಯ, ಚಂಬಂಡ ಜನತ್, ಬೇಪಡಿಯಂಡ ಬಿದ್ದಪ್ಪ, ಕಾಂಡೇರ ಸುರೇಶ್, ಅಜ್ಜಿಕುಟ್ಟಿರ ಲೋಕೇಶ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ಪಾರ್ವಂಗಡ ನವೀನ್, ಚೆಂಬಂಡ ಜಾಗೃತ ಬಿದ್ದಪ್ಪ, ಪೋರ್ಕಂಡ ಬೋಪಣ್ಣ, ಮಾದೆಯಂಡ ಹ್ಯಾರಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.