
ಮಡಿಕೇರಿ ಆ.28 NEWS DESK : ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪಂಜರಪೇಟೆಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ ಈ ಹಬ್ಬವು ನಾಡಿನ ಸರ್ವ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಹಾರೈಸಿದರು. ಈ ಸಂದರ್ಭ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.








