
ಮಡಿಕೇರಿ ಆ.28 NEWS DESK : ಚೆಟ್ಟಳ್ಳಿ ವಿನಾಯಕ ಯುವಕ ಸಂಘದ ವತಿಯಿಂದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅರ್ಚಕರಿಂದ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಮಹಾಂಗಳಾರತಿ ನಂತರ ಪ್ರಸಾದ ವಿತರಣೆ ನೆರವೇರಿತು.








