Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಮಹಾದೇಗುಲ»ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ
ಮಹಾದೇಗುಲ

ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ

ಆಗಷ್ಟ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರು ನಗರದ ಅತಿ ಶ್ರೇಷ್ಠ ಹಾಗೂ ಪವಿತ್ರವಾದ ಸ್ಥಳ. ಇದು ಬೆಂಗಳೂರಿನ ಹಳೆಯ ದೇವಸ್ಥಾನಗಳಲ್ಲಿ ಒಂದು. ಈ ದೇವಾಲಯವನ್ನು ಮೊದಲು ದಿಗಂಬರ ದೇವಸ್ಥಾನ ಎಂದು ಕರೆಯಲಾಗುತ್ತಿತ್ತು. ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಇದೆ. ಈ ದೇವಾಲಯದ ದೇವರು ತುಂಬಾ ಶಕ್ತಿಶಾಲಿಯಾಗಿರುವುದರಿಂದ ತಮ್ಮ ಎಲ್ಲಾ ಕೋರಿಕೆಗಳು ಈಡೇರುತ್ತವೆ ಎಂದು ಅನೇಕ ಭಕ್ತರು ನಂಬುತ್ತಾರೆ. ಇಡೀ ವರ್ಷ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ ಹಾಗೂ ಧಾರ್ಮಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಗಾಳಿ ಆಂಜನೇಯ ದೇವರ ಆಶೀರ್ವಾದ ಪಡೆಯಲು ಮತ್ತು ತಮ್ಮ ಜೀವನದ ತೊಂದರೆಗಳನ್ನು ನಿವಾರಿಸಿಕೊಳ್ಳಲು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ಆಂಜನೇಯನ ಆಶೀರ್ವಾದ ಪಡೆಯಲು ಭಕ್ತರು ಬೇರೆ ಬೇರೆ ಊರುಗಳು ಹಾಗೂ ರಾಷ್ಟ್ರಗಳಿಂದೆಲ್ಲಾ ಬರುತ್ತಾರೆ.

ಇತಿಹಾಸ ::  ಈ ದೇವಾಲಯವನ್ನು 1425ರಲ್ಲಿ ನಿರ್ಮಿಸಲಾಗಿದ್ದು ಇದು ಸುಮಾರು 600 ವರ್ಷಗಳ ಇತಿಹಾಸವನ್ನು ಹೊಂದಿದೆ. ವೃಷಭಾವತಿ ಮತ್ತು ಪಶ್ಚಿಮಾವತಿ ನದಿಗಳ ಸಂಗಮವಾದದ್ದರಿಂದ ವ್ಯಾಸರಾಜನು ಇಲ್ಲಿ ಪ್ರತಿಮೆಯನ್ನು ಸ್ಥಾಪಿಸಿದನೆಂದು ಪುರಾಣ ಹೇಳುತ್ತದೆ. ಇಲ್ಲಿರುವ ಆಂಜನೇಯನ ವಿಗ್ರಹವನ್ನು ಹಿಂದೂ ಸಂತ ಶ್ರೀ ವ್ಯಾಸರಾಜ ಸ್ಥಾಪಿಸಿದ್ದಾರೆ. ಅವರು 732 ಹನುಮಂತನ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಲಾಗುತ್ತದೆ, ಇವುಗಳಲ್ಲಿ ಗಾಳಿ ಆಂಜನೇಯ ದೇವಸ್ಥಾನ ಕೂದ ಒಂದು. ಬೆಂಗಳೂರು ನಗರ ಉದಿಸುವ ಮುನ್ನ ಸ್ವಾಮಿಯ ಮೂರ್ತಿ ಬಯಲಿನಲ್ಲಿ ಇದ್ದ ಕಾರಣ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ಗಾಳಿ ಎಂದರೆ ದುಷ್ಟಶಕ್ತಿ ಎಂದರ್ಥ. ದುಷ್ಟಶಕ್ತಿಗಳ ಅಧಿಪತಿಯಾದ ರಾವಣನ ಪುತ್ರ ಅಕ್ಷಾಸುರನನ್ನು ಮೆಟ್ಟಿ ನಿಂತಿದ್ದರಿಂದ ಈ ಹೆಸರು ಬಂದಿದೆ.

ದೇವಾಲಯದ ವಿವರ ::  ದೇವಾಲಯದ ಪೂಜಾ ಮೂರ್ತಿಯ ಶಿರದ ಎರಡೂ ಬದಿಗಳಲ್ಲಿ ಶಂಖ ಚಕ್ರಗಳಿವೆ. ಸಾಮಾನ್ಯವಾಗಿ ಬಹುತೇಕ ಆಂಜನೇಯನ ವಿಗ್ರಹಗಳ ಕೈಯಲ್ಲಿ ಗದೆ ಇರುತ್ತದೆ ಆದರೆ ಇಲ್ಲಿ ಪದ್ಮಕಮಲ ಇರುವುದು ಮತ್ತೊಂದು ವಿಶೇಷತೆಯಾಗಿದೆ. ಆಂಜನೇಯನ ಬಹುತೇಕ ದೇಗುಲಗಳಲ್ಲಿ ಮೂರ್ತಿಯ ಮುಖಕ್ಕೆ ಸಿಂಧೂರ ಲೇಪಿಸಲಾಗುತ್ತದೆ ಆದರೆ ಇಲ್ಲಿ ಪ್ರತಿ ಗುರುವಾರ ಸ್ವಾಮಿಯ ಇಡೀ ದೇಹಕ್ಕೆ ಸಿಂಧೂರವನ್ನು ಲೇಪಿಸಿ ಪೂಜೆ ಮಾಡಲಾಗುತ್ತದೆ. ಪ್ರತಿ ಮಂಗಳವಾರ ಮತ್ತು ಶನಿವಾರ ವಿಶೇಷ ಪೂಜೆ ನಡೆಯುತ್ತದೆ. ಗಾಳಿ ಆಂಜನೇಯ ದೇವಸ್ಥಾನ ಎತ್ತರದ ಗೋಪುರವನ್ನು ಹೊಂದಿದ್ದು ಇಲ್ಲಿ ದೇವರು ಪಶ್ಚಿಮಕ್ಕೆ ಮುಖಮಾಡಿ ಶ್ರೀರಾಮನ ಪರಿವಾರವನ್ನು ಕಾಣುತ್ತಿದ್ದಾನೆ. ಇಲ್ಲಿ ಪವಿತ್ರ ದಾರವನ್ನು ಭಕ್ತರಿಗೆ ಪ್ರಸಾದ ಎಂದು ನೀಡಲಾಗುತ್ತದೆ. ಇಲ್ಲಿ ಭಗವಂತನ ಬಾಲದ ಕೊನೆಯಲ್ಲಿ ಒಂದು ಗಂಟೆಯನ್ನು ಕಟ್ಟಿದ್ದು ಇದು ಶ್ರೀ ವ್ಯಾಸರಾಜರ ಶಾಂತಿ ಶೈಲಿಯನ್ನು ಸೂಚಿಸುತ್ತದೆ. ಆಂಜನೇಯನ ವಿಗ್ರಹದ ಎಡಗೈ ಸೊಂಟದ ಮೇಲೆ ವಿಶ್ರಾಂತಿ ಪಡೆಯುತ್ತಾ ಹೂವನ್ನು ಹಿಡಿದಿದೆ ಹಾಗೂ ಬಲಗೈಯಲ್ಲಿ ಅಭಯ ಮುದ್ರೆಯನ್ನು ಹಿಡಿದು ತನ್ನ ಎಲ್ಲಾ ಭಕ್ತರಿಗೆ ಆಶೀರ್ವಾದ ನೀಡುತ್ತಿದೆ.

ದೇವಾಲಯದ ಮಹತ್ವ ;:  ಗಾಳಿ ಆಂಜನೇಯ ದೇವಾಲಯದ ಅನನ್ಯತೆಯೆಂದರೆ ರಥ ಯಾತ್ರೆ. ಇದು ಕಳೆದ 120 ವರ್ಷಗಳಿಂದ ನಡೆಯುತ್ತಿದೆ. ಈ ಸಮಯದಲ್ಲಿ ಬಹಳಷ್ಟು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ 135 ವರ್ಷಗಳಿಂದ ಶ್ರೀ ರಾಮ ನವಮಿ ಸಂದರ್ಭದಲ್ಲಿ 9 ದಿನಗಳ ಕಾಲ ಶ್ರೀ ಪಾಂಚರಾತ್ರಾಗಮ ಬ್ರಹ್ಮರಥೋತ್ಸವ ವಿಜ್ರಂಭಣೆಯಿಂದ ನಡೆಯುತ್ತದೆ. ಹನುಮ ಜಯಂತಿ ಹಾಗೂ ಭೀಮನ ಅಮಾವಾಸ್ಯೆಯಂದು ವಿಶೇಷ ಪೂಜೆ ನಡೆಯುತ್ತದೆ. ದೇವಸ್ಥಾನದಲ್ಲಿ ಪ್ರತಿ ಶನಿವಾರ ವಿಶೇಷ ಅಭಿಷೇಕ, ಪೂಜೆ, ಸಂಗೀತ, ಭಜನೆ, ಪ್ರಸಾದ ವಿಸ್ತರಣೆ ಮುಂತಾದವು ಇರುತ್ತದೆ. ಅಗಸ್ಟ್ ತಿಂಗಳಲ್ಲಿ ಈ ದೇವಸ್ಥಾನದ ದೇವರಿಗೆ ಬೆಣ್ಣೆ ಅಲಂಕಾರವನ್ನು ನಡೆಸಲಾಗುತ್ತದೆ. ಈ ಸಮಯದಲ್ಲಿ ದೈತ್ಯಾಕಾರದ ವಿಗ್ರಹವನ್ನು ಬೆಣ್ಣೆಯಿಂದ ಅಲಂಕರಿಸಲಾಗುತ್ತದೆ. ಬೆಣ್ಣೆಯನ್ನು ಸಾವಿರಾರು ಭಕ್ತರು ದಾನ ಮಾಡುತ್ತಾರೆ. ಹನುಮಾನ್ ಜಯಂತಿ ಸಮಯದಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಕೋತಿಗಳಿಗೆ ಹಣ್ಣುಗಳನ್ನು ನೀಡಲಾಗುತ್ತದೆ. ಗಾಳಿ ಆಂಜನೇಯ ದೇವಸ್ಥಾನದಲ್ಲಿ ಶ್ರೀ ವೇಣುಗೋಪಾಲಸ್ವಾಮಿ, ಶ್ರೀರಾಮ, ಗಣಪತಿ ಮತ್ತು ನವಗ್ರಹ ದೇವಾಲಯಗಳಿವೆ. ಈ ದೇವಾಲಯದಲ್ಲಿ ಸಾಕಷ್ಟು ರಾಜಕಾರಣಿ ಭಕ್ತರಿದ್ದಾರೆ. ಭಕ್ತರು ಅವರ ಕೆಲಸದ ಕ್ಷೇತ್ರಗಳಲ್ಲಿ ತಮ್ಮ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಮಕ್ಕಳಿಗೆ ಕಾಯಿಲೆಗಳನ್ನು ಗುಣಪಡಿಸಲು ಇಲ್ಲಿ ಭೇಟಿನೀಡುತ್ತಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ

ಡಿಸೆಂಬರ್ 22, 2025

ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ

ನವೆಂಬರ್ 29, 2025

ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು

ಅಕ್ಟೋಬರ್ 22, 2025

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 14: ಕೊಡಗು ಜಿಲ್ಲೆಯ ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಕೊಡಗು…

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.