
ಕುಶಾಲನಗರ ಆ.28 NEWS DESK : ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಸಿ.ಕೆ.ಮಲ್ಲಪ್ಪ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಆಡಳಿತ ಮಂಡಳಿಯೊಂದಿಗೆ ಸಂವಾದ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಭೌತಿಕವಾಗಿ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಧಿಕಾರಿಗಳ ತಂಡ ವೈಯಕ್ತಿಕ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸುಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಧಿಕಾರಿಗಳಾದ ಪರಮೇಶ್ ಕುಮಾರ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾರಾಯಣ ಮೂರ್ತಿ ಅವರು ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.









