Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

ಆಗಷ್ಟ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಆ.29 NEWS DESK : ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ ನೀಡಿ, ಸನ್ಮಾನಿಸಿ ಅವರು ಮಾತನಾಡಿದರು. ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ದೊರಕಲೆಂದು ಹಾರೈಸಿದರು. 2015 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಿನ್ನದ ಪದಕ ಗೆದ್ದ ವಿಜೇತರಿಗೆ 5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ 3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಲಕ್ಷ ರೂ. ನೀಡುವುದಾಗಿ ತಿಳಿಸಲಾಗಿತ್ತು, ನಮ್ಮ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯವರು ಪದಕ ವಿಜೇತರಿಗೆ ನೀಡಲಾಗುವ ನಗದು ಪುರಸ್ಕಾರವನ್ನು ಹೆಚ್ಚಿಸಬೇಕೆಂದು ಕೋರಿದ್ದರು. ಅದರಂತೆ ಮನವಿಯನ್ನು ಪುರಸ್ಕರಿಸಿ, ಗೆದ್ದ ಪ್ರತಿಯೊಬ್ಬ ಪದಕ ವಿಜೇತರಿಗೂ ನಗದು ಪುರಸ್ಕಾರವನ್ನು ನೀಡಲು ತೀರ್ಮಾನಿಸಿರುವುದಾಗಿ ಹೇಳಿದರು. ಕ್ರೀಡಾಪಟುಗಳು ಪದಕ ಗೆಲ್ಲಲು ಸಹಕರಿಸುವ ಮ್ಯಾನೇಜರ್ ಹಾಗೂ ತರಬೇತುದಾರರಿಗೂ ನಗದು ಪುರಸ್ಕಾರವನ್ನು ನೀಡಲಾಗುವುದು. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಕ್ರೀಡಾಪಟುಗಳ ಎಲ್ಲ ಬೇಡಿಕೆಗಳನ್ನು ಮುಂಚಿನಿಂದಲೂ ಈಡೇರಿಸುತ್ತಾ ಬಂದಿದ್ದೇನೆ. ಕ್ರೀಡೆಯೊಂದಿಗೆ ಶಿಕ್ಷಣವನ್ನೂ ಪಡೆಯಬೇಕು. ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್ ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ. ಕ್ರೀಡಾಪಟು ಸುನಿಲ್ ಭಾಟಿಯವರು ಗ್ರೂಪ್ -1 ಸ್ಥಾನ ಸಿಕ್ಕಿದ್ದು ಪೋಲಿಸ್ ಅಬಕಾರಿ ಇಲಾಖೆಯಲ್ಲಿ ಡಿವೈಎಸ್‌ಪಿಯಾಗಿದ್ದಾರೆ. ಬಡ್ತಿಯಾಗಿ ಉನ್ನತ ಹುದ್ದೆಗೆ ಹೋಗುವ ಅವಕಾಶಗಳೂ ಇರುತ್ತವೆ ಎಂದರು. ಬಜೆಟ್ ನಲ್ಲಿ ಘೋಷಿಸಿರುವಂತೆ ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ರೂ., ಬೆಳ್ಳಿ ಗೆದ್ದವರಿಗೆ 3 ಕೋಟಿ ರೂ. ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು. ಬಹುಮಾನ ಗೆದ್ದರೆ ಅದಕ್ಕಿಂತ ಸಂತೋಷ ಕೊಡುವ ವಿಚಾರ ಮತ್ತೊಂದಿಲ್ಲ. ಸೋಲು – ಗೆಲುವು ಇದ್ದೆ ಇರುತ್ತದೆ, ಆದರೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸಾಮರ್ಥ್ಯವಿದ್ದರೆ ಮಾತ್ರ ಒಲಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯ. ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕೆಂದು ಸಲಹೆ ನೀಡಿದರು. :: ನಾಡಿನ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡಬೇಕು ::  ದೇಶದಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಕ್ರೀಡಾಪಟುಗಳು ಇನ್ನಷ್ಟು ಎತ್ತರಕ್ಕೆ ಹೋಗಬೇಕು. ಕಾಮನ್ ವೆಲ್ತ್ ಗೇಮ್ಸ್, ಒಲಂಪಿಕ್ಸ್, ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಬೇಕು. ಶ್ರದ್ಧೆ, ಏಕಾಗ್ರತೆಯಿಂದ ಪ್ರಯತ್ನ ಮಾಡಿದರೆ ಕಷ್ಟವೇನಿಲ್ಲ. ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರೆ ಎಲ್ಲವೂ ಸಾಧ್ಯ. ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಅರವತ್ತು ಕ್ರೀಡಾಪಟುಗಳಿಗೆ ತರಬೇತಿ ನೀಡಲು 10 ಲಕ್ಷ ರೂ. ಗಳನ್ನು ಸರ್ಕಾರ ನೀಡುತ್ತಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.